Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA: ಮೊದಲ ಟಿ20ಯಲ್ಲಿ ಅಭಿಷೇಕ್ ಶರ್ಮಾಗೆ ಅವಕಾಶ ಸಿಗುತ್ತಾ?

ಶುಕ್ರವಾರ ಡರ್ಬನ್‌ನಲ್ಲಿ ನಡೆಯಲಿರುವ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಟೀಮ್ ಇಂಡಿಯಾ ಸಜ್ಜಾಗಿದೆ. ಭಾರತೀಯ ಕಾಲಮಾನ ರಾತ್ರಿ 8:30 ಗಂಟೆಗೆ ಉಭಯ ತಂಡಗಳ ಪಂದ್ಯ ಆರಂಭವಾಗಲಿದೆ.

ಟೀಮ್ ಇಂಡಿಯಾದಲ್ಲಿ ಒಬ್ಬರಿಗಿಂತ ಒಬ್ಬರು ಮೀರಿಸುವ ಆಟಗಾರರಿದ್ದಾರೆ. ಭಾರತ ಟಿ20 ತಂಡದ ನಾಯಕತ್ವ ಸೂರ್ಯಕುಮಾರ್ ಯಾದವ್ ಕೈಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಆಡುವ ಹನ್ನೊಂದರ ಬಳಗದ ಆಯ್ಕೆ ಸುಲಭವಾಗಿಲ್ಲ. ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್‌ಗಿಂತ ಅಪಾಯಕಾರಿ ಬ್ಯಾಟರ್ ಓಪನಿಂಗ್‌ ತೆರೆಯಲು ಮುಂಚೂಣಿಯಲ್ಲಿದ್ದಾರೆ. ಆ ಆಟಗಾರ ಬೇರೆ ಯಾರೂ ಅಲ್ಲ, ಅಭಿಷೇಕ್ ಶರ್ಮಾ.

Will Abhishek Sharma get chance in first T20 against South Africa

ಅವಕಾಶ ಸಿಗುತ್ತಾ?

ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾಗೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಸಿಗುವ ನಿರೀಕ್ಷೆಯಿದೆ. ಸ್ಟಾರ್ ವಿಕೆಟ್‌ಕೀಪರ್- ಬ್ಯಾಟರ್ ಸಂಜು ಸ್ಯಾಮ್ಸನ್ ಅವರೊಂದಿಗೆ ಅಭಿಷೇಕ್ ಶರ್ಮಾ ಆರಂಭಿಕರಾಗಬಹುದು. ಅಭಿಷೇಕ್ ಶರ್ಮಾ ಎಡಗೈ ಬ್ಯಾಟರ್ ಆಗಿದ್ದರೆ, ಸಂಜು ಸ್ಯಾಮ್ಸನ್ ಬಲಗೈ ಬ್ಯಾಟಿಂಗ್ ಮಾಡತ್ತಾರೆ. ಹೀಗಾಗಿ ಟೀಮ್ ಇಂಡಿಯಾದ ಈ ಎಡ ಮತ್ತು ಬಲ ಸಂಯೋಜನೆಯು ಓಪನಿಂಗ್‌ನಲ್ಲಿ ಎದುರಾಳಿ ತಂಡದ ಮೇಲೆ ಪರಿಣಾಮ ಬೀರಬಹುದು.

ಅಭಿಷೇಕ್ ಶರ್ಮಾ ಭಾರತ ಪರ ಇದುವರೆಗೆ 8 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರು ಕ್ಷಣ ಮಾತ್ರದಲ್ಲಿ ಪಂದ್ಯವನ್ನು ಬದಲಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಅಭಿಷೇಕ್ ಶರ್ಮಾ ಅವರು ಎಷ್ಟು ಅಪಾಯಕಾರಿ ಬ್ಯಾಟರ್ ಎಂದು ಐಪಿಎಲ್ 2024ರ ಆವೃತ್ತಿಯಲ್ಲಿ ತೋರಿಸಿ ಕೊಟ್ಟಿದ್ದಾರೆ. ಅಭಿಷೇಕ್ ಶರ್ಮಾ ಪವರ್ ಪ್ಲೇನಲ್ಲಿ ಅತ್ಯಂತ ವೇಗವಾಗಿ ರನ್ ಗಳಿಸಬಲ್ಲರು. ಒಂದು ವೇಳೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅಭಿಷೇಕ್ ಶರ್ಮಾ ಅವರಿಗೆ ಆಡುವ ಅವಕಾಶ ಸಿಕ್ಕರೆ ಶತಕವನ್ನೂ ಸಿಡಿಸಬಲ್ಲರು.

ವೃತ್ತಿಜೀವನ

ಅಭಿಷೇಕ್ ಶರ್ಮಾ ಟೀಮ್ ಇಂಡಿಯಾ ಪರ 8 ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 22.71 ಸರಾಸರಿಯಲ್ಲಿ 159 ರನ್ ಗಳಿಸಿದ್ದಾರೆ. ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ 1 ಶತಕವನ್ನು ಸಿಡಿಸಿದ್ದಾರೆ. ಇದಲ್ಲದೆ, ಅಭಿಷೇಕ್ ಶರ್ಮಾ 63 ಐಪಿಎಲ್ ಪಂದ್ಯಗಳಲ್ಲಿ 155.13 ಸ್ಟ್ರೈಕ್ ರೇಟ್‌ನಲ್ಲಿ 128 ಬೌಂಡರಿ ಮತ್ತು 73 ಸಿಕ್ಸರ್‌ಗಳನ್ನು ಒಳಗೊಂಡಂತೆ 1376 ರನ್ ಬಾರಿಸಿದ್ದಾರೆ. ಅಭಿಷೇಕ್ ಶರ್ಮಾ ಐಪಿಎಲ್‌ನಲ್ಲಿ 7 ಅರ್ಧ ಶತಕಗಳನ್ನು ಹೊಂದಿದ್ದಾರೆ. ಐಪಿಎಲ್‌ನಲ್ಲಿ ಅಭಿಷೇಕ್ ಶರ್ಮಾ ಅವರ ಅತ್ಯುತ್ತಮ ಸ್ಕೋರ್ 75 ರನ್.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ವಿಜಯ್ ಕುಮಾರ್ ವೈಶಾಕ್, ಅವೇಶ್ ಖಾನ್ , ಯಶ್ ದಯಾಳ್

Story first published: Thursday, November 7, 2024, 12:02 [IST]
Other articles published on Nov 7, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+