Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup 2023: ಭಾರತ vs ಇಂಗ್ಲೆಂಡ್ ಪಂದ್ಯದ ಟಾಸ್ ವರದಿ; ಗೆಲ್ಲುತ್ತಾರಾ ಭಾರತ ವನಿತೆಯರು?

Womens T20 World Cup 2023: India vs England Toss Report, Playing 11 And Live Score

ದಕ್ಷಿಣ ಆಫ್ರಿಕಾದ ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ 2023ರ ಮಹಿಳಾ ಟಿ20 ವಿಶ್ವಕಪ್‌ನ ಲೀಗ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಬಲಿಷ್ಠ ಇಂಗ್ಲೆಂಡ್ ಮಹಿಳಾ ತಂಡವನ್ನು ಎದುರಿಸುತ್ತಿದೆ.

ಮಹಿಳಾ ಟಿ20 ವಿಶ್ವಕಪ್‌ನ ಬಿ ಗುಂಪಿನಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಹೀಗಾಗಿ ಹೀಥರ್ ನೈಟ್ ನಾಯಕತ್ವದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಎರಡು ಪಂದ್ಯಗಳಿಂದ ಎರಡು ಗೆಲುವುಗಳೊಂದಿಗೆ ಇಂಗ್ಲೆಂಡ್ ಮಹಿಳಾ ತಂಡ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಅಷ್ಟೇ ಗೆಲುವುಗಳಿಂದ ಭಾರತ ಮಹಿಳಾ ತಂಡ ನಿವ್ವಳ ರನ್-ರೇಟ್‌ನಿಂದಾಗಿ ಎರಡನೇ ಸ್ಥಾನದಲ್ಲಿದೆ.

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಗೆದ್ದರೆ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ಹಂತ ಖಚಿತಪಡಿಸುತ್ತದೆ. ಆದರೆ, ಭಾರತ ಅಗ್ರಕ್ರಮಾಂಕದ ಬ್ಯಾಟರ್‌ಗಳು ಕೈಕೊಡುತ್ತಿದ್ದರೂ, ಮಧ್ಯಮ ಕ್ರಮಾಂಕದಲ್ಲಿ ಉತ್ತಮ ಆಟ ಬರುತ್ತಿದೆ.

ಪಾಕಿಸ್ತಾನದ ವಿರುದ್ಧದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ದೊಡ್ಡ ಪ್ರದರ್ಶನ ನೀಡಲು ವಿಫಲರಾದ ಸ್ಮೃತಿ ಮಂಧಾನ ಅವರ ಫಾರ್ಮ್ ಮೇಲೆ ಫಲಿತಾಂಶ ಕೇಂದ್ರೀಕೃತವಾಗಿದೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳ ಆಡುವ 11ರ ಬಳಗ
ಭಾರತ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಜೆಮಿಮಾ ರಾಡ್ರಿಗಸ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ದೀಪ್ತಿ ಶರ್ಮಾ, ರಾಧಾ ಯಾದವ್, ಶಿಖಾ ಪಾಂಡೆ, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್.

ಇಂಗ್ಲೆಂಡ್: ಸೋಫಿಯಾ ಡಂಕ್ಲಿ, ಡ್ಯಾನಿ ವ್ಯಾಟ್, ಆಲಿಸ್ ಕ್ಯಾಪ್ಸೆ, ನ್ಯಾಟ್ ಸ್ಕೈವರ್-ಬ್ರಂಟ್, ಹೀಥರ್ ನೈಟ್ (ನಾಯಕಿ), ಆಮಿ ಜೋನ್ಸ್ (ವಿಕೆಟ್ ಕೀಪರ್), ಕ್ಯಾಥರೀನ್ ಸ್ಕೈವರ್-ಬ್ರಂಟ್, ಸೋಫಿ ಎಕ್ಲೆಸ್ಟೋನ್, ಚಾರ್ಲಿ ಡೀನ್, ಸಾರಾ ಗ್ಲೆನ್, ಲಾರೆನ್ ಬೆಲ್.

Story first published: Saturday, February 18, 2023, 18:40 [IST]
Other articles published on Feb 18, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+