Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹಿಳಾ ಏಷ್ಯಾಕಪ್ ಫೈನಲ್: ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ, ಪ್ಲೇಯಿಂಗ್ 11 ಡೀಟೈಲ್ಸ್‌

India women vs Srilanka women

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟಿ20 2022ರ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ವನಿತೆಯರು ಪ್ರಶಸ್ತಿಗಾಗಿ ಶನಿವಾರ ಕಣಕ್ಕಿಳಿದಿದ್ದು, ಟಾಸ್ ಗೆದ್ದ ಶ್ರೀಲಂಕಾ ವನಿತೆಯರು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಮೂಲಕ ಭಾರತ ವನಿತೆಯರು ಮೊದಲು ಬೌಲಿಂಗ್ ಮಾಡಲಿದ್ದಾರೆ.

ಪ್ರಶಸ್ತಿ ಸುತ್ತಿನ ಹಾಟ್ ಫೇವರಿಟ್ ಆಗಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಮತ್ತೊಂದು ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದ್ದು, ಶ್ರೀಲಂಕಾ ವನಿತೆಯರನ್ನು ಎಷ್ಟು ಮೊತ್ತಕ್ಕೆ ಕಟ್ಟಿಹಾಕಬಲ್ಲದು ಎಂಬುದನ್ನ ಕಾದು ನೋಡಬೇಕಿದೆ.

ಸಿಲ್ಹೆಟ್‌ನ ಸಿಲ್ಹೆಟ್‌ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಫೇವರಿಟ್ ಆಗಿದ್ದರೂ, ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ 1ರನ್‌ಗಳ ರೋಚಕ ಗೆಲುವು ಸಾಧಿಸಿ ಫೈನಲ್ ತಲುಪಿರುವ ಶ್ರೀಲಂಕಾ ತಂಡವನ್ನ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ.

ಇಡೀ ಟೂರ್ನಿಯಲ್ಲಿ ಅಂದ್ರೆ ಲೀಗ್‌ ಹಂತದಲ್ಲಿ ಕೇವಲ ಒಂದು ಪಂದ್ಯ ಸೋತಿರುವ ಭಾರತದ ಮಹಿಳೆಯರು ಸೆಮಿಫೈನಲ್‌ನಲ್ಲಿ ಥಾಯ್ಲೆಂಡ್ ತಂಡವನ್ನ ಸೋಲಿಸಿ ಫೈನಲ್ ಪ್ರವೇಶಿಸಿದ್ದು, ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದ್ದಾರೆ. ಸೆಮಿಫೈನಲ್‌ನಲ್ಲಿ ಆಡಿದ್ದ ತಂಡವನ್ನೇ ಉಭಯ ತಂಡಗಳು ಮುಂದುವರಿಸಿದ್ದು, ಪ್ಲೇಯಿಂಗ್ ಇಲೆವೆನ್ ಮಾಹಿತಿ ಈ ಕೆಳಗಿದೆ.

ಭಾರತದ ವನಿತೆಯರ ಪ್ಲೇಯಿಂಗ್ ಇಲೆವೆನ್
ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ದಯಾಲನ್ ಹೇಮಲತಾ, ಹರ್ಮನ್‌ಪ್ರೀತ್ ಕೌರ್(ನಾಯಕಿ), ದೀಪ್ತಿ ಶರ್ಮಾ, ರಿಚಾ ಘೋಷ್(ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಸ್ನೇಹ ರಾಣಾ, ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್

ಶ್ರೀಲಂಕಾ ವನಿತೆಯರ ಪ್ಲೇಯಿಂಗ್ ಇಲೆವೆನ್
ಚಾಮರಿ ಅತಪತ್ತು(ನಾಯಕಿ), ಅನುಷ್ಕಾ ಸಂಜೀವನಿ(ವಿಕೆಟ್ ಕೀಪರ್), ಹರ್ಷಿತಾ ಮಾದವಿ, ಹಾಸಿನಿ ಪೆರೇರಾ, ನೀಲಾಕ್ಷಿ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಮಲ್ಶಾ ಶೆಹಾನಿ, ಓಷದಿ ರಣಸಿಂಗ್, ಸುಗಂದಿಕಾ ಕುಮಾರಿ, ಇನೋಕಾ ರಣವೀರ, ಅಚಿನಿ ಕುಲಸೂರ್ಯ

Story first published: Saturday, October 15, 2022, 12:45 [IST]
Other articles published on Oct 15, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+