ಆರ್‌ಸಿಬಿಗೆ ಬ್ಯಾಕ್-ಟು-ಬ್ಯಾಕ್ ಕಪ್ ಗೆಲ್ಲಿಸಿಕೊಟ್ಟ ರಜತ್ ಪಾಟಿದಾರ್‌ಗೆ ಟೀಮ್ ಇಂಡಿಯಾದಲ್ಲಿ ಸಿಗುತ್ತಾ ಸ್ಥಾನ?
ಭಾರತ ಶನಿವಾರದಿಂದ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೆ ನ್ಯೂ ಚಂಡೀಗಢ ಮೈದಾನ ಸಾಕ್ಷಿಯಾಗಲಿದೆ. ಈ ವೇಳೆ ಸ್ಟಾರ್ ಆಟಗಾರರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇನ್ನು ಈ ಸರಣಿ ಮುಗಿದ ಬಳಿಕ ಭಾರತ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಿದೆ. ಶೀಘ್ರದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಂಡ ಪ್ರಕಟಿಸಲಿದ್ದು, ಈ ವೇಳೆ ಎಲ್ಲರ ಕಣ್ಣುಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ರಜತ್ ಪಾಟಿದಾರ್ ಅವರ ಮೇಲೆ ನೆಟ್ಟಿತುಂಬವೆ.
ರಜತ್ ಪಾಟಿದಾರ್ ಅವರ ಮುಂದಾಳತ್ವದಲ್ಲಿ ಆರ್‌ಸಿಬಿ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಸಫಲವಾದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಈ ಮೊದಲು ಈ ಸಾಧನೆಯನ್ನು ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮಾಡಿ ಬೀಗಿದ್ದವು.

ಆರ್‌ಸಿಬಿ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವಲ್ಲಿ ನಾಯಕ ರಜತ್ ಪಾಟಿದಾರ್ ಅವರ ಕೊಡುಗೆ ಅಪಾರ. ಇವರು ಮಧ್ಯಮ ಕ್ರಮಾಂಕದಲ್ಲಿ ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆಯನ್ನು ಹೊಂದಿರುವ ಆಟಗಾರ. ಅಲ್ಲದೆ ಸ್ಪಿನ್ ಬೌಲರ್‌ಗಳ ವಿರುದ್ಧ ಸಿಕ್ಸರ್‌ಗಳನ್ನು ಬಾರಿಸುವ ಕ್ಷಮತೆಯನ್ನು ಹೊಂದಿರುವ ಆಟಗಾರ. ಈ ಐಪಿಎಲ್‌ನಲ್ಲಿ ರಜತ್ ತಮ್ಮ ನಾಯಕತ್ವದ ಗುಣ ಹಾಗೂ ಬ್ಯಾಟಿಂಗ್‌ನಿಂದ ಗಮನ ಸೆಳೆದಿದ್ದಾರೆ. 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 41ರ ಸರಾಸರಿಯಲ್ಲಿ 501 ರನ್ ಕಲೆ ಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳು ಸಹ ಸೇರಿವೆ.
ಟಿ20 ತಂಡಕ್ಕೆ ಆಯ್ಕೆಯಾಗುವ ಕನಸು
ರಜತ್ ಅವರ ಅಮೋಘ ಪ್ರದರ್ಶನ ಅವರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಮಾಡುತ್ತದಾ ಎಂಬ ಪ್ರಶ್ನೆ ಉದ್ಭವಿಸಿದೆ. ಈಗಾಗಲೇ ಭಾರತದ ಪರ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿರುವ 33 ವರ್ಷದ ರಜತ್ ಪಾಟಿದಾರ್ ಟಿ20 ಕ್ರಿಕೆಟ್‌ಗೂ ಪದಾರ್ಪಣೆ ಮಾಡುವ ಕನಸು ಕಾಣುತ್ತಿದೆ. ಇದೇ ವೇಳೆ ಇವರು ಟೀಮ್ ಇಂಡಿಯಾಕ್ಕೆ ಆಯ್ಕೆ ಆಗಿ ಮಧ್ಯಮ ಕ್ರಮಾಂಕಕ್ಕೆ ಬಲ ತುಂಬುವ ಭರವಸೆ ಮೂಡಿಸಿದ್ದಾರೆ.

ಮತ್ತೊಂದು ಜವಾಬ್ದಾರಿ
ಐಪಿಎಲ್‌ನ ಯಶಸ್ವಿ ನಾಯಕ ರಜತ್ ಪಾಟಿದಾರ್ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಕ್ಕಿದೆ. ಐಪಿಎಲ್ ಮುಗಿದ ಕೇವಲ ಮೂರೇ ದಿನಗಳಲ್ಲಿ ಅವರು ಮಧ್ಯಪ್ರದೇಶ ಲೀಗ್ (ಎಂಪಿಎಲ್) ಟಿ20 ಟೂರ್ನಿಯಲ್ಲಿ 'ಗ್ವಾಲಿಯರ್ ಚೀತಾಸ್' ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ. ಆರ್‌ಸಿಬಿಯಲ್ಲಿ ಅತ್ಯುತ್ತಮವಾಗಿ ತಂಡ ಮುನ್ನಡೆಸಿದ್ದ ಇವರು, ಈಗ ಗ್ವಾಲಿಯರ್ ತಂಡವನ್ನೂ ಚಾಂಪಿಯನ್ ಮಾಡಲು ಸಜ್ಜಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications