ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಕೆಟ್ ಕೀಪರ್ ಆಗಿ ಮುಂದುವರಿಯಲಿದ್ದಾರೆ ರಾಹುಲ್: ವಿರಾಟ್ ಕೊಹ್ಲಿ

ಕೆ ಎಲ್ ರಾಹುಲ್ ವಿಕೆಟ್ ಹಿಂದೆ ಮಿಂಚುವುದು ಪಕ್ಕಾ | K L Rahul | India | cricket | Oneindia kannada
Will Continue With KL Rahul As Wicketkeeper For A While: Virat Kohli

ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 2-1 ಅಂತರದಿಂದ ತನ್ನ ಮುಡಿಗೇರಿಸಿಕೊಂಡಿದೆ. ಈ ಸಂದರ್ಭದಲ್ಲಿ ಟೀಮ್ ್ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನೀಡಲಾಗಿದೆ. ಮೂರೂ ಪಂದ್ಯಗಳಲ್ಲಿ ವಿಕೆಟ್ ಕೀಪಿಂಗ್ ಹಾಗೂ ಬ್ಯಾಟಿಂಗ್‌ನಲ್ಲಿ ಕೆಎಲ್ ರಾಹುಲ್ ಗಮನಾರ್ಹ ಪ್ರದರ್ಶನವನ್ನು ನೀಡಿದ್ದಾರೆ.

ಆಸ್ಟ್ರೇಲಿಯಾ vs ಭಾರತ: ನಾಯಕನಾಗಿ ಕೊಹ್ಲಿ ಮತ್ತೊಂದು ದಾಖಲೆಆಸ್ಟ್ರೇಲಿಯಾ vs ಭಾರತ: ನಾಯಕನಾಗಿ ಕೊಹ್ಲಿ ಮತ್ತೊಂದು ದಾಖಲೆ

ಈ ಪ್ರದರ್ಶನದ ಬಳಿಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕೆಲ ಸಮಯಗಳವರೆಗೆ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಮುಂದುವರೆಸಲಿದ್ದಾರೆ ಎಂಬ ಮಾತನ್ನೂ ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕೆಎಲ್ ರಾಹುಲ್ ಅವರು ಬ್ಯಾಟ್ ಹಾಗೂ ವಿಕೆಟ್ ಕೀಪಿಂಗ್‌ನಲ್ಲಿ ಉತ್ತಮ ಪ್ರದರ್ಶನವನ್ನು ನೀಡುತ್ತಿದ್ದಾರೆ. ಕೆಎಲ್ ರಾಹುಲ್ 2003ರ ವಿಶ್ವಕಪ್‌ನಲ್ಲಿ ರಾಹುಲ್ ದ್ರಾವಿಡ್ ರೀತಿಯಲ್ಲಿ ತಂಡದ ಕ್ರಮಾಂಕದಲ್ಲಿ ಸಮತೋಲನವನ್ನುಂಟು ಮಾಡಲಿದ್ದಾರೆ ಎಂದು ಹೇಳಿ ನೀಡಿದ್ದಾರೆ.

ಭಾರತ vs ಆಸ್ಟ್ರೇಲಿಯಾ: ಆಸ್ಟ್ರೇಲಿಯಾವನ್ನು ಮಣಿಸಿ ಸರಣಿ ಗೆದ್ದ ಟೀಮ್ ಇಂಡಿಯಾಭಾರತ vs ಆಸ್ಟ್ರೇಲಿಯಾ: ಆಸ್ಟ್ರೇಲಿಯಾವನ್ನು ಮಣಿಸಿ ಸರಣಿ ಗೆದ್ದ ಟೀಮ್ ಇಂಡಿಯಾ

ತಂಡದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಸ್ಪಷ್ಟತೆ ಸಿಗದಿರುವುದು ಸಮಸ್ಯೆಯಾಗಿತ್ತು. ಈಗ ಈ ಬಗ್ಗೆ ಅರ್ಥಮಾಡಿಕೊಂಡಿದ್ದೇವೆ. ಮತ್ತು ಅದರಂತೆಯೇ ಮುಂದುವರಿಯುತ್ತೇವೆ ಎಂದು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ವಿರಾಟ್ ಕೊಹ್ಲಿ ಹೇಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೆಎಲ್ ರಾಹುಲ್ ವಿಕೆಟ್ ಹಿಂದೆಯೂ ಮಿಂಚುವುದು ಪಕ್ಕಾ ಆಗಿದೆ.

Story first published: Monday, January 20, 2020, 22:35 [IST]
Other articles published on Jan 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X