ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡುತ್ತಾರಾ?; ಹಿಟ್‌ಮ್ಯಾನ್ ಕೊಟ್ಟ ಉತ್ತರವೇನು?
ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಮುಕ್ತಾಯಗೊಂಡ 2024ರ ಐಸಿಸಿ ಟಿ20 ವಿಶ್ವಕಪ್ ಗೆಲುವಿನ ನಂತರ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿಯೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ.
ಎಂಎಸ್ ಧೋನಿ ನಂತರ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ಎರಡನೇ ಭಾರತೀಯ ನಾಯಕರಾಗಿ ಹೊರಹೊಮ್ಮಿದ್ದಾರೆ.
ಇದೀಗ ಭಾರತ ಕ್ರಿಕೆಟ್ ತಂಡದಲ್ಲಿ ರೋಹಿತ್ ಶರ್ಮಾ ಅವರ ಭವಿಷ್ಯದ ಬಗ್ಗೆ ಹೆಚ್ಚು ಚರ್ಚಿಸಲಾಗುತ್ತಿದೆ ಮತ್ತು ಅವರು 2027ರಲ್ಲಿ ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ಆಡುತ್ತಾರೆಯೇ ಎಂಬ ಊಹಾಪೋಹಗಳು ಪ್ರಾರಂಭವಾಗಿವೆ.

ರೋಹಿತ್ ಶರ್ಮಾ ಮುಂದಿನ ಏಕದಿನ ವಿಶ್ವಕಪ್ ಆಡುತ್ತಾರಾ?
2023ರಲ್ಲಿ ಭಾರತ ತಂಡ ಐಸಿಸಿ ಏಕದಿನ ವಿಶ್ವಕಪ್ ಗೆಲ್ಲುವುದನ್ನು ತಪ್ಪಿಸಿಕೊಂಡಾಗ ಭಾರತೀಯ ನಾಯಕ ರೋಹಿತ್ ಶರ್ಮಾ ನಿರಾಶೆಗೊಂಡರು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಫೈನಲ್‌ನಲ್ಲಿ ಅನುಭವಿ ಬಲಗೈ ಬ್ಯಾಟರ್‌ನ ದೊಡ್ಡ ಕನಸು ಭಗ್ನಗೊಂಡಿತು.
ರೋಹಿತ್ ಶರ್ಮಾಗೆ ಇನ್ನೂ ಒಂದು ಗುರಿಯಿದೆ, ಟೀಮ್ ಇಂಡಿಯಾವನ್ನು ಪ್ರತಿಷ್ಠಿತ ಐಸಿಸಿ ಏಕದಿನ ವಿಶ್ವಕಪ್ ಗೆಲುವಿಗೆ ಮಾರ್ಗದರ್ಶನ ಮಾಡುವುದು.
ಆದರೆ, ಅವರು 2027ರಲ್ಲಿ ನಡೆಯಲಿರುವ ಮುಂದಿನ ಏಕದಿನ ವಿಶ್ವಕಪ್ ಪಂದ್ಯಾವಳಿಯವರೆಗೆ ತಮ್ಮ ವೃತ್ತಿಜೀವನವನ್ನು ವಿಸ್ತರಿಸಲು ಸಾಧ್ಯವಾಗುತ್ತದೆಯೇ? ಎಂಬುದು ಪ್ರಮುಖ ಪ್ರಶ್ನೆಯಾಗಿದೆ. ಏಕೆಂದರೆ ಹಿಟ್‌ಮ್ಯಾನ್‌ಗೆ ಈಗಾಗಲೇ 37 ವರ್ಷ ವಯಸ್ಸಾಗಿದೆ.
ರೋಹಿತ್ ಶರ್ಮಾ ಮುಂದಿನ ಏಕದಿನ ವಿಶ್ವಕಪ್‌ನಲ್ಲಿ ಭಾಗವಹಿಸಲು ಬಯಸಿದರೆ, ಅವರು ತಮ್ಮ ಫಿಟ್ನೆಸ್‌ನಲ್ಲಿ ಕೆಲಸ ಮಾಡಬೇಕಾಗುತ್ತದೆ ಮತ್ತು ಅತ್ಯುತ್ತಮವಾಗಿ ಆಡಬೇಕಾಗುತ್ತದೆ.

2027ರ ಏಕದಿನ ವಿಶ್ವಕಪ್ ಬಗ್ಗೆ ರೋಹಿತ್ ಶರ್ಮಾ ಹೇಳಿದ್ದೇನು?
ಮುಂಬರುವ 2027ರ ಏಕದಿನ ವಿಶ್ವಕಪ್‌ನಲ್ಲಿ ಗೆಲುವು ಸಾಧಿಸುವ ಬಯಕೆಯನ್ನು ವ್ಯಕ್ತಪಡಿಸಿದ ರೋಹಿತ್ ಶರ್ಮಾ, ಭಾರತೀಯ ಕ್ರಿಕೆಟ್ ತಂಡದೊಂದಿಗೆ ತಮ್ಮ ಭವಿಷ್ಯದ ಆಕಾಂಕ್ಷೆಗಳನ್ನು ಚರ್ಚಿಸಿದರು.
"ನಾನು ಇನ್ನೂ ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿದ್ದೇನೆ. ಆದ್ದರಿಂದ ನಾನು ಇನ್ನೂ ಕೆಲವು ವರ್ಷಗಳ ಕಾಲ ಆಟವಾಡಲು ಬಯಸುತ್ತೇನೆ. 50 ಓವರ್‌ಗಳ ವಿಶ್ವಕಪ್ ಗೆಲ್ಲುವುದು ನನ್ನ ಪ್ರಮುಖ ಗುರಿಯಾಗಿದೆ. ಹೆಚ್ಚುವರಿಯಾಗಿ, ನಾವು 2025ರಲ್ಲಿ ಲಾರ್ಡ್ಸ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವನ್ನು ಹೊಂದಿದ್ದೇವೆ ಮತ್ತು ನಾವು ಅದಕ್ಕೆ ಅರ್ಹತೆ ಪಡೆಯುತ್ತೇವೆ ಎಂದು ನಾನು ಭಾವಿಸುತ್ತೇನೆ," ಎಂದು ರೋಹಿತ್ ಶರ್ಮಾ ತಿಳಸಿದರು.
ಮುಂದಿನ ಏಕದಿನ ವಿಶ್ವಕಪ್ ಯಾವಾಗ ಮತ್ತು ಎಲ್ಲಿ?
2027ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ದಕ್ಷಿಣ ಆಫ್ರಿಕಾ ರಾಷ್ಟ್ರವು ಸಹ-ಆತಿಥೇಯರಾದ ಜಿಂಬಾಬ್ವೆ ಮತ್ತು ನಮೀಬಿಯಾದೊಂದಿಗೆ ಆಯೋಜಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications