ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿಗೆ ಚಾನ್ಸ್?
ಭಾರತ ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿದೆ. ಈ ವೇಳೆ ಉಭಯ ತಂಡಗಳ ನಡುವೆ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಾಗುತ್ತದೆ. ಈ ಸರಣಿಯ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಈ ಸರಣಿಯಲ್ಲಿ ಪದಾರ್ಪಣೆ ಮಾಡುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.
15 ವರ್ಷದ ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಪದಾರ್ಪಣೆ ಮಾಡುತ್ತಾರೆ ಎಂಬ ಲೆಕ್ಕಾಚಾರ ಹಾಕಿಕೊಳ್ಳಲಾಗಿತ್ತು. ಆದರೆ ಈ ಪ್ರವಾಸದಲ್ಲಿ ಅವರಿಗೆ ಅವಕಾಶ ಲಭಿಸಲಿಲ್ಲ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವೈಭವ್ ಕಣಕ್ಕೆ ಇಳಿಯಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಈ ಬಗ್ಗೆ ನಾಯಕ ಶ್ರೇಯಸ್ ಅಯ್ಯರ್ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶ್ರೇಯಸ್ ಅಯ್ಯರ್ ಅವರಿಗೆ ವೈಭವ್ ಅವರ ಚೊಚ್ಚಲ ಪಂದ್ಯದ ಬಗ್ಗೆ ಕೇಳಲಾಯಿತು. ಅದಕ್ಕೆ ಶ್ರೇಯಸ್ ತಂಡದ ಯೋಜನೆಯನ್ನು ರಹಸ್ಯವಾಗಿಟ್ಟರು. ನಮ್ಮ ತಂಡದಲ್ಲಿ ಯಾರಿಗೆ ಅವಕಾಶ ನೀಡಬೇಕು ಎಂಬುದು ಆಂತರಿಕ ವಿಷಯ. ನಮ್ಮ ತಂಡದ ಸಂಯೋಜನೆಯನ್ನು ಎಲ್ಲರಿಗೂ ಬಹಿರಂಗಪಡಿಸಲು ಸಾಧ್ಯವಿಲ್ಲ, ಏಕೆಂದರೆ ಅದು ಎದುರಾಳಿ ತಂಡಕ್ಕೆ ನಮ್ಮ ತಂತ್ರವನ್ನು ಬಹಿರಂಗಪಡಿಸುತ್ತದೆ. ವೈಭವ್ ಒಬ್ಬ ಪ್ರತಿಭಾನ್ವಿತ ಆಟಗಾರ. ಅವರು ಅವಕಾಶ ಸಿಕ್ಕಾಗಲೆಲ್ಲಾ ಅದ್ಭುತ ಪ್ರದರ್ಶನ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಆಟಗಾರರಿಗೆ ಬೆಂಬಲಿಸುವುದು ಅಗತ್ಯ
ತಂಡದಲ್ಲಿರುವ ಆಟಗಾರರನ್ನು ಬೆಂಬಲಿಸುವುದು ಅಗತ್ಯ. ಉತ್ತಮ ಪ್ರದರ್ಶನ ನೀಡಿದ ಒಬ್ಬ ಆಟಗಾರನನ್ನು ಮಾತ್ರವಲ್ಲ, ಅಸಾಧಾರಣ ಪ್ರದರ್ಶನ ನೀಡಿದ ಆಟಗಾರರನ್ನು ಬೆಂಬಲಿಸಬೇಕು. ಆಟಗಾರರಲ್ಲಿ ಆತ್ಮವಿಶ್ವಾಸವನ್ನು ತುಂಬಲು, ಅವರಿಗೆ ಅವಕಾಶಗಳನ್ನು ಒದಗಿಸುವುದು ಬಹಳ ಮುಖ್ಯ. ಈ ಆಟಗಾರರು ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದಾರೆ. ಅವರ ಕಷ್ಟದ ಸಮಯದಲ್ಲಿ ಅವರ ಬೆನ್ನಿಗೆ ನಿಲ್ಲುವುದು ಅಗತ್ಯ ಎಂದು ಶ್ರೇಯಸ್ ಹೇಳಿದ್ದಾರೆ.
ಐರ್ಲೆಂಡ್ ಪ್ರವಾಸದಲ್ಲಿ ತಂಡ ಕಂಡ ಸೋಲು ನಿರಾಶಾದಾಯಕ. ಐರ್ಲೆಂಡ್ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಐರ್ಲೆಂಡ್ ತಂಡ ಆಟದ ಪ್ರತಿಯೊಂದು ಹಂತದಲ್ಲೂ ನಮ್ಮನ್ನು ಮೀರಿಸಿದರು ಎಂದಿದ್ದಾರೆ. ಇಂಗ್ಲೆಂಡ್ ವಿರುದ್ದದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಬುಧವಾರ (ಜು.1) ರಂದು ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆಯಲಿದೆ.
ವೈಭವ್ ಸೂರ್ಯವಂಶಿ ಸಾಧನೆ
15 ವರ್ಷದ ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್ 2026ರಲ್ಲಿ ಅಮೋಘ ಪ್ರದರ್ಶನ ನೀಡಿದ ಆಟಗಾರ. ಇವರ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕರಾಗಿ ಕಣಕ್ಕೆ ಇಳಿದು ಮಿಂಚು ಹರಿಸಿದ್ದಾರೆ. ರಾಯಲ್ಸ್ ತಂಡ ಎರಡನೇ ಕ್ವಾಲಿಫೈಯರ್ ವರೆಗೂ ಅರ್ಹತೆ ಪಡೆಯುವಲ್ಲಿ ಇವರ ಕಾಣಿಕೆ ಅಪಾರ. ಇವರು 19ನೇ ಆವೃತ್ತಿಯಲ್ಲಿ ಆಡಿದ 16 ಪಂದ್ಯಗಳಲ್ಲಿ 48ರ ಸರಾಸರಿಯಲ್ಲಿ 776 ರನ್ ಕಲೆ ಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇವರು ಒಂದೇ ಆವೃತ್ತಿಯಲ್ಲಿ 72 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ದೊಡ್ಡ ದಾಖಲೆ ಬರೆದಿದ್ದಾರೆ. ಇವರ ಈ ಸ್ಥಿರ ಪ್ರದರ್ಶನದ ಫಲವಾಗಿ ಇವರಿಗೆ ಆರೆಂಜ್ ಕ್ಯಾಪ್ ಲಭಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications