ಐಪಿಎಲ್ ಹರಾಜಿಗೂ ಮುನ್ನ ಲಯಕ್ಕೆ ಮರಳಿದ ಸ್ಟಾರ್ಸ್: ವಿಂಡೀಸ್‌ಗೆ ಭರ್ಜರಿ ಜಯ
ಇನ್ನೇನು ಕೆಲವೇ ದಿನಗಳಲ್ಲಿ ಐಪಿಎಲ್ 2025ರ ಹರಾಜು ನಡೆಯಲಿದೆ. ಈ ಹರಾಜಿಗೆ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ಈ ಮೂಲಕ ಮಾಲೀಕರ ಮನ ಗೆಲ್ಲುವಲ್ಲಿ ಪ್ರಯತ್ನ ನಡೆಸಿದ್ದಾರೆ. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ಆಟಗಾರರು ಸಹ ಅಬ್ಬರದ ಆಟವನ್ನು ಆಡುವ ಮೂಲಕ ಫ್ರಾಂಚೈಸಿಗಳ ಗಮನ ಸೆಳೆದರು. ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ನಾಲ್ಕನೇ ಟಿ20 ಪಂದ್ಯದಲ್ಲಿ ಆತಿಥೇಯ ತಂಡ ಅಮೋಘ ಪ್ರದರ್ಶನ ನೀಡಿ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವಿಂಡೀಸ್ ಮೊದಲ ಜಯದ ನಗೆ ಬೀರಿದೆ.
ಈಗಾಗಲೇ ಇಂಗ್ಲೆಡ್ ಈ ಸರಣಿಯಲ್ಲಿ ಮೂರು ಪಂದ್ಯ ಗೆದ್ದು ಬೀಗಿ, ಸರಣಿ ವಶಕ್ಕೆ ಮಾಡಿಕೊಂಡಿದೆ. ಇಂಗ್ಲೆಂಡ್ ನೀಡಿದ್ದ ಸವಾಲಿನ ಗುರಿಯನ್ನು ವಿಂಡೀಸ್ ಇನ್ನು ಒಂದು ಓವರ್ ಬಾಕಿ ಇರುವಂತೆ ಪಂದ್ಯ ಗೆದ್ದಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ವಿಂಡೀಸ್ 19 ಓವರ್‌ಗಳಲ್ಲಿ 5 ವಿಕೆಟ್‌ಗೆ 221 ರನ್ ಕಲೆ ಹಾಕಿ ಮಿಂಚಿತು.

ಸಾಲ್ಟ್ ಅರ್ಧಶತಕ
ಇಂಗ್ಲೆಂಡ್ ಪರ ಆರಂಭಿಕರಾದ ಫಿಲ್ ಸಾಲ್ಟ್ ಹಾಗೂ ವಿಲ್ ಜಾಕ್ಸ್ ಅಮೋಘ ಆಟದ ಪ್ರದರ್ಶನ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 54 ರನ್ ಸೇರಿಸಿತು. ವಿಲ್ ಜಾಕ್ಸ್ 1 ಬೌಂಡರಿ, 2 ಸಿಕ್ಸರ್ ಸಹಾಯದಿಂದ 25 ರನ್ ಸಿಡಿಸಿ ಔಟ್ ಆದರು. ಎರಡನೇ ವಿಕೆಟ್‌ಗೆ ಸಾಲ್ಟ್ ಹಾಗೂ ಬಟ್ಲರ್ 48 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಫಿಲ್ ಸಾಲ್ಟ್ 5 ಬೌಂಡರಿ, 4 ಸಿಕ್ಸರ್ ಸಹಾಯದಿಂದ 55 ರನ್ ಬಾರಿಸಿ ತಂಡಕ್ಕೆ ಆಧಾರವಾದರು.
ನಾಯಕ ಜೋಸ್ ಬಟ್ಲರ್ 23 ಎಸೆತಗಳಲ್ಲಿ 38 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಜಾಕೋಬ್ ಬೆಥೆಲ್ 4 ಬೌಂಡರಿ, 5 ಸಿಕ್ಸರ್ ಸಹಾಯದಿಂದ ಅಜೇಯ 62 ರನ್ ಸಿಡಿಸಿದರು. ಸ್ಯಾಮ್ ಕರನ್ 24 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು.
ಭರ್ಜರಿ ಆರಂಭ
ಸವಾಲಿನ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ತಂಡದ ಆರಂಭಿಕ ಇವಾನ್ ಲೂಯಿಸ್ ಹಾಗೂ ಶಾಯ್ ಹೋಪ್ ಜೋಡಿ ಮೊದೊಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 9.1 ಓವರ್‌ಗಳಲ್ಲಿ 136 ರನ್ ಸಿಡಿಸಿ ತಂಡಕ್ಕೆ ಆಧಾರವಾಯಿತು. ಇವಾನ್ ಲೂಯಿಸ್ 4 ಬೌಂಡರಿ, 7 ಸಿಕ್ಸರ್ ಸಹಾಯದಿಂದ 68 ರನ್ ಸಿಡಿಸಿ ಔಟ್ ಆದರು. ಇನ್ನೋಬ್ಬ ಆರಂಭಿಕ ಶಾಯ್ ಹೋಪ್ 24 ಎಸೆತಗಳಲ್ಲಿ 54 ರನ್ ಸಿಡಿಸಿದರು.
ಸ್ಟಾರ್ ಆಟಗಾರ ನಿಕೋಲಸ್ ಪೂರನ್ ಸೊನ್ನೆ ಸುತ್ತಿದರು. ರೋವನ್ ಪೋವೆಲ್ 38, ಶಿಮ್ರೋನ್ ಹೆಟ್ಮೆಯರ್ 7, ಶೆರ್ಫೇನ್ ರುದರ್ಫೋರ್ಡ್ ಅಜೇಯ 29 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮಿಂಚಿದರು. ವಿಂಡೀಸ್ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications