Women's T20 World Cup 2023: ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೆ ಸ್ಮೃತಿ ಮಂಧಾನ ಅನುಮಾನ!

2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಎಂಟನೇ ಆವೃತ್ತಿ ಶುಕ್ರವಾರ, ಫೆಬ್ರವರಿ 10ರಿಂದ ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಿದ್ದು, ಭಾರತ ಮಹಿಳಾ ತಂಡದ ಅಭಿಯಾನವು ಫೆಬ್ರವರಿ 12ರಿಂದ ಪಾಕಿಸ್ತಾನ ವಿರುದ್ಧ ಪ್ರಾರಂಭವಾಗಲಿದೆ.
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಬ್ಯಾಟರ್ ಆಡುವುದು ಅನುಮಾನವೆನಿಸಿದೆ ಎಂದು ವರದಿಗಳು ತಿಳಿಸಿವೆ.
ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಭಾರತದ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಮಹಿಳಾ ಟಿ20 ವಿಶ್ವಕಪ್ 2023ರಲ್ಲಿ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ತಿಳಿಸಲಾಗಿದೆ.
ಫೆಬ್ರವರಿ 12ರಂದು ಕೇಪ್ ಟೌನ್‌ನಲ್ಲಿ ನಡೆಯುವ ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ ಎಡಗೈ ಬ್ಯಾಟರ್ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಮಹಿಳಾ ತಂಡದ ಶಿಬಿರದಿಂದ ಸ್ಮೃತಿ ಮಂಧಾನ ಗಾಯದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲವಾದರೂ, ಬಾಂಗ್ಲಾದೇಶ ವಿರುದ್ಧದ ಭಾರತದ ಕೊನೆಯ ಅಭ್ಯಾಸ ಪಂದ್ಯದಲ್ಲಿ ಆರಂಭಿಕ ಆಟಗಾರ್ತಿ ಬ್ಯಾಟಿಂಗ್ ಮಾಡಲಿಲ್ಲ.

ಇತರ ಬ್ಯಾಟರ್‌ಗಳಿಗೆ ಅವಕಾಶ ಒದಗಿಸಲು ತಂಡದ ಮ್ಯಾನೇಜ್‌ಮೆಂಟ್‌ನ ತಂತ್ರಗಾರಿಕೆ ಇರಬಹುದಾದರೂ, ಸ್ಮೃತಿ ಮಂಧಾನ ಪಂದ್ಯದ ವೇಳೆ ಎಡಗೈನ ಮಧ್ಯದ ಬೆರಳಿಗೆ ಹೆಚ್ಚು ಬ್ಯಾಂಡೇಜ್ ಮಾಡಿರುವುದು ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ.
ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ಅಭ್ಯಾಸ ಪಂದ್ಯದ ವೇಳೆ 26 ವರ್ಷದ ಸ್ಮೃತಿ ಮಂಧಾನ ಕೈ ಬೆರಳಿಗೆ ಗಾಯವಾಗಿದೆ ಎಂದು ವರದಿಗಳು ಹೇಳಿದ್ದು, ತಮ್ಮ ವಿಶ್ವಕಪ್ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಲು ಬಯಸಿದ್ದ ಭಾರತ ತಂಡದ ವನಿತೆಯರಿಗೆ ಇದು ದೊಡ್ಡ ಹಿನ್ನಡೆಯಾಗಿದೆ.
ಮಹಾರಾಷ್ಟ್ರ ಮೂಲದ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧಾನ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಭಾರತ ತಂಡದ ಪ್ರಮುಖ ಆಟಗಾರ್ತಿಯರಾಗಿದ್ದಾರೆ.
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಜೊತೆಗೆ ಐಸಿಸಿ ಟ್ರೋಫಿಗಾಗಿ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಭಾರತ ತಂಡ, ದಕ್ಷಿಣ ಆಫ್ರಿಕಾದಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್ ಪಂದ್ಯದ ರೋಚಕ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ ಸೋತರು.
ಸ್ಮೃತಿ ಮಂಧಾನ ಹೊರತಾಗಿ, ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಭುಜದ ನೋವಿನಿಂದಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂಬ ವದಂತಿಗಳಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications