IND vs NZ: ಟೆಸ್ಟ್ ಸರಣಿಗೂ ಮುನ್ನ ಯಶ್ ದಯಾಳ್‌ಗೆ ಕೈ ಕೊಟ್ಟ ಅದೃಷ್ಟ
ಬಾಂಗ್ಲಾದೇಶ ನಂತರ ಇದೀಗ ನ್ಯೂಜಿಲೆಂಡ್ ತಂಡ ಭಾರತಕ್ಕೆ ಪ್ರವಾಸ ಕೈಗೊಂಡಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವೆ 3 ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಪ್ರಾರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಮ್ ಇಂಡಿಯಾವನ್ನು ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ ರಾತ್ರಿ ಪ್ರಕಟಿಸಿದೆ.
ಇತ್ತೀಚೆಗೆ ಮುಕ್ತಾಯವಾದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ ಭಾರತ ತಂಡವನ್ನೇ ರೋಹಿತ್ ಶರ್ಮಾ ನಾಯಕನಾಗಿ ಮುನ್ನಡೆಸಲಿದ್ದಾರೆ. ಆದರೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದ ಎಡಗೈ ವೇಗದ ಬೌಲರ್ ಯಶ್ ದಯಾಲ್ ಅವರನ್ನು ಆಯ್ಕೆಗಾರರು ಹೊರಗಿಟ್ಟಿದ್ದಾರೆ. ಬಾಂಗ್ಲಾದೇಶ ವಿರುದ್ಧ ಆಡಿದ 2 ಟೆಸ್ಟ್ ಪಂದ್ಯಗಳಲ್ಲಿ ಯಶ್ ದಯಾಳ್ ಅವರಿಗೆ ಆಡಲು ಅವಕಾಶ ಸಿಕ್ಕಿರಲಿಲ್ಲ.

ಯಶ್ ದಯಾಳ್ ಹೊರಗುಳಿದಿದ್ದೇಕೆ?
ಬಾಂಗ್ಲಾದೇಶ ವಿರುದ್ಧ ಟೆಸ್ಟ್ ಸರಣಿಯಲ್ಲಿ ಯಶ್ ದಯಾಳ್ ಅವರಿಗೆ ಬೆಂಚ್ ಕಾಯುವ ಪರಿಸ್ಥಿತಿ ಎದುರಾಗಿತ್ತು. ನಂತರ ಅವರನ್ನು ಇರಾನಿ ಕಪ್ ಟೂರ್ನಿಗಾಗಿ ಟೀಮ್ ಇಂಡಿಯಾದಿಂದ ಬಿಸಿಸಿಐ ಬಿಡುಗಡೆ ಮಾಡಿತ್ತು. ಇರಾನಿ ಕಪ್ ಟೂರ್ನಿಯಲ್ಲಿ ಯಶ್ ದಯಾಳ್ ರೆಸ್ಟ್ ಆಫ್ ಇಂಡಿಯಾ ಪರ ಆಡಿದ್ದರು. ಈ ಟೂರ್ನಿಯಲ್ಲಿ ಮುಂಬೈ ವಿರುದ್ಧ ರೆಸ್ಟ್ ಆಫ್ ಇಂಡಿಯಾ ಸೋಲು ಕಂಡಿತ್ತು. ಇದಾದ ನಂತರ ಆರಂಭವಾದ ರಣಜಿ ಟ್ರೋಫಿ ಪಂದ್ಯದ ವೇಳೆ ಯಶ್ ದಯಾಳ್ ಗಾಯಗೊಂಡಿದ್ದಾರೆ.
ಲಕ್ನೋದಲ್ಲಿ ಬಂಗಾಳ ಮತ್ತು ಉತ್ತರ ಪ್ರದೇಶ ನಡುವೆ ರಣಜಿ ಟ್ರೋಫಿಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲನೇ ದಿನದಾಟ ಶುಕ್ರವಾರದಂದು ಉತ್ತರ ಪ್ರದೇಶ ತಂಡದ ಪರ ಆಡುತ್ತಿರುವ ಯಶ್ ದಯಾಲ್ ಭುಜದ ಗಾಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಶುಕ್ರವಾರ ರಾತ್ರಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಪ್ರಕಟವಾದ ಭಾರತ ತಂಡದಲ್ಲಿ ಯಶ್ ದಯಾಳ್ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಕೈ ಕೊಟ್ಟ ಅದೃಷ್ಟ
ಬಾಂಗ್ಲಾದೇಶ ಟೆಸ್ಟ್ ಸರಣಿ ನಂತರ ನ್ಯೂಜಿಲೆಂಡ್ ವಿರುದ್ಧ ಯಶ್ ದಯಾಲ್ ಪಾದಾರ್ಪಣೆ ಮಾಡುವ ನಿರೀಕ್ಷೆಯಿತ್ತು. ಆದರೆ ಗಾಯವು ಅವರಿಂದ ಸುವರ್ಣ ಅವಕಾಶವನ್ನು ಕಸಿದುಕೊಂಡಿದೆ. ಯಶ್ ದಯಾಳ್ ಯಾವುದೇ ಪಂದ್ಯವನ್ನು ಆಡದೆ ಟೆಸ್ಟ್ ತಂಡದಿಂದ ಹೊರಗುಳಿದಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಮುಂದಿನ ತಿಂಗಳು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿಯು 2024ರ ನವೆಂಬರ್ 22 ರಿಂದ 2025ರ ಜನವರಿ 7 ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಯಶ್ ದಯಾಳ್ ಟೀಮ್ ಇಂಡಿಯಾಗೆ ಮರಳುವುದು ಮೊಹಮ್ಮದ್ ಶಮಿ ಅವರ ಫಿಟ್ನೆಸ್ ಮೇಲೆ ನಿರ್ಧಾರವಾಗಲಿದೆ. ಒಂದು ವೇಳೆ ಮೊಹಮ್ಮದ್ ಶಮಿ ಅವರು ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದರೆ, ಯಶ್ ದಯಾಳ್ ಟೆಸ್ಟ್ ತಂಡದಿಂದ ಹೊರಗುಳಿಯಬೇಕಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications