IND vs AUS: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡ್ತಾರಾ ರೋಹಿತ್ ಶರ್ಮಾ?
ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಅವರು ಎರಡನೇ ಬಾರಿಗೆ ತಂದೆಯಾಗಿದ್ದಾರೆ. ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಅವರು ಮಗನಿಗೆ ಜನ್ಮ ನೀಡಿದ್ದಾರೆ. ಈ ಕುರಿತು ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ರೋಹಿತ್ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಇದ್ದಾರೆ. ಮಗುವಿನ ಜನನದ ಕಾರಣ ಅವರು ಬಾರ್ಡರ್ ಗವಾಸ್ಕರ್ ಟ್ರೋಫಿಗಾಗಿ ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ತೆರಳಲಿಲ್ಲ. ಈಗ ಮಗ ಜನಿಸಿರುವುದರಿಂದ ನವೆಂಬರ್ 22ರಿಂದ ಆರಂಭವಾಗಲಿರುವ ಪರ್ತ್ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ.
ಪರ್ತ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿಯಬಹುದು. ಏಕೆಂದರೆ ರೋಹಿತ್ ಶರ್ಮಾ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಮುಂಬೈನಲ್ಲಿಯೇ ಇರಬಹುದು ಎಂದು ವರದಿಗಳು ತಿಳಿಸಿವೆ. ರೋಹಿತ್ ಶರ್ಮಾ ಅವರು ತಮ್ಮ ನಿರ್ಧಾರದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ರೋಹಿತ್ ಶರ್ಮಾ ಮೊದಲ ಟೆಸ್ಟ್‌ನಲ್ಲಿ ಆಡುವುದಿಲ್ಲ. ಅವರು ತಮ್ಮ ಕುಟುಂಬ ಮತ್ತು ಮಗುವಿನೊಂದಿಗೆ ಸ್ವಲ್ಪ ಸಮಯ ಕಳೆಯಲು ಬಯಸಿದ್ದಾರೆ. ಅವರ ನಿರ್ಧಾರವನ್ನು ಬಿಸಿಸಿಐ ಸಂಪೂರ್ಣವಾಗಿ ಗೌರವಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟೀಮ್ ಇಂಡಿಯಾ ನಾಯಕ ಯಾರು?
ಪರ್ತ್ ಟೆಸ್ಟ್‌ನಲ್ಲಿ ರೋಹಿತ್ ಆಡುವ ಬಗ್ಗೆ ಅನುಮಾನವಿದೆ. ಇಂತಹ ಸಂದರ್ಭದಲ್ಲಿ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. ಪರ್ತ್ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ಯಶಸ್ವಿ ಜೈಸ್ವಾಲ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಬಹುದು. ಮತ್ತೊಂದೆಡೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್‌ಗಳಾದ ಶುಭಮನ್ ಗಿಲ್, ಸರ್ಫರಾಜ್ ಖಾನ್ ಮತ್ತು ಕೆಎಲ್ ರಾಹುಲ್ ಅಭ್ಯಾಸದ ವೇಳೆ ಗಾಯಗೊಂಡಿದ್ದಾರೆ. ಈ ಮೂವರು ಸ್ಟಾರ್ ಬ್ಯಾಟರ್‌ಗಳು ಮೊದಲ ಟೆಸ್ಟ್ ಪಂದ್ಯ ಆಡುವ ಬಗ್ಗೆಯೂ ಯಾವುದೇ ಮಾಹಿತಿ ಹೊರ ಬಂದಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications