Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup Final: ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ಫೈನಲ್ ಪಂದ್ಯದ ಸಂಭಾವ್ಯ ಆಡುವ ಬಳಗ

Womens T20 World Cup 2023 Final: SA-W vs AUS-W, Probable XI and match details

ಮಹಿಳಾ ಟಿ20 ವಿಶ್ವಕಪ್‌ ಅಂತಿಮ ಘಟ್ಟವನ್ನು ತಲುಪಿದೆ. ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಫೈನಲ್‌ಗೆ ಪ್ರವೇಶ ಪಡೆದಿದ್ದು ಪ್ರತಿಷ್ಠಿತ ಟೂರ್ನಿಯಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಹಾಲಿ ಚಾಂಪಿಯನ್ ತಂಡವಾಗಿರುವ ಆಸ್ಟ್ರೇಲಿಯಾವನ್ನು ಮಣಿಸಲು ಆತಿಥೇಯ ದಕ್ಷಿಣ ಆಫ್ರಿಕಾ ಹವಣಿಸುತ್ತಿದ್ದು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಕನಸುಕಾಣುತ್ತಿದೆ.

ಆತಿಥೆಯ ದಕ್ಷಿಣ ಆಫ್ರಿಕಾ ಸೆಮಿ-ಫೈನಲ್‌ನಲ್ಲಿ ಹಾಟ್-ಫೇವರಿಟ್ ಇಂಗ್ಲೆಂಡ್ ವಿರುದ್ಧ ಸ್ಮರಣೀಯ ಜಯ ಸಾಧಿಸಿದ ಫೈನಲ್‌ಗೆ ಪ್ರವೇಶಿಸಿದೆ. ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇದೇ ಮೊದಲ ಬಾರಿಗೆ ಪ್ರವೇಶಿಸಿದ್ದು ಹಾಲಿ ಚಾಂಪಿಯನ್ ಆಸ್ಟ್ರೇಲಿಯ ವಿರುದ್ಧ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ಪ್ರಯತ್ನದಲ್ಲಿದೆ.

ಪಂದ್ಯದ ಮಾಹಿತಿ: ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಮಡಗಳ ನಡುವಿನ ಫೈನಲ್ ಪಂದ್ಯ ಫೆಬ್ರವರಿ 26 ಭಾನುವಾರ ನಡೆಯಲಿದೆ. ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಸಂಜೆ 6:30ಕ್ಕೆ ಪಂದ್ಯ ಆಯೋಜನೆಯಾಗಲಿದೆ.

ದಕ್ಷಿಣ ಆಫ್ರಿಕಾ ಸಂಭಾವ್ಯ ಆಡುವ ಬಳಗ: ಲಾರಾ ವೊಲ್ವಾರ್ಡ್ಟ್, ತಜ್ಮಿನ್ ಬ್ರಿಟ್ಸ್, ಮಾರಿಜಾನ್ನೆ ಕಪ್, ಸುನೆ ಲೂಸ್ (ನಾಯಕಿ), ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಅನ್ನೆಕೆ ಬಾಷ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ಶಬ್ನಿಮ್ ಇಸ್ಮಾಯಿಲ್, ಅಯಾಬೊಂಗಾ ಖಾಕಾ, ನಾನ್‌ಕುಲುಲೆಕೊ ಮ್ಲಾಬಾ

ಆಸ್ಟ್ರೇಲಿಯಾ ಮಹಿಳೆಯ: ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಬೆತ್ ಮೂನಿ, ಮೆಗ್ ಲ್ಯಾನಿಂಗ್ (ನಾಯಕಿ), ಆಶ್ಲೀಗ್ ಗಾರ್ಡ್ನರ್, ಎಲ್ಲಿಸ್ ಪೆರ್ರಿ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೇರ್‌ಹ್ಯಾಮ್, ಜೆಸ್ ಜೊನಾಸ್ಸೆನ್, ಮೇಗನ್ ಶುಟ್, ಡಾರ್ಸಿ ಬ್ರೌನ್

Story first published: Saturday, February 25, 2023, 17:05 [IST]
Other articles published on Feb 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+