IND vs NZ 2nd Test: ರವೀಂದ್ರ ಜಡೇಜಾ ಬದಲಿಗೆ ಅಕ್ಸರ್ ಪಟೇಲ್‌ಗೆ ಸಿಗುತ್ತಾ ಚಾನ್ಸ್?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಪಂದ್ಯ ಅಕ್ಟೋಬರ್ 24 ರಿಂದ ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ. 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1-0 ಮುನ್ನಡೆ ಸಾಧಿಸಿದೆ.
ಭಾರತ ಸರಣಿಯಲ್ಲಿ ಉಳಿಯಲು ಪುಣೆಯಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. 2012ರಿಂದ ಭಾರತ ತವರಿನಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಸೋತಿಲ್ಲ. ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಟಿಸಲು ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಸಜ್ಜಾಗಿದೆ.

ಪುಣೆ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದಲ್ಲಿ ಹಲವು ಬದಲಾವಣೆಗಳು ಆಗುವ ಸಾಧ್ಯತೆಯಿದೆ. ಒಂದು ಕಡೆ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಕಳಪೆ ಫಾರ್ಮ್ ಸಮಸ್ಯೆಯಿಂದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಕಳೆದುಕೊಳ್ಳಬಹುದು. ಮತ್ತೊಂದೆಡೆ ನಾಯಕ ರೋಹಿತ್ ಶರ್ಮಾ ಅವರು ಎರಡನೇ ಟೆಸ್ಟ್‌ನಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಬಹುದು. ಇಂತಹ ಪರಿಸ್ಥಿತಿಯಲ್ಲಿ, ರವೀಂದ್ರ ಜಡೇಜಾ ಬದಲಿಗೆ ಅಕ್ಸರ್ ಪಟೇಲ್ ಪುಣೆ ಟೆಸ್ಟ್ ಪಂದ್ಯ ಆಡುವ ಸಾಧ್ಯತೆಯಿದೆ.
ಅಕ್ಷರ್ ಪಟೇಲ್ ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ಸಂಚಲನ ಮೂಡಿಸಬಲ್ಲ ಆಟಗಾರ. ಎಡಗೈ ಸ್ಪಿನ್ ಬೌಲರ್ ಆಗಿರುವ ಅಕ್ಸರ್ ಎದುರಾಳಿ ತಂಡದ ಬ್ಯಾಟರ್‌ಗಳಿಗೆ ಖೆಡ್ಡಾ ತೋಡಿದ್ದಾರೆ. ಫೀಲ್ಡಿಂಗ್ ನಲ್ಲೂ ಜಡೇಜಾಗಿಂತ ಅಕ್ಷರ್ ಪಟೇಲ್ ಒಂದು ಕೈ ಮುಂದಿದ್ದಾರೆ. ಹೀಗಾಗಿ ಪುಣೆಯಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಕ್ಸರ್ ಪಟೇಲ್ ಭಾರತಕ್ಕೆ ಆನಿವಾರ್ಯ ಆಟಗಾರನಾಗಿದ್ದಾರೆ.
ಜಡೇಜಾ ಕೈ ಬಿಡಲು ಕಾರಣ?
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯ ರವೀಂದ್ರ ಜಡೇಜಾ 86 ರನ್‌ಗಳನ್ನು ಗಳಿಸಿದ್ದರು. ಇದನ್ನು ಹೊರತುಪಡಿಸಿದರೆ, ರವೀಂದ್ರ ಜಡೇಜಾ ಅವರ ಬ್ಯಾಟಿಂಗ್ ಮೊದಲಿನಂತಿಲ್ಲ. ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಜಡೇಜಾ 0 ಮತ್ತು 5 ರನ್ ಗಳಿಸಿ ಔಟಾದರು. ಬೌಲಿಂಗ್‌ನಲ್ಲೂ ರವೀಂದ್ರ ಜಡೇಜಾ ಅವರಿಂದ ವಿಶೇಷ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.
ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಜಡೇಜಾ 3 ವಿಕೆಟ್ ಪಡೆದರು, ಆದರೆ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಅಕ್ಷರ್ ಪಟೇಲ್ ರವೀಂದ್ರ ಜಡೇಜಾ ಅವರಿಗಿಂತ ಉತ್ತಮ ಬ್ಯಾಟರ್ ಆಗಿದ್ದಾರೆ. ಅವರು ಎಡಗೈ ಸ್ಪಿನ್ ಬೌಲಿಂಗ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕೂಡ ಅಕ್ಷರ್ ಪಟೇಲ್ ಅದ್ಭುತ ದಾಖಲೆ ಹೊಂದಿದ್ದಾರೆ.
ಟೀಮ್ ಇಂಡಿಯಾ ಪರ ಅಕ್ಷರ್ ಪಟೇಲ್ ಕೇವಲ 14 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 55 ವಿಕೆಟ್ ಮತ್ತು 646 ರನ್ ಗಳಿಸಿದ್ದಾರೆ. ಅಕ್ಷರ್ ಪಟೇಲ್ 5 ಬಾರಿ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಇದಲ್ಲದೇ ಅಕ್ಷರ್ ಪಟೇಲ್ ಒಮ್ಮೆ ಪಂದ್ಯವೊಂದರಲ್ಲಿ 11 ವಿಕೆಟ್ ಕಬಳಿಸಿದ ದಾಖಲೆಯನ್ನು ಹೊಂದಿದ್ದಾರೆ.
ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್ (ಜಸ್ಪ್ರೀತ್ ಬುಮ್ರಾ) ನಾಯಕ) , ಮೊಹಮ್ಮದ್ ಸಿರಾಜ್, ಆಕಾಶದೀಪ್, ವಾಷಿಂಗ್ಟನ್ ಸುಂದರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications