ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಹಿಳಾ ಏಷ್ಯಾ ಕಪ್ ಫೈನಲ್: ಭಾರತ vs ಶ್ರೀಲಂಕಾ, ನೇರಪ್ರಸಾರ, ಹೆಡ್ ಟು ಹೆಡ್ ಮಾಹಿತಿ

Women Asia Cup 2022 Final, India Vs Sri Lanka: T20I Head-to-Head and match timings and other details

ಮಹಿಳಾ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ. ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ಮಹಿಳಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಥಾಯ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಭಾರತ ತಂಡ ಫೈನಲ್ ಹಂತಕ್ಕೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಮತ್ತೊಂದೆಡೆ ಶ್ರೀಲಂಕಾ ಪಾಕಿಸ್ತಾನದ ವಿರುದ್ಧ ಗೆದ್ದು ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ.

ಇನ್ನು ಈ ಟೂರ್ನಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಅದ್ಭುತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದು ಕೇವಲ ಒಂದು ಸೋಲನ್ನು ಮಾತ್ರ ಅನುಭವಿಸಿದೆ. ಪಾಕಿಸ್ತಾನದ ವಿರುದ್ಧ ಭಾರತ ಲೀಗ್ ಹಂತದಲ್ಲಿ ಸೋಲು ಕಂಡಿತ್ತು. ಆದರೆ ಶ್ರೀಲಂಕಾ ತಂಡ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ್ದು ಲೀಗ್ ಹಂತದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ವಿರುದ್ಧ ಶರಣಾಗಿತ್ತು.

ವೆಸ್ಟ್ ಇಂಡೀಸ್ ಪಾಲಿಗೆ ಆಸ್ಟ್ರೇಲಿಯಾದಲ್ಲಿ ವಿಶೇಷವಾಗಿದ್ದು ನಡೆಯಲಿದೆ ಎಂದ ಮಾಜಿ ನಾಯಕವೆಸ್ಟ್ ಇಂಡೀಸ್ ಪಾಲಿಗೆ ಆಸ್ಟ್ರೇಲಿಯಾದಲ್ಲಿ ವಿಶೇಷವಾಗಿದ್ದು ನಡೆಯಲಿದೆ ಎಂದ ಮಾಜಿ ನಾಯಕ

ಇನ್ನು ಭಾರತ ಮಹಿಳಾ ತಂಡ ಏಷ್ಯಾಕಪ್‌ನಲ್ಲಿ ದಾಖಲೆಯ ಆರು ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇನ್ನು ಭಾರತ ಇದುವರೆಗೆ ಆಯೋಜನೆಯಾಗಿರುವ ಎಲ್ಲಾ ಎಂಟು ಆವೃತ್ತಿಗಳಲ್ಲಿಯೂಭಾರತ ತಂಡ ಫೈನಲ್ ತಲುಪಿದ ಸಾಧನೆ ಮಾಡಿದೆ. 2022ರ ಮಹಿಳಾ ಏಷ್ಯಾ ಕಪ್ ಫೈನಲ್ ಸೆಣೆಸಾಟ ಉಭಯ ತಂಡಗಳ ನಡುವಿನ ಐದನೇ ಫೈನಲ್ ಪಂದ್ಯ ಎಂಬುದು ಕುತೂಹಲಕಾರಿ ಅಂಶ. ಶ್ರೀಲಂಕಾ ವಿರುದ್ಧ ನಡೆದ ಈ ಹಿಂದಿನ ನಾಲ್ಕು ಪಂದ್ಯಗಳಲ್ಲಿಯೂ ಭಾರತ ಗೆದ್ದಿದೆ.

ಪಂದ್ಯದ ಸ್ಥಳ, ಸಮಯ ಹಾಗೂ ನೇರಪ್ರಸಾರ

ಪಂದ್ಯದ ಸ್ಥಳ, ಸಮಯ ಹಾಗೂ ನೇರಪ್ರಸಾರ

ಭಾರತ ಹಾಗೂ ಶ್ರೀಲಂಕಾ ನಡುವಿನ ಏಷ್ಯಾ ಕಪ್ ಫೈನಲ್ ಪಂದ್ಯ ಅಕ್ಟೋಬರ್ 15 ಶನಿವಾರದಂದು ಬಾಂಗ್ಲಾದೇಶದ ಸಿಲ್ಹೆಟ್‌ನಲ್ಲಿ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಈ ಪಂದ್ಯ ಆರಂಭವಾಗಲಿದ್ದು ಸ್ಟಾರ್‌ಸ್ಪೋರ್ಟ್ಸ್ 2 ಹಾಗೂ ಸ್ಟಾರ್‌ಸ್ಪೋರ್ಟ್ಸ್ 2 HD ನಲ್ಲಿ ಈ ಪಂದ್ಯಗಳು ನೇರಪ್ರಸಾರವಾಗಲಿದೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಭಾರತದ ಸ್ಕ್ವಾಡ್ : ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಸ್ನೇಹ ರಾಣಾ, ತಾನಿಯಾ ಭಾಟಿಯಾ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ರಿಚಾ ಘೋಷ್ (ವಿಕೆಟ್ ಕೀಪರ್), ಕಿರಣ್ ನವಗಿರೆ, ಸಬ್ಬಿನೇನಿ ಮೇಘನಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ಸಿಮ್ರಾನ್ ಬಹದ್ದೂರ್.

ಶ್ರೀಲಂಕಾ ಸ್ಕ್ವಾಡ್: ಚಾಮರಿ ಅಟಪಟ್ಟು (ನಾಯಕಿ), ನೀಲಾಕ್ಷಿ ಡಿ ಸಿಲ್ವಾ, ಹಾಸಿನಿ ಪೆರೇರಾ, ಮಲ್ಶಾ ಶೆಹಾನಿ, ರಶ್ಮಿ ಸಿಲ್ವಾ, ಓಶದಿ ರಣಸಿಂಗ್, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ಕೌಶಾನಿ ನುತ್ಯಂಗನಾ (ವಿಕೆಟ್ ಕೀಪರ್), ಕವಿಶಾ ದಿಲ್ಹಾರಿ, ಇನೋಕಾ ರಣವೀರ, ಸುಗಂದಿಕಾ ಕುಮಾರಿ, ಹರ್ಷಿತಾ ಮಾದವಿ, ಮದುಶಿಕಾ ಮೆತ್ತಾನಂದ, ಅಚಿನಿ ಕುಲಸೂರ್ಯ, ತಾರಿಕಾ ಸೆವ್ವಂಡಿ

ಭಾರತ ಶ್ರೀಲಂಕಾ ಮಹಿಳಾ ತಂಡಗಳ ಟಿ20I ಹೆಡ್ ಟು ಹೆಡ್

ಭಾರತ ಶ್ರೀಲಂಕಾ ಮಹಿಳಾ ತಂಡಗಳ ಟಿ20I ಹೆಡ್ ಟು ಹೆಡ್

ಭಾರತ ಹಾಗೂ ಶ್ರೀಲಂಕಾ ತಂಡಗಳು ಅಂತರರಾಷ್ಟ್ರೀಯ ಟಿ20 ಮಾದರಿಯಲ್ಲಿ 22 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ ತಂಡ ಸ್ಪಷ್ಟ ಮೇಲುಗೈ ಹೊಂದಿದ್ದು ಶ್ರೀಲಂಕಾ ವಿರುದ್ಧ 17 ಬಾರಿ ಗೆಲುವು ಸಾಧಿಸಿದೆ. ಶ್ರೀಲಂಕಾ ತಂಡ ಕೇವಲ 4 ಬಾರಿ ಗೆದ್ದಿದೆ ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಕಂಡಿದೆ. ಇನ್ನು ಏಷ್ಯಾಕಪ್‌ನಲ್ಲಿಯೂ ಟಿ20 ಮಾದರಿಯಲ್ಲಿ ಶ್ರೀಲಂಕಾ ವಿರುದ್ಧದ ಮೂರು ಬಾರಿ ಮುಖಾಮುಖಿಯಾಗಿದ್ದು ಮೂರರಲ್ಲಿಯೂ ಭಾರತ ಗೆಲುವು ಸಾಧಿಸಿದೆ.

Story first published: Friday, October 14, 2022, 16:03 [IST]
Other articles published on Oct 14, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X