ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಆಡಿಸದ್ದಕ್ಕೆ ಕಾರಣ ಹೇಳಿದ ಕೋಚ್
ಬಹುನಿರೀಕ್ಷಿತ ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ನಿರಾಸೆಯನ್ನು ಅನುಭವಿಸಿದೆ. ಈ ಸರಣಿಯ ಮೂಲಕ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಆಸೆ ಇತ್ತು. ಆದರೆ ಐರ್ಲೆಂಡ್‌ನಲ್ಲಿ ಆಡಿದ ಎರಡೂ ಪಂದ್ಯಗಳಲ್ಲಿ ವೈಭವ್ ಅವರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ವೈಭವ್, ಐರ್ಲೆಂಡ್ ವಿರುದ್ಧ ಎರಡೂ ಪಂದ್ಯಗಳಲ್ಲಿ ಬೆಂಚ್ ಕಾದಿದ್ದಾರೆ. ಭಾರತ ತಂಡವನ್ನು ಮಣಿಸಿದ ಐರ್ಲೆಂಡ್ ಇತಿಹಾಸ ನಿರ್ಮಿಸಿತ್ತು.
ಬೆಲ್‌ಫಾಸ್ಟ್‌ನಲ್ಲಿ ನಡೆದ ಎರಡೂ ಪಂದ್ಯಗಳಲ್ಲೂ ಭಾರತದ ಪರ ಆರಂಭಿಕರಾಗಿ ಕಾಣಿಸಿಕೊಂಡರು. ಅಭಿಷೇಕ್ ಶರ್ಮಾ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು. ಆದರೆ ಎರಡನೇ ಪಂದ್ಯದಲ್ಲಿ ಇವರು ಸಹ ರನ್ ಕಲೆ ಹಾಕುವಲ್ಲಿ ವಿಫಲರಾದರು. ಸಂಜು ಸ್ಯಾಮ್ಸನ್ ಐರ್ಲೆಂಡ್ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದರು. ಈ ಇಬ್ಬರೂ ಆಟಗಾರರು ನಿರೀಕ್ಷೆಗೆ ತಕ್ಕನಾದ ಆಟವನ್ನು ಆಡಲಿಲ್ಲ ಹೀಗಾಗಿ ವೈಭವ್ ಸೂರ್ಯವಂಶಿಗೆ ಅವಕಾಶ ನೀಡಬೇಕಿತ್ತು ಎಂಬುದು ಅಭಿಮಾನಿಗಳ ವಾದ.

ಐರ್ಲೆಂಡ್‌ನಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲಿನ ನಂತರ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಮಹತ್ವದ ಹೇಳಿಕೆ ನೀಡಿದ್ದಾರೆ. ಐರ್ಲೆಂಡ್ ವಿರುದ್ಧದ ಎರಡೂ ಪಂದ್ಯಗಳನ್ನು ವೈಭವ್ ಸೂರ್ಯವಂಶಿ ಏಕೆ ತಪ್ಪಿಸಿಕೊಂಡರು ಎಂಬುದನ್ನು ರಯಾನ್ ಟೆನ್ ಡೋಸ್ಚೇಟ್ ಬಹಿರಂಗಪಡಿಸಿದ್ದಾರೆ.
ಇದೇ ಕಾರಣಕ್ಕೆ ಅವಕಾಶ ಲಭಿಸಲಿಲ್ಲ
15 ವರ್ಷದ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಡಲು ಸಂಪೂರ್ಣ ಸಿದ್ಧರಾಗಿದ್ದಾರೆ. ಭರವಸೆಯ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ನಾವು ನಿರ್ಲಕ್ಷಿಸಲು ಆಗುವುದಿಲ್ಲ. ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್ ಸ್ಥಿರ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಿಂಚಿದ್ದಾರೆ. ಇನ್ನು ಇವರು ಐಪಿಎಲ್‌ನಲ್ಲೂ ರನ್ ಕಲೆ ಹಾಕಿದ್ದಾರೆ. ಅವರಿಗೆ ದೀರ್ಘಕಾಲ ಆಡಲು ಅವಕಾಶಗಳನ್ನು ನೀಡುವುದು ಮುಖ್ಯ. ವೈಭವ್, ಇತರರಂತೆ, ತಮ್ಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ ಎಂದು ರಯಾನ್ ಟೆನ್ ಡೋಸ್ಚೇಟ್ ತಿಳಿಸಿದ್ದಾರೆ.
ಬಿಹಾರದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಬಗ್ಗೆ ತಂಡ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ನಮ್ಮ ತಂಡದ ಚಿತ್ತ ಜುಲೈ 1 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ಪ್ರವಾಸದ ಮೇಲೆ ನೆಟ್ಟಿದೆ ಎಂದು ಕೋಚ್ ರಯಾನ್ ಟೆನ್ ಸ್ಪಷ್ಟ ಪಡಿಸಿದ್ದಾರೆ. ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications