RCB WPL Schedule 2023 : ಆರ್ಸಿಬಿ ಪಂದ್ಯಗಳ ವಿವರ : ಯಾವ ದಿನ ಯಾರು ಎದುರಾಳಿ ಸಂಪೂರ್ಣ ಮಾಹಿತಿ

ಭಾರಿ ನಿರೀಕ್ಷೆಯ ಮಹಿಳಾ ಪ್ರೀಮಿಯರ್ ಲೀಗ್ 2023 ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಇತ್ತೀಚೆಗೆ ಮುಕ್ತಾಯವಾದ ಮಹಿಳಾ ಪ್ರೀಮಿಯರ್ ಲೀಗ್ ಹರಾಜಿನಲ್ಲಿ ಐದು ಫ್ರಾಂಚೈಸಿಗಳು ಬಲಿಷ್ಠ ತಂಡವನ್ನು ಕಟ್ಟಿಕೊಂಡಿದ್ದು, ಚೊಚ್ಚಲ ಕಪ್ ಗೆಲ್ಲಲು ಸೆಣೆಸಲಿವೆ.
ಮಾರ್ಚ್ 4 ರಂದು ಲೀಗ್‌ನ ಮೊದಲ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಮಾರ್ಚ್ 26ರಂದು ನಡೆಯಲಿದೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಎಲ್ಲಾ ಪಂದ್ಯಗಳು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಮತ್ತು ಬ್ರಾಬೌರ್ನ್ ಸ್ಟೇಡಿಯಂನಲ್ಲಿ ನಡೆಯಲಿವೆ. ಪಾಯಿಂಟ್ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನದಲ್ಲಿರುವ ತಂಡಗಳು ನಾಕೌಟ್ ಹಂತವನ್ನು ಪ್ರವೇಶಿಸಲಿವೆ. ಅಗ್ರಸ್ಥಾನದಲ್ಲಿರುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದ್ದು, ಎರಡು ಮತ್ತು ಮೂರನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯದಲ್ಲಿ ಸೆಣೆಸಲಿವೆ. ಅಲ್ಲಿ ಗೆಲ್ಲುವ ತಂಡ ಫೈನಲ್‌ಗೆ ಪ್ರವೇಶಿಸಲಿದೆ.
ಎಲ್ಲಾ ತಂಡಗಳು ಲೀಗ್ ಹಂತದಲ್ಲಿ 8 ಪಂದ್ಯಗಳನ್ನು ಆಡಲಿವೆ. ಪ್ರತಿ ತಂಡ ಉಳಿದ ತಂಡಗಳ ವಿರುದ್ಧ ಎರಡು ಬಾರಿ ಸ್ಪರ್ಧಿಸಲಿದೆ. ಪ್ರಮುಖ ಆಟಗಾರರನ್ನು ಒಳಗೊಂಡಿರುವ, ಬಲಿಷ್ಠ ತಂಡವೆಂದು ಕಾಣುತ್ತಿರುವ ಆರ್ಸಿಬಿ ಬಗ್ಗೆ ಈ ಬಾರಿ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ.

ಆರ್ಸಿಬಿ ಪಂದ್ಯಗಳ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ. ಮಾರ್ಚ್ 5 ರಂದು ಭಾನುವಾರ ಮಧ್ಯಾಹ್ನ 3.30 ಗಂಟೆಗೆ ಪಂದ್ಯ ಆರಂಭವಾಗಲಿದ್ದು. ಬ್ರಾಬೌರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ .
ಮಾರ್ಚ್ 6 ರಂದು ಸೋಮವಾರ ಆರ್ಸಿಬಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಬ್ರಾಬೌರ್ನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ಸಂಜೆ 7.30ಕ್ಕೆ ಆರಂಭವಾಗಲಿದೆ.
ಮಾರ್ಚ್ 8 ರಂದು ಬುಧವಾರ ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದ್ದು, ಬ್ರಾಬೌರ್ನ್ ಸ್ಟೇಡಿಯಂನಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದೆ.
ಮಾರ್ಚ್ 10 ರಂದು ಆರ್ಸಿಬಿ ಯುಪಿ ವಾರಿಯರ್ಜ್ ವಿರುದ್ದ ಸೆಣೆಸಲಿದ್ದಾರೆ. ಈ ಪಂದ್ಯ ಕೂಡ ಬ್ರಾಬೌರ್ನ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ 7.30ಕ್ಕೆ ಆರಂಭವಾಗಲಿದೆ.
ಮಾರ್ಚ್ 13 ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 15 ರಂದು ಯುಪಿ ವಾರಿಯರ್ಜ್ ವಿರುದ್ಧ ಆಡಲಿದ್ದಾರೆ. ಎರಡೂ ಪಂದ್ಯಗಳು , ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಮಾರ್ಚ್ 18ರಂದು ಬ್ರಾಬೌರ್ನ್ ಅಂಗಳದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಆಡಲಿದೆ. ಈ ಎಲ್ಲಾ ಪಂದ್ಯಗಳು 7.30ಕ್ಕೆ ಆರಂಭವಾಗುತ್ತವೆ.
ಮಾರ್ಚ್ 21ರಂದು, ಭಾನುವಾರ ಆರ್ಸಿಬಿ ಲೀಗ್ ಹಂತದ ತನ್ನ ಕೊನೆಯ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಈ ಪಂದ್ಯ ಆರಂಭವಾಗಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications