Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Vaibhav Sooryavanshi: ಮ್ಯಾಂಚೆಸ್ಟರ್‌ನಲ್ಲಿ ಶುರುವಾಗುತ್ತದಾ ಟೀಮ್ ಇಂಡಿಯಾ ಹೊಸ ಅಧ್ಯಾಯ?

ಭಾರತ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ಪ್ರವಾಸದ ಸೆಂಟರ್ ಆಫ್‌ ಅಟ್ರ್ಯಾಕ್ಷನ್‌ ವೈಭವ್ ಸೂರ್ಯವಂಶಿ. 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಅದಕ್ಕೆ ಇನ್ನು ಅವಕಾಶ ಕೂಡಿ ಬಂದಿಲ್ಲ. ಆದರೆ ವೈಭವ್ ಸೂರ್ಯವಂಶಿ ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೇಟಸ್‌ನಲ್ಲಿ ಹಾಕಿಕೊಂಡ ಆ ಒಂದು ಇಮೇಜ್‌ ಈಗ ಅಭಿಮಾನಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಹಾಗಿದ್ರೆ ಆ ಚಿತ್ರದಲ್ಲಿ ಏನಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತ ಐರ್ಲೆಂಡ್‌ ಹಾಗೂ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿದಾಗ ಎಲ್ಲರ ಕಣ್ಣುಗಳು 15 ವರ್ಷದ ಯುವ ಬ್ಯಾಟರ್ ಮೇಲೆ ನೆಟ್ಟಿದ್ದವು. ಇವರು ಐರ್ಲೆಂಡ್‌ನಲ್ಲಿ ಪದಾರ್ಪಣೆ ಮಾಡುತ್ತಾರೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಟೀಮ್ ಮ್ಯಾನೆಜ್ಮೆಂಟ್ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿತು. ಟೀಮ್ ಇಂಡಿಯಾ ಇತಿಹಾಸದಲ್ಲಿ ಮೊದಲ ಬಾರಿಗೆ ಐರ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಸೋತಿದ್ದಷ್ಟೇ ಅಲ್ಲದೆ 2-0 ಯಿಂದ ಸರಣಿಯನ್ನು ಕೈ ಚೆಲ್ಲಿದೆ.

Vaibhav Sooryavanshi

ಈ ಸರಣಿ ಸೋಲಿನ ಬಳಿಕ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ನೀಡಬೇಕಿತ್ತು ಎಂಬ ಚರ್ಚೆ ಸಾಮಾಜಿಕ ತಾಣದಲ್ಲಿ ವ್ಯಾಪಕವಾಗಿ ಆರಂಭವಾಯಿತು. ಟೀಮ್ ಇಂಡಿಯಾ ಮಾಜಿ ಆಟಗಾರರು ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಸಹ ಇವರಿಗೆ ಅವಕಾಶ ನೀಡುವಂತೆ ಒತ್ತಾಯಿಸಿದ್ದರು. ಆದರೆ ಈಗ ಇದಕ್ಕೆ ಕಾಲ ಕೂಡಿ ಬಂದಂತೆ ಕಾಣುತ್ತಿದೆ.

ನ್ಯೂ ಚಾಪ್ಟರ್‌

ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾಕ್ಕೆ ಆಯ್ಕೆಯಾದಾಗಿನಿಂದ, ಅಭಿಮಾನಿಗಳು ಇವರ ಪದಾರ್ಪಣೆಗಾಗಿ ಕಾಯುತ್ತಿದ್ದಾರೆ. ಆದರೆ ಇಂಗ್ಲೆಂಡ್‌ನಲ್ಲಿ ಇದಕ್ಕೆ ವೇದಿಕೆ ಸಿದ್ಧವಾಗಿದೆ ಎಂದು ಕಾಣುತ್ತಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ಲಭಿಸಲಿದೆಯೇ ಎಂಬ ಬಗ್ಗೆ ಈಗ ಒಂದು ಸುಳಿವು ಸಿಕ್ಕಿದೆ. ಇದರಿಂದ ಅಭಿಮಾನಿಗಳ ಕಾಯುವಿಕೆ ಅಂತ್ಯವಾದಂತೆ ಕಾಣುತ್ತಿದೆ.

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯಕ್ಕೆ ಕೇವಲ ಒಂದು ದಿನ ಮೊದಲು, ವೈಭವ್ ಸೂರ್ಯವಂಶಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಕಥೆಯನ್ನು ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ ಅವರು ಅಂಡರ್ 19 ವಿಶ್ವಕಪ್‌ನ ಫೈನಲ್‌ನಲ್ಲಿ ಶತಕ ಬಾರಿಸಿದ ಸಂಭ್ರಮದ ಕ್ಷಣವನ್ನು ಕಾಣಬಹುದು. ಅಲ್ಲದೆ ಫೋಟೋ ಮೇಲಗಡೆ ನ್ಯೂ ಚಾಪ್ಟರ್‌ ಎಂದು ವೈಭವ್ ಸೂರ್ಯವಂಶಿ ಬರೆದುಕೊಂಡಿದ್ದಾರೆ.

ವೈಭವ್ ಸೂರ್ಯವಂಶಿ ಅವರು ಬರೆದಿಕೊಂಡ ಆ ಸಾಲುಗಳು ಈಗ ಅಭಿಮಾನಿಗಳಲ್ಲಿ ನವ ಉತ್ಸಾಹ ತುಂಬಿದೆ. ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕಣಕ್ಕೆ ಇಳಿಯಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಶನಿವಾರ ವೈಭವ್ ಸೂರ್ಯವಂಶಿ ಪದಾರ್ಪಣೆ ಮಾಡುತ್ತಾರಾ ಎಂಬ ಪ್ರಶ್ನೆಗೆ ಟಾಸ್‌ ವೇಳೆ ಉತ್ತರ ಲಭಿಸಲಿದೆ.

Story first published: Saturday, July 4, 2026, 9:17 [IST]
Other articles published on Jul 4, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+