WPL Auction 2023: ದೊಡ್ಡ ಮೊತ್ತಕ್ಕೆ ಸ್ಮೃತಿ ಮಂಧಾನ ಖರೀದಿಸಿದ ಆರ್‌ಸಿಬಿ

ಸೋಮವಾರ, ಫೆಬ್ರವರಿ 13ರಂದು 2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಮುಂಬೈನಲ್ಲಿ ನಡೆಯುತ್ತಿರುವ ಹರಾಜು ಪ್ರಕ್ರಿಯೆಯಲ್ಲಿ ಭಾರತ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಪಾಲಾಗಿದ್ದಾರೆ.
ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವೆ ನಡೆದ ಬಿಡ್ ಪೈಪೋಟಿಯಲ್ಲಿ ಅಂತಿಮವಾಗಿ 3.40 ಕೋಟಿ ರೂ. ನೀಡಿ ಆರ್‌ಸಿಬಿ ಫ್ರಾಂಚೈಸಿ ಖರೀದಿಸಿತು. ಇದರಿಂದ ಆರ್‌ಸಿಬಿ ಅಭಿಮಾನಿಗಳ ನಿರೀಕ್ಷೆಗೆ ಫಲ ಸಿಕ್ಕಂತಾಗಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ (WPL) ಉದ್ಘಾಟನಾ ಆವೃತ್ತಿಯ ಹರಾಜಿನಲ್ಲಿ ಮಾರಾಟವಾದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸ್ಮೃತಿ ಮಂಧಾನ ಪಾತ್ರರಾದರು. ಭಾರತದ ಉಪನಾಯಕಿ ಮತ್ತು ಆರಂಭಿಕ ಆಟಗಾರ್ತಿ ಆಗಿರುವ ಸ್ಮೃತಿ ಮಂಧಾನ ದಾಖಲೆಯ ಬೆಲೆಗೆ ಮಾರಾಟವಾಗಿದ್ದಾರೆ.
WPL Auction 2023: ಈ ಆಟಗಾರ್ತಿ ಅತ್ಯಂತ ದುಬಾರಿ ಖರೀದಿಯಾಗಲಿದ್ದಾರೆ; ಆಕಾಶ್ ಚೋಪ್ರಾ ಭವಿಷ್ಯ
ಐಪಿಎಲ್‌ನಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ 18 ನಂಬರ್ ಜೆರ್ಸಿ ಧರಿಸಲಿದ್ದರೆ, ಮಹಿಳಾ ಐಪಿಎಲ್‌ನಲ್ಲಿ ಸ್ಮೃತಿ ಮಂಧಾನ ಕೂಡ ಆರ್‌ಸಿಬಿ ಪರ 18 ನಂಬರ್ ಜೆರ್ಸಿ ಧರಿಸಿ ಆಡಲಿದ್ದಾರೆ.
ಆರ್‌ಸಿಬಿ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ?
ಸ್ಮೃತಿ ಮಂಧಾನ ಮಹಿಳಾ ಪ್ರೀಮಿಯರ್ ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ. ಆದರೆ ಇದೇ ವೇಳೆ ತಂಡಕ್ಕೆ ಆಸ್ಟ್ರೇಲಿಯಾ ಆಲ್‌ರೌಂಡರ್ ಎಲ್ಲಿಸಿ ಪೆರ್ರಿ ಬಂದಿರುವುದು, ತುಸು ಸ್ಪರ್ಧೆ ಹೆಚ್ಚಾಗಿರಲಿದೆ. ಸ್ಮೃತಿ ಮಂಧಾನ ಕ್ರಿಕೆಟ್‌ನ ಎಲ್ಲಾ ಸ್ವರೂಪಗಳಲ್ಲಿ ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications