ಮುಂಬೈ ತಂಡಕ್ಕೆ ಕೆಲವೇ ದಿಗಳಲ್ಲಿ ಎಂಟ್ರಿ ನೀಡಲಿರುವ ಸ್ಟಾರ್ ಆಲ್‌ರೌಂಡರ್
ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಆವೃತ್ತಿ ಆರಂಭವಾಗಿದೆ. ಈ ಲೀಗ್‌ನಲ್ಲಿ ಐದು ಬಾರಿ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಉತ್ತಮ ಆರಂಭವನ್ನು ಕಂಡಿಲ್ಲ. ಮುಂಬೈ ಇಂಡಿಯನ್ಸ್ ಈ ಬಾರಿ ಗೆಲುವಿನ ಆರಂಭವನ್ನು ಕಂಡರೂ ಸಹ, ಬಳಿಕ ಸಾಲು ಸಾಲು ಸೋಲುಗಳು ತಂಡವನ್ನು ಕಂಗೆಡಿಸಿವೆ. ಈ ವೇಳೆ ಮುಂಬೈ ತಂಡಕ್ಕೆ ಮುಂದಿನ ಪಂದ್ಯಗಳು ಮಹತ್ವದಾಗಿದೆ. ಮುಂದಿನ ಪಂದ್ಯಗಳಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡಕ್ಕೆ ಒಳ್ಳೆಯ ಸುದ್ದಿಯೊಂದು ಬಂದಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಟಾರ್ ಆಲ್‌ರೌಂಡರ್ ವಿಲ್ ಜಾಕ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ.
ವಿಲ್ ಜಾಕ್ಸ್ ಅಂತಾರಾಷ್ಟ್ರೀಯ ವೇಳಾಪಟ್ಟಿಯ ಕಾರಣದಿಂದಾಗಿ ಅವರು ಐಪಿಎಲ್ 2026 ರ ಆರಂಭಿಕ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲು ಸಾಧ್ಯವಾಗಲಿಲ್ಲ. ಇದೀಗ ಜಾಕ್ಸ್ ಈ ವಾರದ ಅಂತ್ಯದಲ್ಲಿ ಭಾರತಕ್ಕೆ ಆಗಮಿಸಲಿದ್ದು, ತಂಡವನ್ನು ಸೇರಿಕೊಳ್ಳಲಿದ್ದಾರೆ. ಆಷಸ್ ಸರಣಿಯ ಬಳಿಕ ವಿಲ್ ಜಾಕ್ಸ್ ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಂಡಿದ್ದರು. ಬಳಿಕ ಅವರು ಶ್ರೀಲಂಕಾ ವಿರುದ್ಧದ ಸರಣಿ ಹಾಗೂ ಇತ್ತೀಚಿಗೆ ನಡೆದಿದ್ದ ಟಿ20 ವಿಶ್ವಕಪ್‌ನಲ್ಲೂ ಇಂಗ್ಲೆಂಡ್ ತಂಡದ ಭಾಗವಾಗಿದ್ದರು.

ಇತ್ತೀಚಿಗೆ ಭಾರತದಲ್ಲಿ ಹಾಗೂ ಶ್ರೀಲಂಕಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ವಿಲ್ ಜಾಕ್ಸ್ ಅಮೋಘ ಪ್ರದರ್ಶನ ನೀಡಿದ್ದರು. ಇವರ ಸ್ಥಿರ ಆಟದ ನೆರವಿನಿಂದಲೇ ಇಂಗ್ಲೆಂಡ್ ಸೆಮಿಫೈನಲ್ ಹಂತವನ್ನು ಪ್ರವೇಶಿಸಲು ಸಾಧ್ಯವಾಯಿತು. ಇವರು ಆಡಿದ 8 ಪಂದ್ಯಗಳಲ್ಲಿ 4 ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದಾರೆ. ವಿಲ್ ಜಾಕ್ಸ್ ಟಿ20 ವಿಶ್ವಕಪ್‌ನಲ್ಲಿ ಆಡಿದ 8 ಪಂದ್ಯಗಳಲ್ಲಿ 176ರ ಸ್ಟ್ರೈಕ್ ರೇಟ್‌ನಲ್ಲಿ 226 ರನ್ ಸಿಡಿಸಿದರು. ಇನ್ನು ಬೌಲಿಂಗ್‌ನಲ್ಲೂ 9 ವಿಕೆಟ್ ಕಬಳಿಸಿದ್ದರು. ಇವರ ಅನುಪಸ್ಥಿತಿ ಬಹುವಾಗಿ ಇಂಡಿಯನ್ಸ್ ತಂಡಕ್ಕೆ ಕಾಡುತ್ತಿತ್ತು. ಇವರ ಆಗಮನ ಈಗ ತಂಡದ ಮನೋಬಲ ಹೆಚ್ಚಿಸಿದೆ.
ಬ್ಯಾಟಿಂಗ್ ಕೋಚ್ ಹೇಳಿದ್ದೇನು?
ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಕೋಚ್ ಕೀರಾನ್ ಪೊಲಾರ್ಡ್ ಪತ್ರಕರ್ತರೊಂದಿಗೆ ಮಾತನಾಡುವಾಗ, ವಿಲ್ ಜಾಕ್ಸ್ ಅವರ ಬಗ್ಗೆ ಪ್ರಶ್ನೆಯನ್ನು ಕೇಳಲಾಯಿತು. ಆಗ ಪೊಲಾರ್ಡ್ ಶೀಘ್ರದಲ್ಲಿ ಮುಂಬೈ ತಂಡವನ್ನು ಸೇರಲಿದ್ದಾರೆ ಎಂದು ಹೇಳಿದರು. ಇವರು ಫಿಟ್ನೆಸ್ ಬಗ್ಗೆ ನಮಗೆ ಮಾಹಿತಿ ಇಲ್ಲ. ಮುಂಬೈ ಇಂಡಿಯನ್ಸ್ ತನ್ನ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಏಪ್ರಿಲ್ 16 ರಂದು ಅವರ ತವರು ನೆಲದಲ್ಲಿ ಆಡಲಿದೆ. ಮುಂಬೈ ಇಂಡಿಯನ್ಸ್ ತಂಡಕ್ಕೆ ಮುಂದಿನ ಎಲ್ಲ ಪಂದ್ಯಗಳು ಕಬ್ಬಿಣದ ಕಡಲೆಯಂತಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications