ಅನುಮಾನ ಬೇಡ ಈತನೇ ಟೆಸ್ಟ್ ತಂಡದ ನೂತನ ನಾಯಕ; ಉಪನಾಯಕನ ಆಯ್ಕೆಯಲ್ಲಿ ಗೊಂದಲ: ಬಿಸಿಸಿಐ

ಸದ್ಯ ಹರಿಣಗಳ ನೆಲದಲ್ಲಿ ಬೀಡುಬಿಟ್ಟಿರುವ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ಇತ್ತೀಚೆಗಷ್ಟೇ ಮುಕ್ತಾಯವಾದ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿ ಮುಗಿಸಿದೆ. ಇತ್ತಂಡಗಳ ನಡುವೆ ನಡೆದ ಈ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ಟೀಮ್ ಇಂಡಿಯಾ ವಿರುದ್ಧ 2-1 ಅಂತರದಲ್ಲಿ ಗೆಲುವನ್ನು ಸಾಧಿಸಿದ್ದು, ಹರಿಣಗಳ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲುವ ಆಸೆಯನ್ನು ಟೀಮ್ ಇಂಡಿಯಾ ಈ ಬಾರಿಯೂ ಕೈಚೆಲ್ಲಿದೆ.
ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯವಾದ ಸೋಲನ್ನು ಕಂಡಿರುವ ಟೀಮ್ ಇಂಡಿಯಾ ಜನವರಿ 19ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಹರಿಣಗಳ ವಿರುದ್ಧದ ಈ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕೆಎಲ್ ರಾಹುಲ್ ನಾಯಕನ ಸ್ಥಾನದಲ್ಲಿ ಮುನ್ನಡೆಸಲಿರುವುದು ಈ ಸರಣಿಯ ವಿಶೇಷವೆನಿಸಿದೆ. ಕಳೆದ ವರ್ಷ ಟೀಮ್ ಇಂಡಿಯಾ ಏಕದಿನ ನಾಯಕತ್ವವನ್ನು ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದ್ದು, ಇತ್ತೀಚೆಗಷ್ಟೇ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೂ ಕೂಡ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಹೌದು, ಜನವರಿ 15ರಂದು ಸಾಮಾಜಿಕ ಜಾಲತಾಣದಲ್ಲಿ ತಾನು ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುತ್ತಿರುವುದನ್ನು ತಿಳಿಸಿದ ವಿರಾಟ್ ಕೊಹ್ಲಿ ಈ ಮೂಲಕ ಎಲ್ಲಾ ಮಾದರಿಯ ನಾಯಕತ್ವದಿಂದಲೂ ಸಹ ದೂರ ಉಳಿದಿದ್ದಾರೆ. ಹೀಗಾಗಿ ಸದ್ಯ ವಿರಾಟ್ ಕೊಹ್ಲಿ ನಂತರ ಭಾರತ ಟೆಸ್ಟ್ ತಂಡದ ನಾಯಕತ್ವವನ್ನು ಬಿಸಿಸಿಐ ಯಾರ ಹೆಗಲಿಗೆ ಹಾಕಲಿದೆ ಎಂಬ ಪ್ರಶ್ನೆಗಳು ಮೂಡಿದ್ದು, ಕೊಹ್ಲಿ ರಾಜೀನಾಮೆಯನ್ನು ನೀಡಿ 2 ದಿನಗಳು ಕಳೆದರೂ ಸಹ ನೂತನ ನಾಯಕನನ್ನು ಆಯ್ಕೆ ಮಾಡದ ಬಿಸಿಸಿಐನ ನಡೆ ಕುರಿತು ಪ್ರಶ್ನೆ ಹಾಕಿದ್ದರು. ಈ ಪ್ರಶ್ನೆ ಕುರಿತಾಗಿ ಇದೀಗ ಖಾಸಗಿ ವೆಬ್ ತಾಣವೊಂದರ ಜೊತೆ ಬಿಸಿಸಿಐನ ಅಧಿಕಾರಿಯೋರ್ವರು ಮಾತನಾಡಿದ್ದು, ಬಿಸಿಸಿಐನಲ್ಲಿ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ಈ ಕೆಳಕಂಡಂತೆ ಹಂಚಿಕೊಂಡಿದ್ದಾರೆ.

ಯಾವುದೇ ಅನುಮಾನ ಬೇಡ ಈತನೇ ಟೆಸ್ಟ್ ತಂಡದ ನಾಯಕ
ಭಾರತ ಟೆಸ್ಟ್ ಕ್ರಿಕೆಟ್ ತಂಡದ ನೂತನ ನಾಯಕ ಯಾರಾಗಲಿದ್ದಾರೆ ಎಂಬುದರ ಕುರಿತು ಮಾತನಾಡಿರುವ ಬಿಸಿಸಿಐ ಅಧಿಕಾರಿಯೋರ್ವರು "ಯಾವುದೇ ಅನುಮಾನ ಬೇಡ ರೋಹಿತ್ ಶರ್ಮಾ ಅವರೇ ಭಾರತ ಟೆಸ್ಟ್ ತಂಡದ ನಾಯಕನಾಗಿ ಆಯ್ಕೆಗೊಳ್ಳಲಿದ್ದಾರೆ. ಇದಕ್ಕೂ ಮುನ್ನ ಭಾರತ ಟೆಸ್ಟ್ ತಂಡದ ಉಪನಾಯಕನಾಗಿ ನೇಮಕಗೊಂಡಿದ್ದ ರೋಹಿತ್ ಶರ್ಮಾ ಈಗ ನಾಯಕನ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಲಿದ್ದಾರೆ" ಎಂದು ಹೇಳಿಕೆ ನೀಡಿದ್ದಾರೆ.

ಉಪ ನಾಯಕನ ಆಯ್ಕೆಯಲ್ಲಿ ಇನ್ನೂ ಗೊಂದಲ
ರೋಹಿತ್ ಶರ್ಮಾ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿರುವ ಬಿಸಿಸಿಐನ ಅಧಿಕಾರಿ ಉಪ ನಾಯಕನ ಆಯ್ಕೆ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ ಎಂದಿದ್ದಾರೆ. ಈಗಾಗಲೇ ಭಾರತ ಸೀಮಿತ ಓವರ್ ತಂಡದ ಉಪನಾಯಕನಾಗಿರುವ ಕೆಎಲ್ ರಾಹುಲ್ ಅವರೇ ಭಾರತ ಟೆಸ್ಟ್ ತಂಡಕ್ಕೆ ಉಪನಾಯಕ ಆಗುವ ಸಾಧ್ಯತೆಗಳು ಕಡಿಮೆಯಿದ್ದು, ರಾಹುಲ್ ಹೊರತುಪಡಿಸಿ ಬೇರೆ ಆಟಗಾರರ ಹೆಗಲಿಗೆ ಉಪನಾಯಕನ ಜವಾಬ್ದಾರಿಯನ್ನು ಹೊರಿಸಲು ಬಿಸಿಸಿಐ ಚಿಂತಿಸುತ್ತಿದೆ ಎಂಬ ಮಾಹಿತಿಯನ್ನು ಬಿಸಿಸಿಐನ ಅಧಿಕಾರಿ ಹಂಚಿಕೊಂಡಿದ್ದಾರೆ.

ನಾಯಕ ಮತ್ತು ಉಪನಾಯಕರ ಘೋಷಣೆ ಯಾವಾಗ?
ನಾಯಕ ಹಾಗೂ ಉಪನಾಯಕನ ಆಯ್ಕೆಯ ಹಂತದ ಕುರಿತು ಮಾಹಿತಿಗಳನ್ನು ಹಂಚಿಕೊಂಡ ಬಿಸಿಸಿಐನ ಅಧಿಕಾರಿ ನೂತನವಾಗಿ ಆಯ್ಕೆಯಾಗಿರುವ ನಾಯಕ ರೋಹಿತ್ ಶರ್ಮಾ ಹಾಗೂ ಯಾರು ಉಪನಾಯಕನಾಗಿ ಆಯ್ಕೆಯಾಗಿದ್ದಾರೋ ಅವರ ಹೆಸರುಗಳನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಪ್ರವಾಸದ ನಂತರ ಬಿಸಿಸಿಐ ಅಧಿಕೃತವಾಗಿ ಘೋಷಿಸಲಿದೆ ಎಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications