For Quick Alerts
ALLOW NOTIFICATIONS  
For Daily Alerts
 

Fab 4 ಅಲ್ಲ ಈಗ Fab 3: ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೂ ಮುನ್ನ ಕೊಹ್ಲಿ ಬಗ್ಗೆ ಚೋಪ್ರ ಖಡಕ್ ವಿಮರ್ಶೆ

ಟೀಮ್ ಇಂಡಿಯಾ ಹಿರಿಯ ಆಟಗಾರ ವಿರಾಟ್ ಕೊಹ್ಲಿ ಈಗ Fab 4ನಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದು ಈಗ ಇರುವುದು Fab 3 ಮಾತ್ರ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಆಕಾಶ್ ಚೋಪ್ರ. ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಆರಂಭಕ್ಕೆ ಮೂರ್ನಾಲ್ಕು ದಿನಗಳು ಮಾತ್ರವೇ ಇರುವಾಗ ಈ ಹಿನ್ನೆಲೆಯಲ್ಲಿ ಆಕಾಶ್ ಚೋಪ್ರ ಮಾತನಾಡಿದ್ದು ಕೊಹ್ಲಿ ಪ್ರದರ್ಶನದ ಬಗ್ಗೆ ವಿಮರ್ಶೆ ಮಾಡಿದ್ದಾರೆ.

ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಆಕಾಶ್ ಚೋಪ್ರ ಟೀಮ್ ಇಂಡಿಯಾ ಮಾಜಿ ನಾಯಕನ ಪ್ರದರ್ಶನದ ಬಗ್ಗೆ ಈ ಮಾತುಗಳನ್ನಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಒಬ್ಬರಿಗೊಬ್ಬರು ಪೈಪೋಟಿಯ ಬ್ಯಾಟಿಂಗ್ ಪ್ರದರ್ಶಿಸಿ ಅಬ್ಬರಿಸುತ್ತಾ ಬಂದಿರುವ ಭಾರತದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್, ಇಂಗ್ಲೆಂಡ್‌ನ ಜೋ ರೂಟ್ ಹಾಗೂ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಅವರನ್ನೂ fabulous 4 ಅಥವಾ Fab 4 ಎಂದು ಕರೆಯಲಾಗುತ್ತದೆ.

WI vs IND: Aakash Chopra criticize Virat Kohli said no more Fab 4 now it is Fab 3

"ಒಂದು ಸಂದರ್ಭದಲ್ಲಿ ವಿರಾಟ್ ಕೊಹ್ಲಿ, ಜೋ ರೂಟ್, ಸ್ಟೀವ್ ಸ್ಮಿತ್ ಮತ್ತು ಕೇನ್ ವಿಲಿಯಮ್ಸನ್ ಖಂಡಿತವಾಗಿಯೂ ಫ್ಯಾಬ್ 4 ಆಗಿದ್ದರು. ಡೇವಿಡ್ ವಾರ್ನರ್ ಹೇಸರು ಕೂಡ ಆ ಪಟ್ಟಿಯಲ್ಲಿ ಕೇಳಿ ಬರುತ್ತಿತ್ತು. 2014-2019ರ ಅವಧಿಯ ಟೆಸ್ಟ್ ಮಾದರಿಯ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ಆದರೆ ಈಗ ನಾವು Fab 4 ಹೊಂದಿಲ್ಲ. ಬದಲಾಗಿ Fab 3 ಮಾತ್ರವೇ ಇದೆ" ಎಂದಿದ್ದಾರೆ ಆಕಾಶ್ ಚೋಪ್ರ.

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಹೆಸರು ಈ ಪಟ್ಟಿಯಿಂದ ಹೊರಬಿದ್ದಿದೆ ಎಂದಿದ್ದಾರೆ ಆಕಾಶ್ ಚೋಪ್ರ. "ವಿರಾಟ್ ಕೊಹ್ಲಿ ಈ ಪಟ್ಟಿಯಿಂದ ಹೊರಬಿದ್ದಿದ್ದಾರೆ. ಅವರು 25 ಪಂದ್ಯಗಳನ್ನು ಆಡಿದ್ದು 1277 ರನ್‌ಗಳನ್ನು ಗಳಿಸಿದ್ದಾರೆ. ಇದು ಅವರಿಗೆ ಒಪ್ಪುತ್ತಿಲ್ಲ. ಈ ಅವಧಿಯಲ್ಲಿ ಅವರು 29.69ರ ಸರಾಸರಿಯನ್ನು ಹೊಂದಿದ್ದು ಈ ವರ್ಷ ಆಸ್ಟ್ರೇಲಿಯಾ ವಿರುದ್ಧದ ಅಹ್ಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಕೇವಲ ಒಂದು ಶತಕವನ್ನು ಮಾತ್ರವೇ ಬಾರಿಸಿದ್ದಾರೆ" ಎಂದಿದ್ದಾರೆ ಆಕಾಶ್ ಚೋಪ್ರ.

ವಿರಾಟ್ ಕೊಹ್ಲಿ 2019ರ ವರ್ಷಾಂತ್ಯದ ಬಳಿಕ ಫಾರ್ಮ್ ಕಳೆದುಕೊಂಡಿದ್ದು ಎಲ್ಲಾ ಮಾದರಿಯಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದರು. ಆದರೆ ಕಳೆದ ವರ್ಷ ಕೊಹ್ಲಿ ಫಾರ್ಮ್ ಕಂಡುಕೊಂಡಿದ್ದು ಬಳಿಕ ಎಲ್ಲಾ ಮಾದರಿಯಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದ ಕೊಹ್ಲಿ ಒಂದು ಶತಕ ಸಿಡಿಸಿ ಮಿಂಚಿದ್ದರು. ಆದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ನಿರೀಕ್ಷಿತ ಪ್ರದರ್ಶನ ಬಾರಲಿಲ್ಲ.

ಇದೀಗ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದು ಎಲ್ಲಾ ಮಾದರಿಯಲ್ಲಿಯೂ ಸರಣಿಯನ್ನಾಡಲಿದೆ. ಮೊದಲಿಗೆ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದ್ದು ಜುಲೈ 12ರಿಂದ ಈ ಸರಣಿ ಆರಂಭಗೊಳ್ಳಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಸೇರಿದಂತೆ ಅನುಭವಿ ಆಟಗಾರರ ಮೇಲೆ ಸಾಕಷ್ಟು ನಿರೀಕ್ಷೆಯಿದೆ.

ಟೀಮ್ ಇಂಡಿಯಾ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

Story first published: Sunday, July 9, 2023, 17:54 [IST]
Other articles published on Jul 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+