ವಿಕೆಟ್ ಕೀಪರ್ ಆಗಿ ಮುಂದುವರಿಯಲಿದ್ದಾರೆ ರಾಹುಲ್: ವಿರಾಟ್ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-1 ಅಂತರದಿಂದ ತನ್ನ ಮುಡಿಗೇರಿಸಿಕೊಂಡಿದೆ. ಈ ಸಂದರ್ಭದಲ್ಲಿ ಟೀಮ್ ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.
ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನೀಡಲಾಗಿದೆ. ಮೂರೂ ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ.
ಈ ಪ್ರದರ್ಶನದ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೆಲ ಸಮಯಗಳವರೆಗೆ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಮುಂದುವರೆಸಲಿದ್ದಾರೆ ಎಂಬ ಮಾತನ್ನೂ ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕೆಎಲ್ ರಾಹುಲ್ ಅವರು ಬ್ಯಾಟ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಕೆಎಲ್ ರಾಹುಲ್ 2003ರ ವಿಶ್ವಕಪ್‌ನಲ್ಲಿ ರಾಹುಲ್ ದ್ರಾವಿಡ್ ರೀತಿಯಲ್ಲಿ ತಂಡದ ಕ್ರಮಾಂಕದಲ್ಲಿ ಸಮತೋಲನವನ್ನುಂಟು ಮಾಡಲಿದ್ದಾರೆ ಎಂದು ಹೇಳಿ ನೀಡಿದ್ದಾರೆ.
ತಂಡದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಸ್ಪಷ್ಟತೆ ಸಿಗದಿರುವುದು ಸಮಸ್ಯೆಯಾಗಿತ್ತು. ಈಗ ಈ ಬಗ್ಗೆ ಅರ್ಥಮಾಡಿಕೊಂಡಿದ್ದೇವೆ. ಮತ್ತು ಅದರಂತೆಯೇ ಮುಂದುವರಿಯುತ್ತೇವೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ವಿರಾಟ್ ಕೊಹ್ಲಿ ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೆಎಲ್ ರಾಹುಲ್ ವಿಕೆಟ್ ಹಿಂದೆಯೂ ಮಿಂಚುವುದು ಪಕ್ಕಾ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications