ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಲಂಕಾ ಪ್ರೀಮಿಯರ್‌ ಲೀಗ್‌ನಲ್ಲಿ ಪಾಲ್ಗೊಳ್ಳುವ ಬಗ್ಗೆ ಇರ್ಫಾನ್ ಪಠಾಣ್ ಹೇಳಿಕೆ

Wish To Play Foreign T20 Leagues: Irfan Pathan

ಟೀಮ್ ಇಂಡಿಯಾದ ಮಾಜಿ ಆಲ್‌ರೌಂಡರ್ ಇರ್ಫಾನ್ ಪಠಾಣ್ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ವರದಿಗೆ ಸಂಬಂಧಪಟ್ಟಂತೆ ಸ್ವತಃ ಇರ್ಫಾನ್ ಪಠಾಣ್ ಪ್ರತಿಕ್ರಿಯಿಸಿದ್ದಾರೆ. ತಾನು ವಿದೇಶಿ ಲೀಗ್‌ನಲ್ಲಿ ಪಾಲ್ಗೊಳ್ಳಲು ಆಸಕ್ತನಾಗಿದ್ದೇನೆ. ಆದರೆ ಈಗ ನನ್ನ ಲಭ್ಯತೆಯನ್ನು ಯಾವ ಟೂರ್ನಿಗೂ ಖಚಿತಪಡಿಸಿಲ್ಲ ಎಂದಿದ್ದಾರೆ.

35 ವರ್ಷದ ಇರ್ಫಾನ್ ಪಠಾಣ್ 2019ರ ಫೆಬ್ರವರಿಯಲ್ಲಿ ಕೊನೆಯ ಬಾರಿಗೆ ವೃತ್ತಿಪರ ಕ್ರಿಕೆಟ್‌ನಲ್ಲಿ ಆಡಿದ್ದರು. ಇದೇ ವರ್ಷ ಜನವರಿಯಲ್ಲಿ ಇರ್ಫಾನ್ ವೃತ್ತಿಪರ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದರು. ಈಗ ವಿದೇಶಿ ಕ್ರಿಕೆಟ್ ಲೀಗ್‌ನಲ್ಲಿ ಪಾಲ್ಗೊಳ್ಳುವ ಆಶಯವನ್ನು ವ್ಯಕ್ತಪಡಿಸಿದ್ದಾರೆ.

ಐಪಿಎಲ್ 2020: ಆರಂಭ, ಅಂತ್ಯ, ಸಮಯ, ಕ್ರೀಡಾಂಗಣ, ಪ್ರಾಯೋಜಕತ್ವ ಎಲ್ಲದಕ್ಕೂ ಸ್ಪಷ್ಟ ಉತ್ತರಐಪಿಎಲ್ 2020: ಆರಂಭ, ಅಂತ್ಯ, ಸಮಯ, ಕ್ರೀಡಾಂಗಣ, ಪ್ರಾಯೋಜಕತ್ವ ಎಲ್ಲದಕ್ಕೂ ಸ್ಪಷ್ಟ ಉತ್ತರ

ಇರ್ಫಾನ್ ಈ ಹಿಂದೆಯೇ ವಿದೇಶಿ ಟಿ20 ಲೀಗ್‌ಗಳಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ನೀಡಬೇಕು ಎಂಬ ಒತ್ತಾಯವನ್ನು ಮಾಡಿದ್ದರು. ಕನಿಷ್ಟ ಪಕ್ಷ ವಾರ್ಷಿಕ ಒಪ್ಪಂದವನ್ನು ಹೊಂದದ ಕ್ರಿಕೆಟಿಗರು, ನಿವೃತ್ತಿಯಾಗದ ಕ್ರಿಕೆಟಿಗರು, ವಿದೇಶಿ ಲೀಗ್‌ಗಳಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯುವಂತಾಗಬೇಕು ಎಂದು ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.

ಬಿಸಿಸಿಐ ಮಾತ್ರವೇ ತನ್ನ ಆಟಗಾರರಿಗೆ ವಿದೇಶಿ ಕ್ರಿಕೆಟ್ ಟೂರ್ನಿಗಳಲ್ಲಿ ಪಾಲ್ಗೋಳ್ಳಲು ಅನುಮತಿಯನ್ನು ನೀಡಿಲ್ಲ. ಉಳಿದೆಲ್ಲಾ ದೇಶಗಳ ಮಂಡಳಿಗಳು ವಿದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಪಾಲ್ಗೊಳ್ಳಲು ಅನುಮತಿಯನ್ನು ನೀಡಿದೆ. ಸ್ಟಾರ್ ಆಟಗಾರರಾದ ಸುರೇಶ್ ರೈನಾ, ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪ, ಯೂಸುಫ್ ಪಠಾಣ್ ಕೂಡ ಈ ಬಗ್ಗೆ ಒತ್ತಾಯವನ್ನು ಮಾಡಿದ್ದರು.

ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಗಳಿಸಿದ ಮೊದಲ ಸಂಪಾದನೆ ಎಷ್ಟು? ಅದನ್ನು ಶರ್ಮಾ ಏನ್ಮಾಡಿದ್ರು?ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಗಳಿಸಿದ ಮೊದಲ ಸಂಪಾದನೆ ಎಷ್ಟು? ಅದನ್ನು ಶರ್ಮಾ ಏನ್ಮಾಡಿದ್ರು?

ಶ್ರೀಲಂಕಾದಲ್ಲಿ ನಡೆಯಲಿರುವ ಲಂಕಾ ಪ್ರೀಮಿಯರ್ ಲೀಗ್‌ನ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಸಕ್ತರಾಗಿರುವ 70 ವಿದೇಶಿ ಆಟಗಾರರ ಪೈಕಿ ಭಾರತದಿಂದ ಇರ್ಫಾನ್ ಪಠಾಣ್ ಹೆಸರು ಕೂಡ ಇದೆ ಎಂದು ವರದಿಯಾಗಿತ್ತು. ಈ ವರದಿಗೆ ಪೂರಕವಾಗಿ ಇರ್ಫಾನ್ ತಮ್ಮ ಸ್ಪಷ್ಟನೆಯನ್ನು ನೀಡಿದ್ದಾರೆ.

Story first published: Monday, August 3, 2020, 17:00 [IST]
Other articles published on Aug 3, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X