Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB ಲಕ್ನೋ ವಿರುದ್ಧ ಗೆದ್ರೆ ಏನು ಲಾಭ? ಕೊನೆಯ ಪಂದ್ಯ ಸೋತ್ರೆ ಏನು ನಷ್ಟ? ಮಳೆ ಬಂದ್ರೆ...

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಲೀಗ್‌ ಹಂತದ ಕೊನೆಯ ಪಂದ್ಯವನ್ನು ಮಂಗಳವಾರ ಲಕ್ನೋನಲ್ಲಿ ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ಆಗುವ ಲಾಭ ಏನು? ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಸೋತರೇ ಬೆಂಗಳೂರು ತಂಡಕ್ಕೆ ಆಗುವ ನಷ್ಟ ಏನು? ಎಂಬ ಬಗ್ಗೆ ಕಂಪ್ಲೀಟ್ ವರದಿ ಇಲ್ಲಿದೆ.

ಆರ್‌ಸಿಬಿ ಈ ಲೀಗ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದೆ. ಈ ಲೀಗ್‌ನಲ್ಲಿ ಆರ್‌ಸಿಬಿ ಭರ್ಜರಿ ಪ್ರದರ್ಶನ ನೀಡಿದ್ದು 17 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಅಲ್ಲದೆ ಪ್ಲೇ ಆಫ್‌ಗೆ ಪ್ರವೇಶ ಪಡೆದಿದೆ. ಇನ್ನು ಆರ್‌ಸಿಬಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಅನಿವಾರ್ಯತೆ ಇದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಲು ಆರ್‌ಸಿಬಿ ಪ್ಲ್ಯಾನ್‌ ಮಾಡಿಕೊಂಡಿದೆ.

Win Secures Qualifier Loss Sends to Eliminator High-Stakes Battle for RCB Against LSG

ಪಂಜಾಬ್‌ ಕಿಂಗ್ಸ್, ಮುಂಬೈ ಇಂಡಿಯನ್ಸ್‌ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, 2 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಕಿಂಗ್ಸ್ ಆಡಿದ 14 ಪಂದ್ಯಗಳಲ್ಲಿ 9 ಜಯ ಸಾಧಿಸಿದ್ದು, 19 ಅಂಕಗಳನ್ನು ಕಲೆ ಹಾಕಿದೆ. ಇನ್ನು ಕೊನೆಯ ಲೀಗ್‌ ಪಂದ್ಯದಲ್ಲಿ ಸೋತಿರುವ ಮುಂಬೈ ಇಂಡಿಯನ್ಸ್‌ 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ಈ ಮೂಲಕ ಎಲಿಮಿನೇಟರ್‌ ಪಂದ್ಯವನ್ನು ಆಡಲಿದೆ.

ಆರ್‌ಸಿಬಿ ಗೆದ್ದರೆ ಏನು ಲಾಭ?

ಆರ್‌ಸಿಬಿ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಕಯ ಸಾಧಿಸುವ ಪ್ಲ್ಯಾನ್ ಮಾಡಿಕೊಂಡಿದೆ. ಈ ಮೂಲಕ ಪೂರ್ಣ 2 ಅಂಕಗಳನ್ನು ಕಲೆ ಹಾಕುವ ಇರಾದೆಯನ್ನುಇಟ್ಟುಕೊಂಡಿದೆ. ಈ ಮೂಲಕ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲೆರೆಡು ಸ್ಥಾನಗಳ ಪಡೆಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ರನ್‌ ರೇಟ್‌ನಿಂದ ಒಂದು ವೇಳೆ ಗೆದ್ದು ಕೊಂಡಲ್ಲಿ ಸುಲಭವಾಗಿ ಕ್ವಾಲಿಫೈಯರ್ ಪಂದ್ಯವನ್ನು ಆಡಲಿದೆ. ಕ್ವಾಲಿಫೈಯರ್‌ ಪಂದ್ಯದಲ್ಲಿ ಜಯ ಸಾಧಿಸುವ ತಂಡ, ನೇರವಾಗಿ ಫೈನಲ್‌ಗೆ ಅರ್ಹತೆ ಪಡೆದರೆ, ಸೋತ ತಂಡ ಎಲಿಮಿನೇಟರ್‌ನಲ್ಲಿ ಗೆದ್ದ ತಂಡದ ವಿರುದ್ಧ 2ನೇ ಕ್ವಾಲಿಫೈಯರ್‌ನಲ್ಲಿ ಆಡಲಿದೆ.

ಆರ್‌ಸಿಬಿ ಸೋತರೆ..

ಲಕ್ನೋ ವಿರುದ್ಧದ ಕೊನೆಯ ಲೀಗ್‌ ಪಂದ್ಯದಲ್ಲಿ ಒಂದು ವೇಳೆ ಆರ್‌ಸಿಬಿ ಸೋತಿದ್ದೇ ಆದಲ್ಲಿ, 2 ಅಂಕವನ್ನು ಕಲೆ ಹಾಕುವ ಆಸೆ ನುಚ್ಚುನೂರಾಗುತ್ತದೆ. ಈ ಮೂಲಕ ಆರ್‌ಸಿಬಿ 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆಯುತ್ತದೆ. ಅಲ್ಲದೆ ಎಲಿಮಿನೇಟರ್‌ನಲ್ಲಿ ಆಡಲಿದೆ. ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡ, 2ನೇ ಕ್ವಾಲಿಫೈಯರ್‌ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ಗೆ ಪ್ರವೇಶ ಪಡೆಯಲಿದೆ.

ಮಳೆ ಬಂದ್ರೆ...

ಒಂದು ವೇಳೆ ಲೀಗ್‌ ಹಂತದ ಕೊನೆಯ ಪಂದ್ಯಕ್ಕೆ ಮಳೆ ಕಾಟ ನೀಡಿದರೆ ಏನಾಗುತ್ತದೆ ಎಂಬ ಲೆಕ್ಕಾಚಾರ ಆರಂಭವಾಗಿವೆ. ಲಕ್ನೋ, ಆರ್‌ಸಿಬಿ ಪಂದ್ಯಕ್ಕೆ ಮಳೆ ಕಾಟ ನೀಡದರೆ ಉಭಯ ತಂಡಗಳಿಗೂ ಅಂಕವನ್ನು ಹಂಚಲಾಗುತ್ತದೆ. ಆಗ ಆರ್‌ಸಿಬಿ ತಂಡದ ಅಂಕ 18 ಆಗುತ್ತದೆ. ಆಗ ಆರ್‌ಸಿಬಿ ಹಾಗೂ ಗುಜರಾತ್ ತಂಡದ ಪಾಯಿಂಟ್ಸ್‌ ಸಮನಾಗುತ್ತವೆ. ರನ್‌ ರೇಟ್‌ ಆಧಾರದ ಮೇಲೆ ಕ್ವಾಲಿಫೈಯರ್‌ ಪಂದ್ಯವನ್ನು ಯಾವ ತಂಡ ಆಡಲಿದೆ ಎಂಬ ಚಿತ್ರಣ ಸಿಗಲಿದೆ. ಒಂದು ವೇಳೆ ಹೀಗೆ ಆದಲ್ಲಿ ಆರ್‌ಸಿಬಿ ಕ್ವಾಲಿಫೈಯರ್‌ ಪಂದ್ಯವನ್ನು ಆಡಲಿದೆ. ಕಾರಣ ಗುಜರಾತ್‌ ಟೈಟಾನ್ಸ್‌ (0.254) ಅವರಿಗಿಂತಲೂ ಆರ್‌ಸಿಬಿ (0.255) ಅವರ ರನ್‌ ರೇಟ್‌ ಗಿಂತಲೂ 0.001 ಅಂಕ ಹೆಚ್ಚಿದೆ.

Story first published: Tuesday, May 27, 2025, 10:37 [IST]
Other articles published on May 27, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+