T20 World Cup 2023: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯಕ್ಕೆ ಸ್ಮೃತಿ ಮಂಧಾನ ವಾಪಸ್; ಹೇಗಿದೆ 11ರ ಬಳಗ

2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಮಹಿಳಾ ತಂಡ ಗ್ರೂಪ್ "ಬಿ'ನ ತನ್ನ ಎರಡನೇ ಪಂದ್ಯವನ್ನು ಬುಧವಾರ, ಫೆಬ್ರವರಿ 15ರಂದು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ವೆಸ್ಟ್ ಇಂಡೀಸ್ ಮಹಿಳಾ ತಂಡದ ವಿರುದ್ಧ ಆಡಲಿದೆ.
ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳೆಯರು ತಮ್ಮ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಿತು.
2020ರ ಮಹಿಳಾ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ಮಹಿಳಾ ತಂಡವು ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಸೋತಿತು. ಆದರೆ ಈ ಬಾರಿ ಎಲ್ಲ ಅಡಚಣೆ ದಾಟಿ ಟಿ20 ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯುವ ಭರವಸೆಯಲ್ಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದಲ್ಲಿ ಜೆಮಿಮಾ ರೋಡ್ರಿಗಸ್ ಮತ್ತು ರಿಚಾ ಘೋಷ್ ಪಂದ್ಯ ವಿಜೇತ ಪ್ರದರ್ಶನ ನೀಡಿದರು. ಕೈಬೆರಳು ಗಾಯದಿಂದ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ವೆಸ್ಟ್ ಇಂಡೀಸ್ ವಿರುದ್ಧ ಭಾರತ ತಂಡದ ಆಡುವ ಬಳಗಕ್ಕೆ ಹಿಂದಿರುಗಲಿದ್ದಾರೆ.

"ಆಶಾದಾಯಕವಾಗಿ ಸ್ಮೃತಿ ಮಂಧಾನ ಎರಡನೇ ಪಂದ್ಯಕ್ಕೆ ಮರಳಲಿದ್ದಾಳೆ. ಕಷ್ಟಪಟ್ಟು ಅಭ್ಯಾಸ ಮಾಡುತ್ತಿದ್ದಾಳೆ ಮತ್ತು ನಾವು ಶೀಘ್ರದಲ್ಲೇ ಸ್ಮೃತಿ ಆಡುವ ಪರಿಸ್ಥಿತಿಯನ್ನು ನಿರ್ಧರಿಸುತ್ತೇವೆ. ಮುಂದಿನ ಪಂದ್ಯಕ್ಕೆ ಮೊದಲು ಪೂರ್ಣ ಫಿಟ್‌ನೆಸ್ ಮರಳಿ ಪಡೆಯಲಿದ್ದಾರೆ ಎಂದು ನಮಗೆ ಸಾಕಷ್ಟು ವಿಶ್ವಾಸವಿದೆ," ಎಂದು ಭಾರತ ಮಹಿಳಾ ತಂಡದ ಬೌಲಿಂಗ್ ಕೋಚ್ ಟ್ರಾಯ್ ಕೂಲೀ ತಿಳಿಸಿದ್ದಾರೆ.
2023ರ ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್‌ಗಾಗಿ ಸೋಮವಾರ, ಫೆಬ್ರವರಿ 13ರಂದು ನಡೆದ ಮಹಿಳಾ ಆಟಗಾರ್ತಿಯರ ಹರಾಜಿನಲ್ಲಿ ಸ್ಮೃತಿ ಮಂಧಾನ ಅವರನ್ನು 3.40 ಕೋಟಿ ರೂ.ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಹಿಳಾ ತಂಡ ಖರೀದಿಸಿತು.
ಭಾರತ ಮಹಿಳೆಯರು vs ವೆಸ್ಟ್ ಇಂಡೀಸ್ ಸಂಭಾವ್ಯ ಆಡುವ 11ರ ಬಳಗ
ಭಾರತ ಮಹಿಳೆಯರು: ಯಾಸ್ತಿಕಾ ಭಾಟಿಯಾ, ಜೆಮಿಮಾ ರೋಡ್ರಿಗಸ್, ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್ (ನಾಯಕ), ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್, ರಾಜೇಶ್ವರಿ ಗಾಯಕ್ವಾಡ್, ರಾಧಾ ಯಾದವ್.
ವೆಸ್ಟ್ ಇಂಡೀಸ್ ಮಹಿಳೆಯರು: ಆರ್‌ಎಸ್ ವಿಲಿಯಮ್ಸ್, ಚೆಡಿಯನ್ ನೇಷನ್, ಸ್ಟೆಫಾನಿ ಟೇಲರ್, ಹೀಲಿ ಮ್ಯಾಥ್ಯೂಸ್ (ನಾಯಕ), ಚಿನೆಲ್ಲೆ ಹೆನ್ರಿ, ಜೈದಾ ಜೇಮ್ಸ್, ಶೆಮೈನ್ ಕ್ಯಾಂಪ್‌ಬೆಲ್ಲೆ, ಶಬಿಕಾ ಗಜ್ನಾಬಿ, ಅಫಿ ಫ್ಲೆಚರ್, ಷಕೇರಾ ಸೆಲ್ಮನ್, ಎಸ್‌ಎಸ್ ಕಾನೆಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications