
ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯುತ್ತಿದ್ದು ಎರಡನೇ ದಿನದಾಟ ಆರಂಭವಾಗಿದೆ. ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದ ಇಂಗ್ಲೆಂಡ್ ತಂಡ ಆರಂಭಿಕ ಕುಸಿತದ ನಂತರ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಉತ್ತಮ ಹೋರಾಟದ ಕಾರಣದಿಂದ ಚೇತರಿಕೆ ಕಂಡಿದೆ. ಜಾನಿ ಬೈರ್‌ಸ್ಟೋವ್ ಭರ್ಜರಿ ಶತಕ ಗಳಿಸಿದ್ದು ಬೆನ್ ಫೋಕ್ಸ್ ಉತ್ತಮ ಜೊತೆಯಾಟ ನೀಡಿದ್ದರು. ನಂತರ ಕ್ರಿಸ್ ವೀಕ್ಸ್ ಬೆನ್ ಸ್ಟೋಕ್ಸ್‌ಗೆ ಸಾಥ್ ನೀಡಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಒಂದಾದ ನಂತರ ಮತ್ತೊಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತ್ತು. ಕೇವಲ 48 ರನ್‌ಗಳಿಗೆ ಅಗ್ರ ಕ್ರಮಾಂಕದ ನಾಲ್ವರು ಆಟಗಾರರನ್ನು ಇಂಗ್ಲೆಂಡ್ ಕಳೆದುಕೊಂಡಿತ್ತು. ವೆಸ್ಟ್ ಇಂಡೀಸ್ ತಂಡದ ಬೌಲರ್‌ಗಳಾದ ಕೇಮರ್ ರೋಚ್, ಸೈಡೆನ್ ಸೀಲ್ಸ್ ಹಾಗೂ ಜೇಸನ್ ಹೋಲ್ಡರ್ ಇಂಗ್ಲೆಂಡ್ ದಾಂಡಿಗರಿಗೆ ಸಿಂಹಸ್ವಪ್ನವಾದರು. ಆದರೆ ಜಾನಿ ಬೈರ್‌ಸ್ಟೋವ್ ಹಾಗೂ ಬೆನ್ ಫೋಕ್ಸ್ 99 ರನ್‌ಗಳ ಜೊತೆಯಾಟ ನೀಡುವ ಮೂಲಕ ಕುಸಿತಕ್ಕೆ ತಡೆಯೊಡ್ಡಿದರು.
ಇನ್ನು ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಈ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುವ ಮುನ್ನ ಟಿ20 ಸರಣಿಯಲ್ಲಿ ಕಣಕ್ಕಿಳಿದಿದ್ದವು. ಈ ಚುಟುಕು ಸರಣಿಯಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಮೇಲುಗೈ ಸಾಧಿಸಿದ್ದು ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೂರು ಪಂದ್ಯಗಳನ್ನು ವಿಂಡೀಸ್ ಪಡೆ ಗೆದ್ದಿದ್ದರೆ ಎರಡು ಪಂದ್ಯ ಮಾತ್ರ ಇಂಗ್ಲೆಂಡ್ ಗೆದ್ದುಕೊಂಡಿತ್ತು. ಹೀಗಾಗಿ ಸರಣಿ 3-2 ಅಂತರದಿಂದ ವಿಂಡೀಸ್ ಪಾಲಾಗಿತ್ತು.
Live ಸ್ಕೋರ್‌ಕಾರ್ಡ್ ಹೀಗಿದೆ:
ಇನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದ್ದು ಮೊದಲ ಪಂದ್ಯ ಆಂಟಿಗುವಾದಲ್ಲಿ ನಡೆಯುತ್ತಿದೆ. ಎರಡನೇ ಪಂದ್ಯ ಬಾರ್ನಡೋಸ್‌ನ ಕೆಲ್ಲಿಂಗ್ಟನ್ ಓವಲ್‌ನಲ್ಲಿ ನಡೆಯಲಿದ್ದು ಮಾರ್ಚ್ 16ರಿಂದ ಆರಂಭವಾಗಲಿದೆ. ಮೂರನೇ ಪಂದ್ಯ ಮಾರ್ಚ್ 24ರಿಂದ ಗ್ರೆನೆಡಾದ ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.
ವೆಸ್ಟ್ ಇಂಡೀಸ್ ಪ್ಲೇಯಿಂಗ್ XI: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜಾನ್ ಕ್ಯಾಂಪ್‌ಬೆಲ್, ಶಮರ್ ಬ್ರೂಕ್ಸ್, ಎನ್ಕ್ರುಮಾ ಬೋನರ್, ಜರ್ಮೈನ್ ಬ್ಲಾಕ್‌ವುಡ್, ಜೇಸನ್ ಹೋಲ್ಡರ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಕೆಮರ್ ರೋಚ್, ಅಲ್ಜಾರಿ ಜೋಸೆಫ್, ವೀರಸಾಮಿ ಪರ್ಮಾಲ್, ಜೇಡನ್ ಸೀಲ್ಸ್
ಇಂಗ್ಲೆಂಡ್ ಪ್ಲೇಯಿಂಗ್ XI: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಜೋ ರೂಟ್ (ನಾಯಕ), ಡೇನಿಯಲ್ ಲಾರೆನ್ಸ್, ಬೆನ್ ಸ್ಟೋಕ್ಸ್, ಜಾನಿ ಬೈರ್‌ಸ್ಟೋ, ಬೆನ್ ಫೋಕ್ಸ್ (WK), ಕ್ರಿಸ್ ವೋಕ್ಸ್, ಕ್ರೇಗ್ ಓವರ್‌ಟನ್, ಮಾರ್ಕ್ ವುಡ್, ಜ್ಯಾಕ್ ಲೀಚ್
ಬೆಂಚ್: ಸಾಕಿಬ್ ಮಹಮೂದ್