Women's T20 World Cup 2026: ಭಾರತ, ಪಾಕ್ ಹೈವೋಲ್ಟೇಜ್ ಫೈಟ್: ಶುಭಾರಂಭದ ಕನಸಿನಲ್ಲಿ ಹರ್ಮನ್ ಪಡೆ
ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್‌ನಲ್ಲಿ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಆರಂಭವಾಗಿದೆ. ಈ ಮೆಗಾ ಇವೆಂಟ್‌ನಲ್ಲಿ ಭಾರತ ಭಾನುವಾರ ಅಖಾಡಕ್ಕೆ ಇಳಿಯಲಿದೆ. ಮೊದಲ ಗುಂಪಿನಲ್ಲಿ ಭಾರತ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡಗಳು ಕಾದಾಟ ನಡೆಸಲಿವೆ. ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿ ಶುಭಾರಂಭ ಮಾಡುವ ಕನಸು ಭಾರತ ತಂಡದ್ದಾಗಿದೆ.
ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಹರ್ಮನ್ ಪ್ರೀತ್ ಪಡೆ, ಟಿ20 ವಿಶ್ವಕಪ್ ಪ್ರಶಸ್ತಿ ಗೆಲ್ಲುವ ಇರಾದೆಯನ್ನು ಹೊಂದಿದೆ. ಪ್ರಶಸ್ತಿ ಗೆಲ್ಲುವ ಅಭಿಯಾನವನ್ನು ಪಾಕ್ ವಿರುದ್ದದ ಜಯದೊಂದಿಗೆ ಆರಂಭಿಸುವ ಆಸೆಯನ್ನು ಭಾರತ ಹೊಂದಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಎಲ್ಲರ ಚಿತ್ತ ಕದ್ದಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿಲ್ಲ. ಈ ಎರಡೂ ದೇಶಗಳು ಈಗ ಐಸಿಸಿ ಇವೆಂಟ್ ಹಾಗೂ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರ ಭಾಗವಹಿಸುತ್ತಿವೆ. ಹೀಗಾಗಿ ಈ ಎರಡೂ ದೇಶಗಳು ಅಂಗಳಕ್ಕೆ ಇಳಿದಾಗಲೆಲ್ಲಾ ಹೈವೋಲ್ಟೇಜ್ ಕಾಣುತ್ತಿದೆ. ಉಭಯ ತಂಡಗಳು ಈಗಾಗಲೇ ಟಿ20 ವಿಶ್ವಕಪ್‌ನಲ್ಲಿ 6 ಬಾರಿ ಮುಖಾಮುಖಿಯಾಗಿದ್ದು, ಭಾರತ 4, ಪಾಕ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಸ್ಮೃತಿ ಆಕರ್ಷಣೆ
ಟೀಮ್ ಇಂಡಿಯಾದ ಪರ ಆರಂಭಿಕರಾಗಿ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಕಣಕ್ಕೆ ಇಳಿಯಲಿದ್ದಾರೆ. ಈ ಇಬ್ಬರೂ ಆಟಗಾರರು ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರಿಂದ ಒತ್ತಡದಲ್ಲಿದ್ದಾರೆ. ಇವರು ಈಗಾಗಲೇ ಪಾಕ್ ವಿರುದ್ಧ ಆಡಿದ 10 ಟಿ20 ಪಂದ್ಯಗಳಲ್ಲಿ 26ರ ಸರಾಸರಿಯಲ್ಲಿ 239 ರನ್ ಕಲೆ ಹಾಕಿದ್ದಾರೆ. ಈ ವೇಳೆ 1 ಅರ್ಧಶತಕ ಸಹ ಸಿಡಿಸಿದ್ದಾರೆ. ಶಫಾಲಿ ಸಹ ಪಾಕ್ ಬೌಲರ್‌ಗಳನ್ನು ಕಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.
ಏಕದಿನ ವಿಶ್ವಕಪ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ್ದ ಜೆಮಿಮಾ ರೊಡ್ರಿಗಸ್ ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ಭರವಸೆ ಮೂಡಿಸಿದ್ದಾರೆ. ಇವರು ನೆಲಕಚ್ಚಿ ನಿಂತು ಬ್ಯಾಟ್ ಮಾಡುವ ಕ್ಷಮತೆಯನ್ನು ಕರಗತ ಮಾಡಿಕೊಂಡಿದ್ದಾರೆ. ಇನ್ನು ನಾಯಕಿ ಹರ್ಮನ್ ಪ್ರೀತ್ ಕೌರ್ ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡಿ ತಂಡಕ್ಕೆ ಆಧಾರವಾಗುವ ಕನಸು ಕಾಣುತ್ತಿದ್ದಾರೆ. ಉಳಿದಂತೆ ವಿಕೆಟ್ ಕೀಪರ್ ರಿಚಾ ಘೋಷ್, ಯಾಸ್ತಿಕಾ ಭಾಟಿಯಾ ಅವರು ರನ್ ವೇಗಕ್ಕೆ ಚುರುಕು ಮುಟ್ಟಿಸಬಲ್ಲ ಕ್ಷಮತೆ ಹೊಂದಿದ್ದಾರೆ.

ಆಲ್‌ರೌಂಡರ್ ಆಗಿ ದೀಪ್ತಿ ಶರ್ಮಾ ಕಣಕ್ಕೆ ಇಳಿಯಲಿದ್ದು, ಎಲ್ಲರ ಚಿತ್ತ ಕದ್ದಿದ್ದಾರೆ. ವೇಗದ ಬೌಲರ್ ಆಗಿ ರೇಣುಕಾ ಸಿಂಗ್, ಕ್ರಾಂತಿ ಗೌಡ, ಅರುಂಧತಿ ರೆಡ್ಡಿ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗಬೇಕಿದೆ. ಸ್ಪಿನ್ ಬೌಲರ್ ಆಗಿ ತಂಡದಲ್ಲಿ ಸ್ಥಾನ ಪಡೆಯಲು ಶ್ರೀ ಚರಣಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟಿಲ್ ಚಿತ್ತ ನೆಟ್ಟಿದ್ದಾರೆ.
ಗುಲ್ ಫೆರೋಜಾ ಬಲ
ಪಾಕಿಸ್ತಾನದ ಬ್ಯಾಟಿಂಗ್ ವಿಭಾಗದಲ್ಲಿ ಗುಲ್ ಫೆರೋಜಾ ಕಾಣಿಸಿಕೊಳ್ಳಲಿದ್ದು, ಇವರು ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅಲಿಯಾ ರಿಯಾಜ್ ಮತ್ತು ಆಯೆಷಾ ಜಾಫರ್ ಅವರಂತಹ ಅನುಭವಿಗಳು ತಂಡಕ್ಕೆ ಆಸರೆಯಾಗಲಿದ್ದಾರೆ. ಎಡಗೈ ಸ್ಪಿನ್ನರ್ ನಶ್ರಾ ಸಂಧು ಅವರೊಂದಿಗೆ ಸಾದಿಯಾ ಇಕ್ಬಾಲ್, ತೂಬಾ ಹಸನ್ ಮತ್ತು ರಮೀನ್ ಶಮೀಮ್ ಸ್ಪಿನ್ ಬೌಲರ್ ಆಗಿ ಕಣಕ್ಕೆ ಇಳಿಯಬಹುದಾಗಿದೆ. ವೇಗದ ಬೌಲಿಂಗ್‌ನಲ್ಲಿ ಅನುಭವಿ ಡಯಾನಾ ಬೇಗ್ ಮತ್ತು ನಾಯಕಿ ಫಾತಿಮಾ ಸನಾ ಬಿಗುವಿನ ದಾಳಿ ನಡೆಸಿ ತಂಡಕ್ಕೆ ಆಧಾರವಾಗುವ ಕನಸು ಕಾಣುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

