Mayank-karun-prasiddh: ತ್ರಿಮೂರ್ತಿ ಕನ್ನಡಿಗರಿಗೆ ಸಿಗುತ್ತಾ ಅವಕಾಶ?
ತವರಿನಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿ) ಬಲಿಷ್ಠ ಟೀಮ್ ಇಂಡಿಯಾ ಕಟ್ಟಲು ಯೋಜನೆ ರೂಪಿಸಿದೆ. ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಭಾರತ ತಂಡವೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಡುವ ನಿರೀಕ್ಷೆಯಿದೆ. ಹೀಗಾಗಿ ಭಾರತ ತಂಡದಲ್ಲಿ ಯಾರಿಗೆಲ್ಲಾ ಆಡುವ ಅವಕಾಶ ಸಿಗಬಹುದು ಎಂಬುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಆಡಲು ಕರ್ನಾಟಕದ ಮೂವರು ಸ್ಟಾರ್ ಆಟಗಾರರು ಎದುರು ನೋಡುತ್ತಿದ್ದಾರೆ. ಆದರೆ ಬಿಸಿಸಿಐ ಈ ತ್ರಿಮೂರ್ತಿಗಳಿಗೆ ಮಣಿಯುವುದೇ ಎಂಬುದು ಪ್ರಶ್ನೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಸೇರಿದಂತೆ ಸ್ಟಾರ್ ಆಟಗಾರರು ಫಾರ್ಮ್ ಎದುರಿಸುತ್ತಿದ್ದಾರೆ. ಇಂತಹದ ಸಂದರ್ಭದಲ್ಲಿ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಮಾಯಾಂಕ್ ಅಗರ್ವಾಲ್, ಕರುಣ್ ನಾಯರ್ ಹಾಗು ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಗಮನ ಸೆಳೆದ ವೇಗಿ ಪ್ರಸಿದ್ಧ್ ಕೃಷ್ಣ ಟೀಮ್ ಇಂಡಿಯಾ ಸೇರಲು ತಯಾರಾಗಿದ್ದಾರೆ.

ರಾಹುಲ್ ದ್ರಾವಿಡ್ ನಂತರ ಹೆಡ್‌ಕೋಚ್ ಜವಾಬ್ದಾರಿ ವಹಿಸಿಕೊಂಡಿರುವ ಗೌತಮ್ ಗಂಭೀರ್ ಟೀಮ್ ಇಂಡಿಯಾದಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದಾರೆ. ಆದರೆ ಕೆಲವು ಅಚ್ಚರಿಯ ಸರಣಿ ಸೋಲುಗಳನ್ನು ಟೀಮ್ ಇಂಡಿಯಾ ಕಂಡಿದೆ. ಇದೀಗ ಗೌತಮ್ ಗಂಭೀರ್ ನೇತೃತ್ವದಲ್ಲಿ ಭಾರತ ತಂಡವನ್ನು ಅಳೆದು ತೂಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ. ಈ ತಂಡದಲ್ಲಿ ಮೂವರು ಕನ್ನಡಿಗರು ಸೇರಿಕೊಳ್ಳಬಹುದು.
ಮಯಾಂಕ್ ಅಗರ್ವಾಲ್
ದೇಶೀಯ ಪ್ರತಿಷ್ಠಿತ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಶತಕದ ಮೇಲೆ ಶತಕ ಬಾರಿಸುತ್ತಿದ್ದಾರೆ. ಮಯಾಂಕ್ ಶತಕದ ನೆರವಿನಿಂದ ಕರ್ನಾಟಕ ಆಡಿರುವ 7 ಪಂದ್ಯಗಳ ಪೈಕಿ 1ರಲ್ಲಿ ಸೋತು, 6ರಲ್ಲಿ ಗೆಲುವು ಸಾಧಿಸಿದೆ. ಈವರೆಗೆ ಮಾಯಾಂಕ್ ಆಡಿರುವ 7 ಪಂದ್ಯಗಳಲ್ಲಿ 4 ಶತಕ ಹಾಗೂ 1 ಅರ್ಧಶತಕದೊಂದಿಗೆ 613 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಏಳು ಇನ್ನಿಂಗ್ಸ್‌ಗಳಲ್ಲಿ ಮಯಾಂಕ್ ಮೂರು ಬಾರಿ ಅಜೇಯರಾಗಿ ಉಳಿದಿದ್ದಾರೆ.
ಪ್ರಸಿದ್ಧ್ ಕೃಷ್ಣ
ಆಸ್ಟ್ರೇಲಿಯಾ ವಿರುದ್ಧದ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ವೇಗಿ ಪ್ರಸಿದ್ಧ್ ಕೃಷ್ಣ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದರು. ಆಸ್ಟ್ರೇಲಿಯಾ ತಂಡ ತವರಿನಲ್ಲಿ ಪ್ರಸಿದ್ಧ್ ಕೃಷ್ಣ ಬೌಲಿಂಗ್ ದಾಳಿಗೆ ತತ್ತರಿಸಿತ್ತು. ಕೋಚ್ ಗೌತಮ್ ಗಂಭೀರ್ ಇಟ್ಟ ನಂಬಿಕೆಯನ್ನು ಪ್ರಸಿದ್ಧ್ ಕೃಷ್ಣ ಉಳಿಸಿಕೊಂಡಿದ್ದಾರೆ. ಹೀಗಾಗಿ ಪ್ರಸಿದ್ಧ್ ಕೃಷ್ಣ ಅವರನ್ನು ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಿಸುವ ನಿರ್ಧಾರವನ್ನು ಗೌತಮ್ ಗಂಭೀರ್ ಕೈಗೊಳ್ಳಬಹುದು. ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧ ಸರಣಿಗೆ ಗೈರಾಗುವ ಬಗ್ಗೆ ವರದಿಗಳು ಹೇಳಿವೆ. ಇಂತಹದ ಸಂದರ್ಭದಲ್ಲಿ ಪ್ರಸಿದ್ಧ್ ಕೃಷ್ಣ ಅವರಿಗೆ ಆಡುವ ಜನ್ನೊಂದರ ಬಳಗದಲ್ಲಿ ಬುಮ್ರಾ ಬದಲಿಗೆ ಸ್ಥಾನ ಪಡೆಯಬಹುದು.
ಕರುಣ್ ನಾಯರ್
ವಿದರ್ಭ ತಂಡದ ನಾಯಕರಾಗಿ ಕರ್ನಾಟಕದ ಮಾಜಿ ಆಟಗಾರ ಕರುಣ್ ನಾಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಬ್ಬರಿಸುತ್ತಿದ್ದಾರೆ. ಮಯಾಂಕ್ ಅಗರ್ವಾಲ್ ಜೊತೆಗೆ ಬಾರಿಯ ವಿಜಯ ಹಜಾರೆ ಟೂರ್ನಿಯಲ್ಲಿ 500ಕ್ಕೂ ಹೆಚ್ಚು ರನ್ ಕಲೆಹಾಕಿರುವ ದಾಖಲೆಯನ್ನು ಕರುಣ್ ನಾಯರ್ ಹೊಂದಿದ್ದಾರೆ.
ಕಣಕ್ಕಿಳಿಯುತ್ತಿರುವ ಕರ್ನಾಟಕದ ಮಾಜಿ ಆಟಗಾರ ಕರುಣ್ ನಾಯರ್ 5 ಇನಿಂಗ್ಸ್‌ಗಳಲ್ಲಿ 4 ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 542 ರನ್ ಕಲೆಹಾಕಿದ್ದಾರೆ. ಇದರ ನಡುವೆ 67 ಸಿಕ್ಸ್ ಹಾಗೂ 6 ಫೋರ್ಗಳನ್ನು ಬಾರಿಸಿದ್ದಾರೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ 5 ಇನಿಂಗ್ಸ್‌ಗಳಲ್ಲಿ ಕರುಣ್ ನಾಯರ್ 4 ಬಾರಿ ಅಜೇಯರಾಗಿ ಉಳಿದಿದ್ದಾರೆ. ಕರುಣ್ ನಾಯರ್ 5 ಇನಿಂಗ್ಸ್‌ಗಳಲ್ಲಿ 4 ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 542 ರನ್ ಕಲೆಹಾಕಿದ್ದಾರೆ. ಇದರ ನಡುವೆ 67 ಸಿಕ್ಸ್ ಹಾಗೂ 6 ಫೋರ್ಗಳನ್ನು ಬಾರಿಸಿದ್ದಾರೆ. ಇಂಟ್ರೆಸ್ಟಿಂಗ್ ವಿಷಯ ಎಂದರೆ 5 ಇನಿಂಗ್ಸ್‌ಗಳಲ್ಲಿ ಕರುಣ್ ನಾಯರ್ 4 ಬಾರಿ ಅಜೇಯರಾಗಿ ಉಳಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications