Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs WI: ಟಿ20 ಮಾದರಿಗೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಎರಡು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಈ ಮೂಲಕ ಯುವ ಭರವಸೆಯ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಇದೇ ಮೊದಲ ಬಾರಿಗೆ ಟಿ20 ತಂಡದಲ್ಲಿ ಭಾರತದ ಪರವಾಗಿ ಆಡುವ ಅವಕಾಶ ದೊರೆತಿದೆ. ವಿಂಡೀಸ್ ಪ್ರವಾಸದಲ್ಲಿ ಟೆಸ್ಟ್ ಮಾದರಿಯಲ್ಲಿ ಭಾರತ ತಂಡದ ಪದಾರ್ಪಣೆ ಮಾಡಿ ಅದ್ಭುತ ಪ್ರದರ್ಶನ ನೀಡಿ ಗಮನಸೆಳೆದಿದ್ದ ಜೈಸ್ವಾಲ್ ಟಿ20 ಮಾದರಿಯಲ್ಲಿಯೂ ಅಂಥಾದ್ದೇ ಪ್ರದರ್ಶನದ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಐಪಿಎಲ್‌ನಲ್ಲುಯೂ ಯಶಸ್ವಿ ಜೈಸ್ವಾಲ್ ಅಮೋಘ ಪ್ರದರ್ಶನ ನೀಡಿದ್ದು ಎಲ್ಲರಿಂದ ಸಾಕಷ್ಟು ಮೆಚ್ಚುಗೆಗೆ ಪಾತ್ರರಾಗಿದ್ದರು. ಆಡಿದ 14 ಪಂದ್ಯಗಳಲ್ಲಿ ಜೈಸ್ವಾಲ್ ಭರ್ಜರಿ 625 ರನ್‌ಗಳನ್ನು ಗಳಿಸಿದ್ದರು. 164ರಷ್ಟು ಅದ್ಭುತ ಸರಾಸರಿಯಲ್ಲಿ ಅವರು ಬ್ಯಾಟಿಂಗ್ ನಡೆಸಿದ್ದರು. ಈ ಮೂಲಕ ರಾಷ್ಟ್ರೀಯ ತಂಡದಲ್ಲಿ ಆಡಲು ತಾನು ಸಿದ್ಧ ಎನ್ನುವುದನ್ನು ಸಾರಿದ್ದರು. ಅದಕ್ಕೆ ಪೂರಕವಾಗಿ ಈ ಟಿ20 ಮಾದರಿಯಲ್ಲಿಯೂ ಜೈಸ್ವಾಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

WI vs IND: Young crickter Yashasvi Jaiswal makes T20I Debut in Third match Against West Indies

ಯಶಸ್ವಿ ಜೈಸ್ವಾಲ್ ಅವರ ಅಂತಾರಾಷ್ಟ್ರೀಯ ಪದಾರ್ಪಣೆ ಕೂಡ ಇದೇ ಪ್ರವಾಸದಲ್ಲಿ ಆಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಜೈಸ್ವಾಲ್ ಪದಾರ್ಪಣಾ ಪಂದ್ಯದಲ್ಲಿಯೇ ಅಮೋಘ ಶತಕ ಸಿಡಿಸಿ ಅಬ್ಬರಿಸಿದ್ದರು. ಇನ್ನು ಎರಡನೇ ಪಂದ್ಯದಲ್ಲಿಯೂ ಅವರ ಬ್ಯಾಟ್‌ನಿಂದ ಅರ್ಧ ಶತಕ ಸಿಡಿಸಿದ್ದರು. ಈ ಮೂಲಕ ಈ ವಿಂಡೀಸ್ ಪ್ರವಾಸವನ್ನು ಈಗಾಗಲೇ ಸ್ಮರಣೀಯಗೊಳಿಸಿದ್ದಾರೆ. ಅದೇ ಪ್ರದರ್ಶನವನ್ನು ಚುಟುಕು ಮಾದರಿಯಲ್ಲಿಯೂ ಮುಂದುವರಿಸುವ ವಿಶ್ವಾಸದಲ್ಲಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಜೇಸನ್ ಹೋಲ್ಡರ್ ಗಾಯದಿಂದಾಗಿ ಹೊರಗುಳಿದಿದ್ದು ರೋಸ್ಟನ್ ಚೇಸ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತ ಟೀಮ್ ಇಂಡಿಯಾದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೆ ಕುಲ್‌ದೀಪ್ ಯಾದವ್ ಕೂಡ ಮತ್ತೆ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ರವಿ ಬಿಷ್ಣೋಯ್ ಹಾಗೂ ಇಶಾನ್ ಕಿಶನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ.

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರೊಮಾರಿಯೋ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಓಬೆಡ್ ಮೆಕಾಯ್
ಬೆಂಚ್: ಶಾಯ್ ಹೋಪ್, ಒಶಾನೆ ಥಾಮಸ್,ಜೇಸನ್ ಹೋಲ್ಡರ್, ಓಡಿಯನ್ ಸ್ಮಿತ್
ಟೀಮ್ ಇಂಡಿಯಾ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್
ಬೆಂಚ್: ಉಮ್ರಾನ್ ಮಲಿಕ್, ಅವೇಶ್ ಖಾನ್, ರವಿ ಬಿಷ್ಣೋಯ್

Story first published: Tuesday, August 8, 2023, 20:31 [IST]
Other articles published on Aug 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+