For Quick Alerts
ALLOW NOTIFICATIONS  
For Daily Alerts
 

Ind vs WI: ಟೀಮ್ ಇಂಡಿಯಾ ಪರವಾಗಿ ಇಬ್ಬರು ಯುವ ಆಟಗಾರರ ಪದಾರ್ಪಣೆ

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಡೊಮೆನಿಕಾದಲ್ಲಿ ಆರಂಭವಾಗಿದ್ದು ರೊಸೆವ್‌ನ ವಿಂಡ್ಸರ್ ಪಾರ್ಕ್‌ನಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಪದಾರ್ಪಣೆ ಮಾಡಿದ್ದು ಕುತೂಹಲ ಮೂಡಿಸಿದೆ. ಯುವ ಆಟಗಾರಾದ ಯಶಸ್ವಿ ಜೈಸ್ವಾಲ್ ಹಾಗೂ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಮೊದಲ ಬಾರಿಗೆ ಕಣಕ್ಕಿಳಿಯುತ್ತಿರುವ ಇಬ್ಬರು ಆಟಗಾರರು.

ಪಂದ್ಯದ ಆರಂಭಕ್ಕೂ ಮುನ್ನವೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಪದಾರ್ಪಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಅದ್ಭುತ ಫಾರ್ಮ್‌ನಲ್ಲಿರುವ ಯಶಸ್ವಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 80ರ ಸರಾಸರಿಯಲ್ಲಿ ಬ್ಯಾಟಿಂಗ್ ನಡೆಸಿದ್ದಲ್ಲದೆ ಒಂಬತ್ತು ಶತಕಗಳನ್ನು ಗಳಿಸಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಜೈಸ್ವಾಲ್ ಐಪಿಎಲ್ 2023 ರಲ್ಲಿ ಪ್ರಮುಖ ಸ್ಕೋರರ್ ಕೂಡ ಆಗಿದ್ದರು.

WI vs Ind 1st Test: Yashasvi Jaiswal and Ishan Kishan make Test debuts in Dominica test

ಮತ್ತೊಮದೆಡೆ ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಿದ ಕೆಎಸ್ ಭರತ್ ಈ ಪಂದ್ಯದಲ್ಲಿ ಹೊರಗುಳಿದಿದ್ದಾರೆ. ಅವರ ಬದಲಿಗೆ ಯುವ ಆಟಗಾರ ಇಶಾನ್ ಕಿಶನ್ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ರೋಹಿತ್ ಶರ್ಮಾ ಜೊತೆಗೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ಶುಬ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಶುಬ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಸ್ಥಾನವನ್ನು ತುಂಬಲಿದ್ದು ಈ ವಿಚಾರವನ್ನು ಕೂಡ ರೋಹಿತ್ ಶರ್ಮಾ ಪಂದ್ಯದ ಹಿಂದಿನ ದಿನ ಮಾಧ್ಯಮಗಳ ಜೊತೆಗೆ ಮಾಹಿತಿ ಹಂಚಿಕೊಂಡಿದ್ದರು.

ಶುಬ್ಮನ್ ಗಿಲ್ ಭಾರತದ ಪರವಾಗಿ 16 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದು ಆರಂಭಿಕನಾಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಎಲ್ಲಾ ಮಾದರಿಯಲ್ಲಿಯೂ ಗಿಲ್ ತಂಡದ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತ ಈ ಪಂದ್ಯದಲ್ಲಿ ಎಡಗೈ ಬಲಗೈ ಸಂಯೋಜನೆಯೊಂದಿಗೆ ಕಣಕ್ಕಿಳಿಯಲು ಬಯಸುತ್ತದೆ ಎಂದು ನಾಯಕ ರೋಹಿತ್ ಶರ್ಮಾ ಮಾಹಿತಿ ನೀಡಿದ್ದರು.

ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಜೋಮೆಲ್ ವಾರಿಕನ್
ಬೆಂಚ್: ಕಿರ್ಕ್ ಮೆಕೆಂಜಿ, ಶಾನನ್ ಗೇಬ್ರಿಯಲ್

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಶ್ರೀಕರ್ ಭರತ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಮುಖೇಶ್ ಕುಮಾರ್

Story first published: Wednesday, July 12, 2023, 20:04 [IST]
Other articles published on Jul 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+