IND vs ENG: ಐದನೇ ಟಿ20 ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ಅವಕಾಶ?; ಸುಳಿವು ಕೊಟ್ರಾ ಕೋಚ್?
ಪ್ರಸ್ತುತ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ ಭಾರತ ಆತಿಥ್ಯ ವಹಿಸುತ್ತಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿ ಭಾರೀ ಕುತೂಹಲ ಹುಟ್ಟು ಹಾಕಿದೆ. ಈಗಾಗಲೇ ಇಂಗ್ಲೆಂಡ್ ವಿರುದ್ಧ ಸರಣಿ ಭಾರತ ಗೆದ್ದಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಕೊನೆಯ ಪಂದ್ಯ ಫೆಬ್ರವರಿ 2 ರಂದು ಮುಂಬೈಮ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವೇಗದ ಬೌಲರ್ ಮೊಹಮ್ಮದ್ ಶಮಿ ಆಡುವ ನಿರೀಕ್ಚೆಯಿದೆ.
ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಮೊಹಮ್ಮದ್ ಶಮಿ ಕಣಕ್ಕಿಳಿದಿದ್ದರು. ಆದರೆ, ಅವರು ಒಂದೂ ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ. ಇದೀಗ ಮತ್ತೊಮ್ಮೆ ಶಮಿ ಅವರನ್ನು ಆಡಲಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಮುಂದಾಗುವುದೇ ಎಂಬುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿದೆ. ಈ ಬಗ್ಗೆ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಮೋರ್ನೆ ಮಾರ್ಕೆಲ್ ಸುಳಿವು ಕೊಟ್ಟಿದ್ದಾರೆ.

ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಇದುವರೆಗೆ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದಾರೆ. ಮೊದಲೆರಡು ಪಂದ್ಯಗಳಲ್ಲಿ ಅವರು ಆಡುವ ಹನ್ನೊಂದರ ಬಳಗದಿಂದ ಹೊರಗುಳಿದಿದ್ದರು. ಆದರೆ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಶಮಿ ಆಡುವ ಅವಕಾಶ ಪಡೆದಿದ್ದರು. ಆದರೆ ಶಮಿ ಅತ್ಯುತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿಲ್ಲ. ಈ ಪಂದ್ಯದಲ್ಲಿ ಶಮಿ ತಮ್ಮ 3 ಓವರ್‌ಗಳಲ್ಲಿ 25 ರನ್ ನೀಡಿ ವಿಕೆಟ್ ಪಡೆಯುವಲ್ಲಿ ವಿಫಲವಾಗಿದ್ದರು.
ಪುಣೆ ಟಿ20 ಪಂದ್ಯದ ವೇಳೆ ಶಮಿ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಟ್ಟಾಗ, ಅವರ ಫಿಟ್ನೆಸ್ ಬಗ್ಗೆ ಮತ್ತೆ ಪ್ರಶ್ನೆಗಳು ಏಳಲಾರಂಭಿಸಿದವು. ಆದರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಶಮಿ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಐದನೇ ಟಿ20 ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಶಮಿ ಬಗ್ಗೆ ಮೊರ್ಕೆಲ್ ಮಾತನಾಡಿದ್ದಾರೆ.
ಮಾರ್ಕೆಲ್ ಹೇಳಿದ್ದೇನು?
ಮೊಹಮ್ಮದ್ ಶಮಿ ಚೆನ್ನಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಅಭ್ಯಾಸದ ವೇಳೆ ಉತ್ತಮ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಬಹುಶಃ ಮುಂದಿನ ಪಂದ್ಯದಲ್ಲಿ ಅವಕಾಶ ಪಡೆಯಲಿದ್ದಾರೆ. ವಿಷಯಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ನೋಡುತ್ತೇವೆ. ಎಲ್ಲರೂ ಅವರನ್ನು ಮರಳಿ ನೋಡಲು ಉತ್ಸುಕರಾಗಿದ್ದಾರೆ. ತಂಡದ ಯುವ ಆಟಗಾರರೊಂದಿಗೆ ಅವರು ಹಂಚಿಕೊಳ್ಳುತ್ತಿರುವ ಅನುಭವವು ಸ್ಫೂರ್ತಿದಾಯಕವಾಗಿದೆ ಎಂದು ಮಾರ್ಕೆಲ್ ಹೇಳಿದ್ದಾರೆ.
ಪುಣೆಯಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ 15 ರನ್‌ಗಳಿಂದ ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ 9 ವಿಕೆಟ್ ನಷ್ಟಕ್ಕೆ 181 ರನ್ ಕಲೆ ಹಾಕಿತ್ತು. ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ತಂಡ 19.4 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟಾಯಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು ವಶಪಡಿಸಿಕೊಂಡಿತ್ತು. ಅಲ್ಲದೆ, ಭಾರತ ಸರಣಿಯಲ್ಲಿ 3-1 ಅಂತರದಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications