Richa Ghosh RCB : ಆರ್‌ಸಿಬಿ ತಂಡಕ್ಕೆ ಹೊಡಿಬಡಿ ಆಟಗಾರ್ತಿ ರಿಚಾ ಘೋಷ್; ಆನೆಬಲ ಬಂತೆಂದ ಫ್ಯಾನ್ಸ್!

ಸೋಮವಾರ, ಫೆಬ್ರವರಿ 13ರಂದು 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಮುಂಬೈನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಭಾರತ ಮಹಿಳಾ ತಂಡದ ವಿಕೆಟ್ ಕೀಪರ್ ಮತ್ತು ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಖರೀದಿಸಿದೆ.
ದೆಹಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ನಡುವೆ ನಡೆದ ಬಿಡ್ ಪೈಪೋಟಿಯಲ್ಲಿ ಅಂತಿಮವಾಗಿ 1.90 ಕೋಟಿ ರೂ. ನೀಡಿ ಆರ್‌ಸಿಬಿ ಫ್ರಾಂಚೈಸಿ ಖರೀದಿಸಿತು. ಹೊಡಿಬಡಿ ಆಟಗಾರ್ತಿ ಆರ್‌ಸಿಬಿ ತಂಡಕ್ಕೆ ಬಂದಿರುವುದು ಮಧ್ಯಮ ಕ್ರಮಾಂಕದಲ್ಲಿ ದೊಡ್ಡ ಬಲ ಬಂದಂತಾಗಿದೆ.
2020ರಲ್ಲಿ ತನ್ನ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ರಿಚಾ ಘೋಷ್, ಭಾರತ ಮಹಿಳಾ ತಂಡಕ್ಕಾಗಿ ಟಿ20 ಪಂದ್ಯದಲ್ಲಿ ಕಾಣಿಸಿಕೊಂಡ ಎರಡನೇ ಅತ್ಯಂತ ಕಿರಿಯ ಆಟಗಾರ್ತಿಯನಿಸಿದ್ದಾರೆ.
31 ಟಿ20 ಪಂದ್ಯಗಳಿಂದ 135.50 ಸ್ಟ್ರೈಕ್‌ರೇಟ್‌ನೊಂದಿಗೆ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ಸಾಮರ್ಥ್ಯ ಹೊಂದಿದ್ದಾರೆ. ಇನ್ನು ತನ್ನ ವಿಕೆಟ್ ಕೀಪಿಂಗ್ ಕೌಶಲ್ಯವು ಆರ್‌ಸಿಬಿ ತಂಡಕ್ಕೆ ದೊಡ್ಡ ಬಲ ಬಂದಿದೆ.
ಕಳೆದ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಆದ ಭಾರತ ತಂಡದ ಸದಸ್ಯೆಯಾಗಿದ್ದರು.

ಇದಕ್ಕೂ ಮುನ್ನ ಮಾರಕ ವೇಗಿಯಾಗಿರುವ ರೇಣುಕಾ ಸಿಂಗ್ ಠಾಕೂರ್ ಅವರನ್ನು 1.50 ಕೋಟಿ ರೂ. ನೀಡಿ ಆರ್‌ಸಿಬಿ ಫ್ರಾಂಚೈಸಿ ಖರೀದಿಸಿತು. ರೇಣುಕಾ ಸಿಂಗ್, ಸ್ಮೃತಿ ಮಂಧಾನ, ಎಲ್ಲೇಸಿ ಪೆರ್ರಿ ನಂತರ ಮತ್ತೊಬ್ಬ ಸ್ಟಾರ್ ಆಟಗಾರ್ತಿ ತಂಡವನ್ನು ಸೇರಿರುವುದು ಆರ್‌ಸಿಬಿ ಅಭಿಮಾನಿಗಳಿಗೆ ಖುಷಿ ನೀಡಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ (WPL) ಉದ್ಘಾಟನಾ ಆವೃತ್ತಿಯ ಹರಾಜಿನಲ್ಲಿ ದಾಖಲೆಯೆ ಮಾರಾಟವಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರರಾದರು. ಭಾರತದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಆಗಿರುವ ಸ್ಮೃತಿ ಮಂಧಾನ ಅವರನ್ನು 3.40 ಕೋಟಿ ರೂ. ಬೆಲೆಗೆ ಆರ್‌ಸಿಬಿ ತಂಡಕ್ಕೆ ಮಾರಾಟವಾಗಿದ್ದಾರೆ.

ಆರ್‌ಸಿಬಿ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ?
ಸ್ಮೃತಿ ಮಂಧಾನ ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಆದರೆ ಇದೇ ವೇಳೆ ತಂಡಕ್ಕೆ ಆಸ್ಟ್ರೇಲಿಯಾ ಆಲ್‌ರೌಂಡರ್ ಎಲ್ಲಿಸಿ ಪೆರ್ರಿ ಬಂದಿರುವುದು, ತುಸು ಸ್ಪರ್ಧೆ ಹೆಚ್ಚಾಗಿರಲಿದೆ. ಸ್ಮೃತಿ ಮಂಧಾನ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications