IND vs PAK: ಭಾರತ ವಿರುದ್ಧದ ಪಂದ್ಯಕ್ಕಿಂತ ಟ್ರೋಫಿ ಮುಖ್ಯ: ಪಾಕ್ ಉಪನಾಯಕ
ಇನ್ನೇನು ಕೇವಲ ಎರಡು ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಎರಡು ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಈ ವೇಳೆ ಭಾರತ ಸಹ "ಎ" ಗುಂಪಿನಲ್ಲಿ ಸ್ಥಾನ ಪಡೆದಿದೆ. ಇದೇ ಗುಂಪಿನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಜಿಲೆಂಡ್ ತಂಡಗಳು ಸಹ ಸ್ಥಾನ ಪಡೆದಿವೆ. ಈ ಟೂರ್ನಿಯಲ್ಲಿ ಎಲ್ಲರ ಚಿತ್ತ ಕದ್ದ ಪಂಗದ್ಯ ಭಾರತ ಹಾಗೂ ಪಾಕ್ ನಡುವಣ ಪಂದ್ಯ.
ಫೆಬ್ರವರಿ 19 ರಂದು ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ಉದ್ಘಾಟನೆ ಆಗಲಿದೆ. ಈ ವೇಳೆ ಎಲ್ಲರ ಚಿತ್ತ ಕದ್ದ ಪಂದ್ಯ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ. ಈ ಮೆಗಾ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ಪಂದ್ಯ ವಿಶ್ವದ ಚಿತ್ತವನ್ನೇ ಕದ್ದಿದೆ. ಈ ಪಂದ್ಯಕ್ಕೂ ಮುನ್ನ ಪಾಕ್ ಆಟಗಾರರು ಹೇಳಿಕೆ ನೀಡಲು ಆರಂಭಿಸಿದ್ದಾರೆ.

ಐಸಿಸಿ ಈವೇಂಟ್‌ಗಳಲ್ಲಿ ಟೀಮ್ ಇಂಡಿಯಾದ ಪ್ರದರ್ಶನ ಸ್ಥಿರವಾಗಿದೆ. ಈ ವೇಳೆ ಭಾರತ ತನ್ನ ಪ್ರಾಭಲ್ಯವನ್ನು ಹೊಂದಿದೆ. ಅಲ್ಲದೆ ಈ ಬಾರಿಯೂ ಮುಂದುವರೆಸುವ ಲೆಕ್ಕಾಚಾರವನ್ನು ಹೊಂದಿದೆ. ಉಭಯ ದೇಶಗಳ ತಂಡಗಳನ್ನು ಒಮ್ಮೆ ಅವಲೋಕಿಸಿದಾಗ ಭಾರತ ತಂಡ ಬಲಿಷ್ಠವಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಬಹಳ ದೊಡ್ಡ ಪಂದ್ಯ ಎಂದು ಸಲ್ಮಾನ್ ಒಪ್ಪಿಕೊಂಡರು ಆದರೆ ಅವರ ಪಾಕ್ ತಂಡದ ಗುರಿ ಭಾರತದ ವಿರುದ್ಧದ ಪಂದ್ಯವನ್ನು ಗೆಲ್ಲುವುದು ಅಲ್ಲ, ಬದಲಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವುದು ಎಂಬುದಾಗಿ ತಿಳಿಸಿದ್ದಾರೆ.
ಸಲ್ಮಾನ್ ಹೇಳಿದ್ದೇನು?
ಪಿಸಿಬಿ ಬಿಡುಗಡೆ ಮಾಡಿದ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ ಸಲ್ಮಾನ್ ಅಲಿ ಆಘಾ, ಭಾರತ ವಿರುದ್ಧದ ಪಂದ್ಯದ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ಹೈ ವೋಲ್ಟೇಜ್ ಪಂದ್ಯ ಆಗುವುದರಲ್ಲಿ ಎರಡು ಮಾತಿಲ್ಲ. ನಾವು ಭಾರತ ವಿರುದ್ಧ ಪಂದ್ಯದಲ್ಲಿ ಗೆದ್ದು, ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ವಿಫಲರಾದರೆ ಏನು ಅರ್ಥವಿಲ್ಲ. ಹೀಗಾಗಿ ನಾವು ಭಾರತದ ವಿರುದ್ಧ ಪಂದ್ಯದಲ್ಲಿ ಸೋತರೂ, ತಂಡದ ಟ್ರೋಫಿ ಗೆಲ್ಲುವುದು ಮುಖ್ಯ. ಮೈದಾನದಲ್ಲಿ ನಮ್ಮ ತಂಡ ಸಂಘಟಿತ ಪ್ರದರ್ಶನ ನೀಡಲಿದೆ ಎಂದಿದ್ದಾರೆ.

ಇತ್ತೀಚಿಗೆ ಪಾಕ್‌ನಲ್ಲಿ ಮುಕ್ತಾಯಗೊಂಡ ತ್ರಿಕೋನ ಸರಣಿಯಲ್ಲಿ ಸಲ್ಮಾನ್ ಅಘಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಇವರು ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಿಂಚಿದ್ದರು.
ಐಸಿಸಿ ವಿಶ್ವಕಪ್ ಟೂರ್ನಿಗಳಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡದ ದಾಖಲೆ ಅಮೋಘ. ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಕೊಂಚ ಉತ್ತಮ ಪ್ರದರ್ಶನ ನೀಡಿದೆ. ಕಳೆದ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಪಾಕ್, ಭಾರತವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಚಾಂಪಿಯನ್ಸ್ ಟ್ರೋಫಿಯಲ್ಲಿ ಎರಡೂ ತಂಡಗಳು ಇಲ್ಲಿಯವರೆಗೆ 5 ಬಾರಿ ಮುಖಾಮುಖಿಯಾಗಿದ್ದು, ಪಾಕಿಸ್ತಾನ ತಂಡ 3 ಬಾರಿ ಗೆದ್ದಿದ್ದರೆ, ಟೀಮ್ ಇಂಡಿಯಾ ಕೇವಲ 2 ಬಾರಿ ಮಾತ್ರ ಪಂದ್ಯವನ್ನು ಗೆದ್ದಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications