Ind vs WI: ಅನಿಲ್ ಕುಂಬ್ಳೆ ಹೆಸರಿನಲ್ಲಿದ್ದ ಬೃಹತ್ ದಾಖಲೆ ಸರಿಗಟ್ಟಿದ ಆರ್ ಅಶ್ವಿನ್
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡು ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಇನ್ನೂ ಎರಡು ದಿನಗಳು ಬಾಕಿಯುವಂತೆಯೇ ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 141 ರನ್‌ಗಳ ಅಂತರದ ಗೆಲುವು ತನ್ನದಾಗಿಸಿಕೊಂಡಿತು. ಈ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮಿಂಚಿದ್ದರೆ ಬೌಲಿಂಗ್‌ನಲ್ಲಿ ಆರ್ ಅಶ್ವಿನ್ ವಿಂಡೀಸ್ ದಾಂಡಿಗರಿಗೆ ದುಃಸ್ವಪ್ನವಾದರು.
ಆರ್ ಅಶ್ವಿನ್ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಕಬಳಿಸಿ ವೆಸ್ಟ್ ಇಂಡೀಸ್ ತಂಡ 150 ರನ್‌ಗಳಿಗೆ ಆಲೌಟ್ ಆಗಲು ಕಾರಣವಾದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಶ್ವನ್ ಪಡೆದ ವಿಕೆಟ್‌ಗಳ ಸಂಖ್ಯೆ 7. ಈ ಮೂಲಕ ವೆಸ್ಟ್ ಇಂಡೀಸ್ ತಂಡ ಸ್ವಲ್ಪವೂ ಪ್ರತಿರೋಧವೊಡ್ಡದಂತೆ ಮಾಡಿದ್ದರು ಅಶ್ವಿನ್. ಎರಡನೇ ಇನ್ನಿಂಗ್ಸ್‌ನಲ್ಲಿ 130 ರನ್‌ಗಳಿಸಿ ವಿಂಡೀಸ್ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಇನ್ನು ಈ ಮೂಲಕ ಆರ್ ಅಶ್ವಿನ್ ಈ ಪಂದ್ಯದಲ್ಲಿ ಒಟ್ಟು 12 ವಿಕೆಟ್‌ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಭಾರತದ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅನಿಲ್ ಕುಂಬ್ಳೆ ಟೆಸ್ಟ್ ಕ್ರಿಕೆಟ್‌ನಲ್ಲಿ ಈವರೆಗೆ 8 ಬಾರಿ ಹತ್ತು ವಿಕೆಟ್‌ಗಳ ಗೊಂಚಲು ಪಡೆದುಕೊಂಡಿದ್ದರು. ಇದೀಗ ಆರ್ ಅಶ್ವಿನ್ ಕೂಡ ಅಷ್ಟೇ ಬಾರಿ ಈ ಸಾಧನೆ ಮಾಡಿದ್ದು ಬೃಹತ್ ದಾಖಲೆಯನ್ನು ಸರಿಗಟ್ಟಿದಂತಾಗಿದೆ.
ಈ ಪಂದ್ಯದಲ್ಲಿ ಅಶ್ವಿನ್ ಹಲವಾರು ಮೈಲಿಗಲ್ಲುಗಳನ್ನು ಸಾಧಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಆಟಗಾರರ ಪಟ್ಟಿಯಲ್ಲಿ ಆಫ್-ಸ್ಪಿನ್ನರ್ ಹರ್ಭಜನ್ ಸಿಂಗ್ ಅವರಸನಿಹಕ್ಕ ಬಂದಿರುವ ಆರ್ ಅಶ್ವಿನ್ ಕ್ರಿಕೆಟ್ ಇತಿಹಾಸದಲ್ಲಿ 700 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ವಿಕೆಟ್‌ಗಳನ್ನು ಗಳಿಸಿದ 16 ನೇ ಆಟಗಾರ ಎನಿಸಿಕೊಂಡಿದ್ದಾರೆ. ಸದ್ಯಕ್ಕೆ ಅಶ್ವಿನ್ ಎಲ್ಲಾ ಮಾದರಿಗಳಲ್ಲಿ ಸ್ವರೂಪಗಳಲ್ಲಿ 709 ವಿಕೆಟ್‌ಗಳನ್ನು ಪಡೆದಿದ್ದಾರೆ. ಹರ್ಭಜನ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 711ವಿಕೆಟ್‌ಗಳನ್ನು ಪಡೆದುಕೊಂಡಿದ್ದು ಮುಂದಿನ ಟೆಸ್ಟ್ ಪಂದ್ಯದಲ್ಲಿ ಈ ದಾಖಲೆ ಮುರಿಯುವ ಸಾಧ್ಯತೆಯಿದೆ.
ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿಯೂ ಪ್ರತ್ಯೇಕ 5-ವಿಕೆಟ್‌ಗಳ ಗೊಂಚಲು ಪಡೆದ ಮೊದಲ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಶ್ವಿನ್ ವೆಸ್ಟ್ ಇಂಡೀಸ್ ವಿರುದ್ಧ ಆರು ಬಾರಿ 5 ವಿಕೆಟ್‌ಗಳನ್ನು ಗೊಂಚಲು ಪಡೆದುಕೊಂಡಿದ್ದು ಭಾರತೀಯ ಬೌಲರ್‌ಗಳ ಪೈಕಿ ಇದು ಕೂಡ ದಾಖಲೆಯಾಗಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್ ಅಥಾನಾಜೆ, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ರಹಕೀಮ್ ಕಾರ್ನ್‌ವಾಲ್, ಕೆಮರ್ ರೋಚ್, ಅಲ್ಜಾರಿ ಜೋಸೆಫ್, ಜೋಮೆಲ್ ವಾರಿಕನ್
ಬೆಂಚ್: ಶಾನನ್ ಗೇಬ್ರಿಯಲ್, ಕಿರ್ಕ್ ಮೆಕೆಂಜಿ
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಜಯದೇವ್ ಉನದ್ಕತ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಬೆಂಚ್: ಋತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್, ನವದೀಪ್ ಸೈನಿ, ಶ್ರೀಕರ್ ಭರತ್, ಮುಖೇಶ್ ಕುಮಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications