Ind vs WI: 30 ಯಾರ್ಡ್ ಸರ್ಕಲ್ ಹಾಕುವುದೇ ಮರೆತ ಮೈದಾನ ಸಿಬ್ಬಂದಿಗಳು: ಪಂದ್ಯ ತಡವಾಗಿ ಆರಂಭ
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಮೂರನೇ ಟಿ20 ಪಂದ್ಯ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದ ಆರಂಭದಲ್ಲಿಯೇ ವಿಂಡೀಸ್ ಮಂಡಳಿ ಭಾರೀ ಎಡವಟ್ಟೊಂದು ಮಾಡಿದ್ದು ನಗೆಪಾಟಲಿಗೆ ಈಡಾಗಿದೆ. ಪಂದ್ಯದಲ್ಲಿ ಟಾಸ್ ಪ್ರಕ್ರಿಯೆ ಮುಗಿದು ಎರಡು ತಂಡಗಳ ಆಟಗಾರರು ಪಂದ್ಯವನ್ನಾಡಲು ಮುಂದಾದಾಗ ಮೈದಾನದಲ್ಲಿ 30 ಯಾರ್ಡ್‌ನಲ್ಲಿ ಹಾಕುವ ಸರ್ಕಲನ್ನೇ ಮೈದಾನದ ಸಿಬ್ಬಂದಿಗಳು ಹಾಕಲು ಮರೆತ ಘಟನೆ ಬೆಳಕಿಗೆ ಬಂದಿದೆ.
ಹೀಗಾಗಿ ಮೈದಾನದ ಒಳಕ್ಕೆ ಕಾಲಿಟ್ಟ ಆಟಗಾರರು ಮತ್ತೆ ವಾಪಾಸಾಗಿದ್ದು 30 ಯಾರ್ಡ್ ಸರ್ಕಲ್ ಹಾಕಿದ ಬಳಿಕ ಕೆಲ ನಿಮಿಷಗಳ ಕಾಲ ತಡವಾಗಿ ಪಂದ್ಯ ಆರಂಭವಾಗಿದೆ. ಈ ಮೂಲಕ ಗಯಾನಾದ ಪ್ರಾವಿಡೆನ್ಸ್ ಮೈದಾನದ ಸಿಬ್ಬಂದಿಗಳ ಎಡವಟ್ಟು ವೆಸ್ಟ್ ಇಂಡೀಸ್ ಮಂಡಳಿಗೆ ಮುಖಭಂಗವನ್ನುಂಟು ಮಾಡಿದೆ.

ಈ ಪಂದ್ಯ ಟೀಮ್ ಇಂಡಿಯಾ ಪಾಳಿಗೆ ಮಹತ್ವದ್ದಾಗಿದ್ದು ಭಾರತ ತಂಡಕ್ಕೆ ಇಲ್ಲಿ ಗೆಲುವು ಅಗತ್ಯವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿತ್ತು. ಹೀಗಾಗಿ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ 0-2 ಅಂತರದ ಹಿನ್ನಡೆಯಲ್ಲಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಸರಣಿಯಲ್ಲಿ ಭಾರತ ಜೀವಂತವಾಗುಳಿಯತಲಿದೆ. ಮತ್ತೊಂದೆಡೆ ವೆಸ್ಟ್ ಇಂಡೀಸ್ ತಂಡ ಈ ಪಂದ್ಯದಲ್ಲಿ ಗೆದ್ದು ಸರಣಿಯನ್ನು ವಶಕ್ಕೆ ಪಡೆಯುವ ಉತ್ಸಾಹದಲ್ಲಿದೆ.
ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ಒಶಾನೆ ಥಾಮಸ್,ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications