For Quick Alerts
ALLOW NOTIFICATIONS  
For Daily Alerts
 

WI vs SA: ಅಂತಿಮ ಟಿ20 ಪಂದ್ಯದಲ್ಲೂ ಅಬ್ಬರಿದ ವಿಂಡೀಸ್ ದಾಂಡಿಗರು: ದ. ಆಫ್ರಿಕಾಗೆ ಗೆಲ್ಲಲು ಬೃಹತ್ ಗುರಿ

WI vs SA, 3rd t20 match: South Africa need 221 runs target to win against West Indies

ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿಯೂ ವೆಸ್ಟ್ ಇಂಡೀಸ್ ದಾಂಡಿಗರು ಸ್ಪೋಟಕ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯನ್ನು ವಶಕ್ಕೆ ಪಡೆಯುವ ವಿಶ್ವಾಸದಲ್ಲಿದೆ ವೆಸ್ಟ್ ಇಂಡೀಸ್ ತಂಡ.

ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೊಬ್ಬರಿ 220 ರನ್‌ಗಳನ್ನು ಪೇರಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮತ್ತೊಮ್ಮೆ ದಕ್ಷಿಣ ಆಫ್ರಿಕಾ ತಂಡದ ಮುಂದೆ ಬೃಹತ್ ಗುರಿಯನ್ನು ನಿಗದಿಪಡಿಸಿದೆ.

ವೆಸ್ಟ್ ಇಂಡೀಸ್ ತಂಡದ ಪರವಾಗಿ ನಿಕೋಲಸ್ ಪೂರನ್ 19 ಎಸೆತಗಳಲ್ಲಿ 41 ರನ್‌ಗಳಿಸಿದರೆ 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೊಮಾರಿಯೋ ಶೆಫರ್ಡ್ 22 ಎಸೆತಗಳಲ್ಲಿ 44 ರನ್‌ಗಳಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಆಘಾತ ನೀಡಿದರು. ಶೆಫರ್ಡ್ ಹಾಗೂ ಅಲ್ಜರಿ ಜೋಸೆಪ್ 9ನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಬೃಹತ್ ಮೊತ್ತದ ಗುರಿ ನೀಡಲು ಕಾರಣವಾದರು. ಇನ್ನು ಕಗಿಸೋ ರಬಡಾ ಎಸೆದ 20ನೇ ಓವರ್‌ನಲ್ಲಿ ಶೆಫರ್ಡ್ ಬರೊಬ್ಬರಿ 26 ರನ್‌ಗಳನ್ನು ಕೊಳ್ಳೆ ಹೊಡೆದಿದ್ದಾರೆ.

ಕುತೂಹಲಕಾರಿ ಸಂಗತಿಯೆಂದರೆ ವೆಸ್ಟ ಇಂಡೀಸ್ ತಂಡ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಗೆ 221 ರನ್‌ಗಳ ಗುರಿಯನ್ನು ನಿಗದಿಪಡಿಸಿದೆ. ಆದರೆ ತಂಡದ ಒಬ್ಬ ಆಟಗಾರ ಕೂಡ ಅರ್ಧ ಶತಕದ ಗಡಿದಾಟಿಲ್ಲ. ಆದರೆ ಸ್ಪೋಟಕ ಪ್ರದರ್ಶನ ನೀಡುವ ಮೂಲಕ ದಕ್ಷಿಣ ಆಫ್ರಿಕಾ ವೇಗಿಗಳಿಗೆ ಆಘಾತ ನೀಡಿದ್ದಾರೆ.

ಮೂರು ಪಂದ್ಯಗಳ ಈ ಸರಣಿಯಲ್ಲಿ ಕೊನೆಯ ಪಂದ್ಯ ಸರಣಿಯ ನಿರ್ಣಾಯಕ ಪಂದ್ಯ ಎನಿಸಿದೆ. ಮೊದಲ ಎರಡು ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಗೆಲುವು ಸಾಧಿಸಿದೆ. ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಅಬ್ಬರದ ಪ್ರದರ್ಶನ ನೀಡಿ ಅಮೋಘ ಗೆಲುವು ಸಾಧಿಸಿ ಬೀಗಿತ್ತು. ಆದರೆ ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ತಿರುಗಿಬಿದ್ದಿದ್ದು ಸರಣಿ ಗೆಲ್ಲುವ ವೆಸ್ಟ್ ಇಂಡೀಸ್ ಕನಸಿಗೆ ಅಡ್ಡಿ ಪಡಿಸಿತ್ತು. ಹೀಗಾಗಿ ಇಂದಿನ ಈ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಿಲೀ ರೊಸ್ಸೌ, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ವೇಯ್ನ್ ಪಾರ್ನೆಲ್, ಜಾರ್ನ್ ಫೋರ್ಚುಯಿನ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ
ಬೆಂಚ್: ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಸಿಸಂದಾ ಮಗಲಾ, ತಬ್ರೈಜ್ ಶಮ್ಸಿ

ವೆಸ್ಟ್ ಇಂಡೀಸ್ ಆಡುವ ಬಳಗ: ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ಜಾನ್ಸನ್ ಚಾರ್ಲ್ಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಜೇಸನ್ ಹೋಲ್ಡರ್, ರೇಮನ್ ರೈಫರ್, ಶೆಲ್ಡನ್ ಕಾಟ್ರೆಲ್, ಅಲ್ಜಾರಿ ಜೋಸೆಫ್
ಬೆಂಚ್: ಓಡಿಯನ್ ಸ್ಮಿತ್, ಅಕೇಲ್ ಹೊಸೈನ್, ಒಬೆಡ್ ಮೆಕಾಯ್, ಶಮರ್ ಬ್ರೂಕ್ಸ್, ಯಾನಿಕ್ ಕ್ಯಾರಿಯಾ

Story first published: Tuesday, March 28, 2023, 23:33 [IST]
Other articles published on Mar 28, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+