Women's T20 World Cup: ಸೆಮಿಫೈನಲ್ ಪಂದ್ಯಕ್ಕೆ ಹರ್ಮನ್‌ಪ್ರೀತ್ ಕೌರ್ ಅಲಭ್ಯತೆ: ಸ್ಮೃತಿ ಮಂದಾನ ನಾಯಕಿ

ದಕ್ಷಿಣ ಆಫ್ರಿಕಾದದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್‌ನ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಸೆಮಿಫೈನಲ್ ಪಂದ್ಯಕ್ಕೆ ಮುನ್ನವೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಅನಾರೋಗ್ಯದ ಕಾರಣದಿಂದ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಪೂಜಾ ವಸ್ತ್ರಾಕರ್ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ಹರ್ಮನ್‌ಪ್ರೀತ್ ಕೌರ್ ಅಲಭ್ಯತೆಯಲ್ಲಿ ಭಾರತ ತಂಡವನ್ನು ಸ್ಮೃತಿ ಮಂದಾನ ಮುನ್ನಡೆಸಲಿದ್ದಾರೆ. ಫೆಬ್ರವರಿ 23 ಗುರುವಾರ ಸಂಜೆ 6.30ಕ್ಕೆ ಪಂದ್ಯ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಅಂಗಳದಲ್ಲಿ ಈ ಪಂದ್ಯ ನಡೆಯಲಿದೆ.
ಮಹತ್ವದ ಪಂದ್ಯಕ್ಕೆ ಮುನ್ನವೇ ನಾಯಕಿ ಅಲಭ್ಯವಾಗಿರುವುದು ತಂಡಕ್ಕೆ ಹಿನ್ನಡೆ ಉಂಟು ಮಾಡಿದೆ, ಆದರೂ ಮಂದಾನ ನಾಯಕತ್ವದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಜಯಗಳಿಸುವ ವಿಶ್ವಾಸದಲ್ಲಿದೆ ಭಾರತ ಮಹಿಳಾ ತಂಡ.
ಲೀಗ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಭಾರತ ತಂಡ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಭಾರತ ಮಹಿಳಾ ತಂಡ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಐರ್ಲೆಂಡ್ ವಿರುದ್ಧ ಡಿಎಲ್‌ಎಸ್ ನಿಯಮದಂತೆ 5 ರನ್‌ಗಳ ಜಯ ಸಾಧಿಸಿತ್ತು.

ಉತ್ತಮ ಫಾರ್ಮ್‌ನಲ್ಲಿರುವ ಸ್ಮೃತಿ ಮಂದಾನ
ಸ್ಮೃತಿ ಮಂದಾನ ಭರ್ಜರಿ ಫಾರ್ಮ್‌ನಲ್ಲಿರುವುದು ಭಾರತ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಮಂದಾನ ಟಿ20 ವಿಶ್ವಕಪ್‌ನಲ್ಲಿ ಇರುವರೆಗೂ ಆಡಿರುವ ಮೂರು ಪಂದ್ಯಗಳಿಂದ 49.67 ಸರಾಸರಿಯಲ್ಲಿ 143.27 ಸ್ಟ್ರೈಕ್‌ರೇಟ್‌ನಲ್ಲಿ 149 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮಂದಾನ ಮಿಂಚಿದರೆ ಕಠಿಣ ಸವಾಲೊಡ್ಡಬಹುದಾಗಿದೆ. ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು 4 ಪಂದ್ಯಗಳಿಂದ 140.23 ಸ್ಟ್ರೈಕ್‌ರೇಟ್‌ನಲ್ಲಿ 122 ರನ್ ಗಳಿಸಿದ್ದಾರೆ.
ಎ ಗುಂಪಿನಲ್ಲಿ ಯಾವುದೇ ಸೋಲು ಕಾಣದೆ ಸೆಮಿಫೈನಲ್ ಪ್ರವೇಶಿಸಿರುವ ಆಸ್ಟ್ರೇಲಿಯಾ ಭಾರತದ ವಿರುದ್ಧ ಗೆದ್ದು ಫೈನಲ್‌ಗೇರುವ ವಿಶ್ವಾಸದಲ್ಲಿದೆ. ಆಸ್ಟ್ರೇಲಿಯಾ ಭಾರತದ ವಿರುದ್ಧ ಆಡಿರುವ 30 ಟಿ20 ಪಂದ್ಯಗಳಲ್ಲಿ 22 ಪಂದ್ಯಗಳಲ್ಲಿ ಜಯ ಗಳಿಸಿದ್ದು, ಭಾರತ 7 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ, ಒಂದು ಪಂದ್ಯ ಫಲಿತಾಂಶವಿಲ್ಲದೆ ಅಂತ್ಯವಾಗಿದೆ.
ಕೇಪ್‌ಟೌನ್ ನ್ಯೂಲ್ಯಾಂಡ್ಸ್ ಅಂಗಳ ಬ್ಯಾಟಿಂಗ್‌ಗೆ ಸಹಕಾರಿಯಾಗಿದ್ದು ಮೊದಲು ಬ್ಯಾಟ್ ಮಾಡುವ ತಂಡ 150ಕ್ಕೂ ಹೆಚ್ಚು ರನ್ ಗಳಿಸಿದರೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಇಂದು ಜಯ ಸಾಧಿಸುವ ತಂಡ ಫೈನಲ್‌ನಲ್ಲಿ ಇಂಗ್ಲೆಂಡ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ಸೆಣೆಸಲಿದೆ.

ಉಭಯ ತಂಡಗಳ ಸಂಭಾವ್ಯ ಬಳಗ
ಭಾರತ : ಸ್ಮೃತಿ ಮಂದಾನ (ನಾಯಕಿ), ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ರಿಚಾ ಘೋಷ್ (ವಿಕೆಟ್ ಕೀಪರ್), ದೇವಿಕಾ ವೈದ್ಯ, ದೀಪ್ತಿ ಶರ್ಮಾ, ಶಿಖಾ ಪಾಂಡೆ, ರಾಜೇಶ್ವರಿ ಗಾಯಕ್‌ವಾಡ್, ರೇಣುಕಾ ಠಾಕೂರ್ ಸಿಂಗ್, ಯಾಸ್ತಿಕಾ ಭಾಟಿಯಾ.
ಆಸ್ಟ್ರೇಲಿಯಾ : ಬೆತ್ ಮೂನಿ (ವಿಕೆಟ್ ಕೀಪರ್), ಎಲ್ಲಿಸ್ ಪೆರ್ರಿ, ಮೆಗ್ ಲ್ಯಾನಿಂಗ್ (ನಾಯಕಿ), ಆಶ್ಲೇ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೇರ್‌ಹ್ಯಾಮ್, ಅನ್ನಾಬೆಲ್ ಸದರ್ಲ್ಯಾಂಡ್, ಅಲಾನಾ ಕಿಂಗ್, ಮೇಗನ್ ಸ್ಕಟ್, ಡಾರ್ಸಿ ಬ್ರೌನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications