IPL 2025 RCB vs CSK: ಎರಡನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಆಡ್ತಾರಾ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 18 ನೇ ಸೀಸನ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನೊಂದಿಗೆ ಭರ್ಜರಿ ಆರಂಭ ಮಾಡಿದೆ. ಈ ಸೀಸನ್‌ನ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್‌ಸಿಬಿ 7 ವಿಕೆಟ್‌ಗಳಿಂದ ಜಯಗಳಿಸಿತ್ತು. ಈಗ ಆರ್‌ಸಿಬಿ ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತನ್ನ ಮುಂದಿನ ಪಂದ್ಯಕ್ಕೆ ಅಭ್ಯಾಸವನ್ನು ಪ್ರಾರಂಭಿಸಿದೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಉಭಯ ತಂಡಗಳ ಪಂದ್ಯ ನಡೆಯಲಿದೆ.
ಕೆಕೆಆರ್ ವಿರುದ್ಧ ಮೊದಲ ಪಂದ್ಯವನ್ನು ಗೆದ್ದಿರುವ ಆರ್‌ಸಿಬಿ ತನ್ನ ಪ್ಲೇಯಿಂಗ್-11 ರಲ್ಲಿ ಒಂದು ಬದಲಾವಣೆ ಮಾಡಲು ಯೋಜಿಸುತ್ತಿದೆ. ಆರ್‍ಸಿಬಿ ತಂಡವು ಅಪಾಯಕಾರಿ ಆಟಗಾರನನ್ನು ಕಣಕ್ಕಿಳಿಸಲು ಸಿದ್ಧವಾಗಿದೆ. ಮೊದಲ ಪಂದ್ಯದಲ್ಲಿ ಹೊರಗುಳಿದಿದ್ದ ಸ್ವಿಂಗ್ ಕಿಂಗ್ ಭುವನೇಶ್ವರ್ ಕುಮಾರ್ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆಡುವುದು ಖಚಿತವಾಗಿದೆ.

ಕೆಕೆಆರ್ ವಿರುದ್ಧದ ಮೊದಲ ಪಂದ್ಯದ ಅಭ್ಯಾಸದ ಸಮಯದಲ್ಲಿ ಸಣ್ಣ ಗಾಯದಿಂದಾಗಿ ಭುವಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಈಗ ಅವರು ಚೇತರಿಸಿಕೊಂಡಿದ್ದು, ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಆರ್‍ಸಿಬಿ ತಂಡದ ಪ್ರಮುಖ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರಿಗೆ ಜೋಶ್ ಹೇಜಲ್‌ವುಡ್ ಮತ್ತು ಯಶ್ ದಯಾಳ್ ಬೆಂಬಲ ನೀಡಲಿದ್ದಾರೆ. ಭುವಿ ತಂಡಕ್ಕೆ ಬಂದರೆ ರಸಿಕ್ ದಾರ್ ಸಲಾಂ ಹೊರಗುಳಿಯಬೇಕಾಗಬಹುದು. ಈ ಒಂದು ಬದಲಾವಣೆಯನ್ನು ಹೊರತುಪಡಿಸಿ, ಮೊದಲ ಪಂದ್ಯದಲ್ಲಿ ಆಡಿದ ಆರ್‍ಸಿಬಿ ತಂಡವು ಸಿಎಸ್‌ಕೆ ವಿರುದ್ಧವೂ ಮೈದಾನಕ್ಕಿಳಿಯುವ ಸಾಧ್ಯತೆಯಿದೆ.
ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಕಣಕ್ಕಿಳಿದರೆ ಆರ್‍ಸಿಬಿ ತಂಡದ ಬಲ ಮತ್ತಷ್ಟು ಹೆಚ್ಚಾಗಲಿದೆ. ಸ್ಪಿನ್ ಪಿಚ್‌ನಲ್ಲಿ ಸ್ವಿಂಗ್ ಕಿಂಗ್ ಭುವನೇಶ್ವರ್ ಕುಮಾರ್ ಹೇಗೆ ಸಿಎಸ್‌ಕೆ ತಂಡವನ್ನು ಕಟ್ಟಿ ಹಾಕಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಟೀಮ್ ಇಂಡಿಯಾದ ಅನುಭವಿ ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಇದುವರೆಗೆ ಐಪಿಎಲ್‌ನಲ್ಲಿ 176 ಪಂದ್ಯಗಳನ್ನು ಆಡಿದ್ದು, ಒಟ್ಟು 181 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರ ಅತ್ಯುತ್ತಮ ಪ್ರದರ್ಶನವೆಂದರೆ 19 ರನ್‌ಗಳಿಗೆ 5 ವಿಕೆಟ್‌ಗಳು. ಕಳೆದ ಸೀಸನ್‌ವರೆಗೂ ಅವರು ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದರು. ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಅವರನ್ನು ಆರ್‌ಸಿಬಿ 10.75 ಕೋಟಿ ರೂ.ಗೆ ಖರೀದಿಸಿತು.
ಸಿಎಸ್‌ಕೆ ವಿರುದ್ಧ ಆರ್‍ಸಿಬಿ ಸಂಭಾವ್ಯ ಪ್ಲೇಯಿಂಗ್-11
ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications