Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಆಡುವ ಬಳಗ, ಪಿಚ್ ವರದಿ

Womens T20 WC: Australia Has Won The Toss And Opted To Bat First Against India In The Semifinal

ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ನಡೆಯುತ್ತಿರುವ ಟಿ20 ಮಹಿಳಾ ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಚೇತರಿಸಿಕೊಂಡಿದ್ದು, ತಂಡವನ್ನು ಮುನ್ನಡೆಸಲಿದ್ದಾರೆ. ಪೂಜಾ ವಸ್ತ್ರಾಕರ್ ಅನಾರೋಗ್ಯದಿಂದ ಬಳಲುತ್ತಿದ್ದು ಸೆಮಿಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಗೆದ್ದಿರುವ ಭಾರತದ ವನಿತೆಯರು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವ ವಿಶ್ವಾಸದಲ್ಲಿದ್ದಾರೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ತಂಡ ಫೈನಲ್‌ನಲ್ಲಿ ಇಂಗ್ಲೆಂಡ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಲಿದೆ.

ಸೆಮಿಫೈನಲ್ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ದೇವಿಕಾ ವೈದ್ಯ, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್ ತಂಡದಿಂದ ಹೊರಗುಳಿದಿದ್ದು, ಯಾಸ್ತಿಕಾ ಭಾಟಿಯಾ, ಸ್ನೇಹ ರಾಣಾ, ರಾಧಾ ಯಾದವ್‌ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಪಿಚ್‌ ಬ್ಯಾಟರ್ ಗಳಿಗೆ ಹೆಚ್ಚಿನ ನೆರವು ನೀಡಲಿದ್ದು, ಹೈ ಸ್ಕೋರಿಂಗ್ ಪಂದ್ಯವಾಗುವ ಸಾಧ್ಯತೆ ಇದೆ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾಘೋಷ್ ಹೇಳಿದ್ದರು. ಮೊದಲು ಬ್ಯಾಟಿಂಗ್ ಮಾಡಿದರೆ 180 ರನ್‌ ಗಳಿಸುವ ಸಾಧ್ಯತೆ ಇದೆ.

Womens T20 WC: Australia Has Won The Toss And Opted To Bat First Against India In The Semifinal

ಆಸ್ಟ್ರೇಲಿಯಾ ತಂಡದಲ್ಲಿಯೂ ಬದಲಾವಣೆ

ಪ್ರಮುಖ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ಕೂಡ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಿದೆ. ಅನ್ನಾಬೆಲ್ ಸುದರ್ಲ್ಯಾಂಡ್ ಮತ್ತು ಅಲಾನಾ ಕಿಂಗ್ ತಂಡದಿಂದ ಹೊರಗುಳಿದಿದ್ದು, ವಿಕೆಟ್ ಕೀಪರ್ ಅಲ್ಲಿಸಾ ಹೀಲಿ ಮತ್ತು ಜೆಸ್ ಜೊನಾಸ್ಸೆನ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಮಾತ್ರ ಆಸ್ಟ್ರೇಲಿಯಾ ತಂಡವನ್ನು ಎರಡು ಬಾರಿ ಸೋಲಿಸಿರುವ ದಾಖಲೆಯನ್ನು ಹೊಂದಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಭಾರತ ದೊಡ್ಡ ಎದುರಾಳಿಯನ್ನು ಸೋಲಿಸಿದಂತಾಗುತ್ತದೆ.

Womens T20 WC: Australia Has Won The Toss And Opted To Bat First Against India In The Semifinal

ಉಭಯ ತಂಡಗಳ ಆಡುವ ಬಳಗ

ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಯಾಸ್ತಿಕಾ ಭಾಟಿಯಾ, ಸ್ನೇಹ ರಾಣಾ, ಶಿಖಾ ಪಾಂಡೆ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್.

ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಬೆತ್ ಮೂನಿ, ಮೆಗ್ ಲ್ಯಾನಿಂಗ್ (ನಾಯಕಿ), ಆಶ್ಲೆ ಗಾರ್ಡ್ನರ್, ಎಲ್ಲಿಸ್ ಪೆರ್ರಿ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೇರ್‌ಹ್ಯಾಮ್, ಜೆಸ್ ಜೊನಾಸೆನ್, ಮೇಗನ್ ಸ್ಕಟ್, ಡಾರ್ಸಿ ಬ್ರೌನ್.

Story first published: Thursday, February 23, 2023, 18:32 [IST]
Other articles published on Feb 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+