For Quick Alerts
ALLOW NOTIFICATIONS  
For Daily Alerts
 

2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?

ಭಯೋತ್ಪಾದನೆ, ಗಡಿ ವಿಚಾರ ಮತ್ತು ರಾಜಕೀಯ ಬಿಕ್ಕಟ್ಟಿನಿಂದಾಗಿ ದಶಕಕ್ಕೂ ಹೆಚ್ಚು ಕಾಲ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆದಿಲ್ಲ. ಅಲ್ಲದೆ ಭಾರತ ತಂಡ ಪಾಕಿಸ್ತಾನದ ಪ್ರವಾಸ ಕೈಗೊಂಡು ಸುಮಾರು ವರ್ಷಗಳೇ ಕಳೆದಿವೆ.

ಏಷ್ಯಾ ಕಪ್ ಮತ್ತು ಐಸಿಸಿ ವಿಶ್ವಕಪ್‌ನಂತಹ ಪಂದ್ಯಾವಳಿಗಳನ್ನು ಹೊರತುಪಡಿಸಿ, 2012ರಿಂದ ಭಾರತ ಮತ್ತು ಪಾಕಿಸ್ತಾನ ತಂಡಗಳು ದ್ವಿಪಕ್ಷೀಯವಾಗಿ ಮುಖಾಮುಖಿಯಾಗಿಲ್ಲ. ಇದೀಗ 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಕ್ರಿಕೆಟ್ ತಂಡ ನೆರೆಯ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಲಿದೆಯೇ ಎಂಬ ವಿಚಾರ ಮುನ್ನೆಲೆಗೆ ಬಂದಿದೆ.

Will Team India Travel to Pakistan for Champions Trophy 2025 What did the BCCI say

2023ರ ಏಕದಿನ ವಿಶ್ವಕಪ್‌ನಲ್ಲಿ ಅಗ್ರ 8 ಸ್ಥಾನಗಳನ್ನು ಪಡೆದ ತಂಡಗಳನ್ನು ಒಳಗೊಂಡ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಬಿಸಿಸಿಐ ಬಳಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಂಗಲಾಚುತ್ತಿದೆ.

ಇದೇ ವೇಳೆ ಬಿಸಿಸಿಐ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪಿಕೊಂಡರೆ, ಭಾರತದೊಂದಿಗೆ ದ್ವಿಪಕ್ಷೀಯ ಸರಣಿಯನ್ನು ಪರಿಗಣಿಸುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

ಮುಂದಿನ ವರ್ಷ ಅಂದರೆ, 2025ರ ಚಾಂಪಿಯನ್ಸ್ ಟ್ರೋಫಿಯ ಆತಿಥೇಯ ರಾಷ್ಟ್ರ ಎಂದು 2021ರಲ್ಲಿಯೇ ಪಾಕಿಸ್ತಾನವನ್ನು ಗೊತ್ತುಪಡಿಸಲಾಗಿತ್ತು. 2009ರಲ್ಲಿ ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ತಂಡದ ಮೇಲೆ ನಡೆದ ದಾಳಿಯ ನಂತರ, ಪಾಕಿಸ್ತಾನವು ಇದೇ ಮೊದಲ ಬಾರಿಗೆ ಐಸಿಸಿ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದು ದೇಶದ ಪ್ರಮುಖ ಘಟನೆಯಾಗಲಿದೆ.

Will Team India Travel to Pakistan for Champions Trophy 2025 What did the BCCI say

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳ ಪ್ರಕಾರ, ಭಾರತ ತಂಡವು 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದರಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಟೂರ್ನಿ ಸ್ಥಳವನ್ನು ಬದಲಾಯಿಸಲು ಅಥವಾ ಹೈಬ್ರಿಡ್ ಮಾದರಿಯನ್ನು ಅಳವಡಿಸಲು ಪರಿಗಣನೆ ಇರಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪಾಕಿಸ್ತಾನಕ್ಕೆ ಪ್ರಯಾಣಿಸಲು ಭಾರತ ತಂಡವು ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯುವುದು ನಿರ್ಣಾಯಕವಾಗಿದೆ ಮತ್ತು ಉಭಯ ದೇಶಗಳ ನಡುವಿನ ಅಸ್ತಿತ್ವದಲ್ಲಿರುವ ಸಂಬಂಧಗಳನ್ನು ಗಮನಿಸಿದರೆ, ಈ ಅನುಮೋದನೆಯು ಸಮಸ್ಯೆಯಾಗಿ ಪರಿಣಮಿಸಬಹುದು. ಅಲ್ಲದೆ, ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಸರಣಿಯ ನಿರೀಕ್ಷೆಯು ಭವಿಷ್ಯದಲ್ಲಿ ಅಸಂಭವವಾಗಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

"ದ್ವಿಪಕ್ಷೀಯ ಸರಣಿಗಳನ್ನು ಮರೆತುಬಿಡಿ, ಐಸಿಸಿ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸದಿರಬಹುದು. ಟೂರ್ನಿ ಸ್ಥಳ ಬದಲಾವಣೆ ಇರಬಹುದು, ಅಲ್ಲದೆ ಹೈಬ್ರಿಡ್ ಮಾದರಿಯೂ ಸಾಧ್ಯ. ಭಾರತೀಯ ತಂಡದ ಪ್ರಯಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಬೇಕಾಗುತ್ತದೆ. ಪ್ರಸ್ತುತ ಪಾಕಿಸ್ತಾನದೊಂದಿಗಿನ ನಮ್ಮ ಸಂಬಂಧವೂ ಉತ್ತಮವಾಗಿಲ್ಲ".

"ಚಾಂಪಿಯನ್ಸ್ ಟ್ರೋಫಿ ಐಸಿಸಿ ಪಂದ್ಯಾವಳಿಯಾಗಿದೆ. ಆದ್ದರಿಂದ ಇದು ಭಾರತಕ್ಕೆ ಕಠಿಣ ನಿರ್ಧಾರವಾಗಿದೆ. ಆದರೆ ಸರ್ಕಾರದ ಆದೇಶ/ಗ್ರೀನ್ ಸಿಗ್ನಲ್ ಇಲ್ಲದೆ ಏನೂ ಆಗುವುದಿಲ್ಲ. ದ್ವಿಪಕ್ಷೀಯ ಸರಣಿಗಳನ್ನು ನಾವು ಮುಂದಿನ ದಿನಗಳಲ್ಲಿ ನೋಡುವುದಿಲ್ಲ, ಅದು ಅಸಾಧ್ಯವಾಗಿದೆ," ಎಂದು ಬಿಸಿಸಿಐ ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಕೊನೆಯ ಸೀಮಿತ ಓವರ್‌ಗಳ ದ್ವಿಪಕ್ಷೀಯ ಸರಣಿಯು 2012-13ರಲ್ಲಿ ಭಾರತದಲ್ಲಿ ನಡೆದಿತ್ತು. 2023ರಲ್ಲಿ ಏಷ್ಯಾ ಕಪ್‌ನಲ್ಲಿ ಪಾಲ್ಗೊಳ್ಳಲು ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿತ್ತು.

ಪರಿಣಾಮವಾಗಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಏಷ್ಯಾ ಕಪ್‌ ಪಂದ್ಯಾವಳಿಗೆ ಹೈಬ್ರಿಡ್ ಮಾದರಿಯನ್ನು ಅಳವಡಿಸಿಕೊಂಡಿತು, ಪಾಕಿಸ್ತಾನದ ಜೊತೆಗೆ ಶ್ರೀಲಂಕಾ ಸಹ-ಆತಿಥ್ಯವಾಗಿತ್ತು. ಭಾರತ ತಂಡ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು.

ಗಮನಾರ್ಹವಾಗಿ, ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈ-ವೋಲ್ಟೇಜ್ ಪಂದ್ಯಗಳು ಪ್ರಾಥಮಿಕವಾಗಿ ಐಸಿಸಿ ಮತ್ತು ಏಷ್ಯಾಕಪ್ ಪಂದ್ಯಾವಳಿಯಲ್ಲಿ ಮಾತ್ರ ಸಂಭವಿಸುತ್ತವೆ. ಉಭಯ ತಂಡಗಳ ಇತ್ತೀಚಿನ ಹಣಾಹಣಿಯು 2023ರ ಅಹಮದಾಬಾದ್‌ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನಡೆದಿತ್ತು.

Story first published: Wednesday, April 24, 2024, 11:46 [IST]
Other articles published on Apr 24, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+