For Quick Alerts
ALLOW NOTIFICATIONS  
For Daily Alerts
 

IND vs AUS: ಆಸ್ಟ್ರೇಲಿಯಾ ವಿರುದ್ಧ ವರುಣ್ ಚಕ್ರವರ್ತಿಗೆ ಸಿಗುತ್ತಾ ಚಾನ್ಸ್?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಉಭಯ ತಂಡಗಳ ರೋಚಕ ಪಂದ್ಯದ ಮಂಗಳವಾರ ಮಾರ್ಚ್ 4 ರಂದು ದುಬೈ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡಕ್ಕೆ ಸೇಡು ತೀರಿಸಿಕೊಳ್ಳಲು ಅವಕಾಶವಿದೆ. 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವನ್ನುಆಸ್ಟ್ರೇಲಿಯಾ ಸೋಲಿಸಿತ್ತು. ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಆಸ್ಟ್ರೇಲಿಯಾವನ್ನು ಸೋಲಿಸಿ ಫೈನಲ್ ಪ್ರವೇಶಿಸುವ ಲೆಕ್ಕಾಚಾರದಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸುವುದು ಭಾರತಕ್ಕೆ ಸುಲಭದ ಮಾತಲ್ಲ. ಟೀಮ್ ಇಂಡಿಯಾದಷ್ಟೇ ಆಸ್ಟ್ರೇಲಿಯಾ ಕೂಡ ಬಲಿಷ್ಠ ತಂಡವಾಗಿದೆ. ಟೀಮ್ ಇಂಡಿಯಾ ಆಟದಲ್ಲಿ ಸ್ವಲ್ಪ ಮೈ ಮರೆತರು ಆಸ್ಟ್ರೇಲಿಯಾ ಫೈನಲ್ ತಲುಪುವ ಅವಕಾಶವನ್ನು ತನ್ನದಾಗಿಸಿಕೊಳ್ಳಲಿದೆ. ಇದು ನಡೆಯಬಾರದು ಎಂದರೆ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗ ಬಲಿಷ್ಠವಾಗಿರಬೇಕು. ಇಂತಹ ಸಂದರ್ಭದಲ್ಲಿ ಸ್ಪಿನ್ನರ್ ವರುಣ್ ಚಕ್ರವತಿ ಅವರಿಗೆ ಅವಕಾಶ ಸಿಗುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.

Will Varun Chakravarthy get chance in Champions Trophy semi-final against Australia

ಆಸ್ಟ್ರೇಲಿಯಾ ವಿರುದ್ಧ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವರುಣ್ ಚಕ್ರವರ್ತಿ ಅವರಿಗೆ ಅವಕಾಶ ಸಿಗುತ್ತದೆಯೋ? ಅಥವಾ ಇಲ್ಲವೋ? ಎಂಬ ಸಣ್ಣ ಸುಳಿವು ಇಲ್ಲ. ಎ ಗುಂಪಿನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ವೇಗಿ ಹರ್ಷಿತ್ ರಾಣಾ ಬದಲಿಗೆ ವರುಣ್ ಚಕ್ರವರ್ತಿ ಕಣಕ್ಕಿಳಿದಿದ್ದರು. ಅದ್ಭುತ ಬೌಲಿಂಗ್ ಪ್ರದರ್ಶನ ಮಾಡಿದ ವರಣ್ ನ್ಯೂಜಿಲೆಂಡ್ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪಂದ್ಯದಲ್ಲಿ ಅವರು ಐದು ವಿಕೆಟ್‌ಗಳನ್ನು ಕಬಳಿಸುವ ಮೂಲಕ ಹಲವು ದಾಖಲೆಗಳನ್ನು ಮಾಡಿದ್ದರು.

ವರುಣ್ ಚಕ್ರವರ್ತಿ ತಮ್ಮ 10 ಓವರ್‌ಗಳ ಕೋಟಾದಲ್ಲಿ ಕೇವಲ 42 ರನ್‌ಗಳನ್ನು ನೀಡಿ 5 ವಿಕೆಟ್ ಪಡೆದಿದ್ದರು. ನ್ಯೂಜಿಲೆಂಡ್‌ನ ವಿಲ್ ಯಂಗ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ ಮತ್ತು ಮಿಚೆಲ್ ಸ್ಯಾಂಟ್ನರ್ ಅವರಿಗೆ ವರುಣ್ ಪೆವಿಲಿಯನ್ ದಾರಿ ತೋರಿಸಿದ್ದರು. ಈ ಅಮೋಘ ಪ್ರದರ್ಶನಕ್ಕಾಗಿ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಸಿಕ್ಕಿತ್ತು. ಇದರ ಬೆನ್ನೆಲೇ ವರುಣ್ ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಉಳಿಯುತ್ತಾರಾ? ಎಂಬ ಪ್ರಶ್ನೆ ಕ್ರಿಕೆಟ್ ಅಭಿಮಾನಿಗಳನ್ನ ಕಾಡುತ್ತಿದೆ.

ವರದಿಗಳ ಪ್ರಕಾರ, ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಲು ಟೀಮ್ ಇಂಡಿಯಾಕ್ಕೆ ವರುಣ್‌ರಂತಹ ಬೌಲರ್‌ಗಳು ಬೇಕು. ವರುಣ್ ಚಕ್ರವರ್ತಿ ಮಧ್ಯಮ ಮತ್ತು ಕೊನೆಯ ಓವರ್‌ಗಳಲ್ಲಿ ಬೌಲಿಂಗ್ ಮಾಡುವ ಮೂಲಕ ಎದುರಾಳಿ ತಂಡಕ್ಕೆ ಮಾರಕವಾಗಿದ್ದಾರೆ. ಅವರಿಗೆ ಆಸ್ಟ್ರೇಲಿಯಾ ವಿರುದ್ಧ ಆಡಿರುವ ಅನುಭವ ವರುಣ್ ಅವರಿಗೆ ಕಡಿಮೆ ಇದೆ. ಆದರೂ ಟೀಮ್ ಇಂಡಿಯಾ ಕಳೆದ ಪಂದ್ಯದ ಆಡುವ ಹನ್ನೊಂದರ ಬಳಗದ ಮೂಲಕವೇ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಆಸ್ಟ್ರೇಲಯಾ ವಿರುದ್ಧ ವರುನ್ ಎಷ್ಟು ವಿಕೆಟ್ ಪಡೆಯುತ್ತಾರೆ? ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್- 11

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

Story first published: Monday, March 3, 2025, 13:30 [IST]
Other articles published on Mar 3, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+