Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup: ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಬೇಕಿದೆ ನಾಯಕಿ ಹರ್ಮನ್: ಅಂಜುಮ್ ಚೋಪ್ರ

Womens T20 World Cup: Anjum Chopra said Indian skipper Harmanpreet Kaur needs to fire with bat against Australia

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂದು ಭಾರತ ಮಹತ್ವದ ಸೆಣೆಸಾಟಕ್ಕೆ ಸಜ್ಜಾಗಿದೆ. ಸೆಮಿಫೈನಲ್ ಹಂತಕ್ಕೇರಿರುವ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಹಿನ್ನೆಲೆಯಲ್ಲಿ ಭಾರತದ ಮಾಜಿ ಆಟಗಾರ್ತಿ ಅಂಜುಮ್ ಚೋಪ್ರ ಪ್ರತಿಕ್ರಿಯೆ ನೀಡಿದ್ದು ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂದೆ ನಿಂತು ತಂಡವನ್ನು ಮುನ್ನಡೆಸುವುದನ್ನು ನೋಡಲು ಬಯಸುವುದಾಗಿ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್‌ನಲ್ಲಿಯೂ ಅಬ್ಬರಿಸಬೇಕು ಎಂದಿದ್ದಾರೆ ಅಂಜುಮ್ ಚೋಪ್ರ.

ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಲೀಗ್ ಹಂತದದಲ್ಲಿ ಗ್ರೂಪ್ ಬಿಯಲ್ಲಿ ಭಾರತ ಎರಡನೇ ತಂಡವಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆದಿದ್ದರೆ ಆಸ್ಟ್ರೇಲಿಯಾ ತಂಡ ಎ ಗುಂಪಿನಲ್ಲಿ ಅಗ್ರಸ್ಥಾನದೊಂದಿಗೆ ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ.

ಇನ್ನು ಈ ಬಾರಿಯ ಲೀಗ್ ಹಂತದಲ್ಲಿ ಆಸ್ಟ್ರೇಲಿಯಾ ಆಡಿರುವ ಎಲ್ಲಾ ನಾಲ್ಕು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿ ಅಜೇಯವಾಗುಳಿದಿದೆ. ಹೀಗಾಗಿ ಈ ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಮುನ್ನುಗ್ಗುವ ಆತ್ಮವಿಶ್ವಾಸದಲ್ಲಿದೆ. ಆದರೆ ಭಾರತ ತಂಡ ಲೀಗ್ ಹಂತದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲು ಅನುಭವಿಸಿ ಹಿನ್ನಡೆ ಕಂಡಿದೆ. ಇನ್ನು ಒಟ್ಟಾರೆ ಟಿ20 ಪಂದ್ಯಗಳಲ್ಲಿಯೂ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ ಉತ್ತಮ ದಾಖಲೆ ಹೊಂದಿದ್ದು 22 ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಗೆದ್ದಿದ್ದರೆ 7 ಪಂದ್ಯಗಳಲ್ಲಿ ಮಾತ್ರವೇ ಭಾರತ ಗೆದ್ದಿದೆ.

ಸೆಮಿಫೈನಲ್ ಪಂದ್ಯದ ಹಿನ್ನೆಲೆಯಲ್ಲಿ ಅಂಜುಮ್ ಚೋಪ್ರ ಮಾತನಾಡಿ "ಸ್ಮೃತಿ ಮಂಧಾನ ಉತ್ತಮವಾಗಿ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಐರ್ಲೆಂಡ್ ವಿರುದ್ಧ ಅವರು ತಮ್ಮ ಮೇಲೆ ಯಾಕೆ ಒತ್ತಡ ಹೇರಿಕೊಂಡರು ಎಂದು ಅಚ್ಚರಿಯಾಗುತ್ತದೆ. ಶಫಾಲಿ ವರ್ಮ ಕೂಡ ಹಾಗೆಯೇ ಆಯಿತು. ಆಕೆ ಕೂಡ ಉತ್ತಮವಾಗಿ ಆಡಿದ್ದಾರೆ. ಹರ್ಮನ್‌ಪ್ರೀತ್ ಬ್ಯಾಟ್‌ನಲ್ಲಿ ಸಿಡಿಯಬೇಕಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿಯರು ಕೂಡ ಮಿಂಚ ಬೇಕಿದೆ" ಎಂದಿದ್ದಾರೆ ಅಂಜುಮ್ ಚೋಪ್ರ.

ಈ ಬಾರಿಯ ವಿಶ್ವಕಪ್‌ನಲ್ಲಿ ಅಗ್ರ ಕ್ರಮಾಂಕದಲ್ಲಿ ಸ್ಮೃತಿ ಮಂಧಾನ ಹಾಗೂ ಮಧ್ಯಮ ಕ್ರಮಾಂಕದಲ್ಲಿ ರಿಚಾ ಘೋಷ್ ಹೊರತುಪಡಿಸಿದರೆ ಉಳಿದ ಆಟಗಾರ್ತಿಯರಿಂದ ಸ್ಥಿರ ಪ್ರದರ್ಶನ ಬಂದಿಲ್ಲ. ಇದು ತಂಡಕ್ಕೆ ಕಳವಳವುಂಟು ಮಾಡಿದೆ.

ಇನ್ನು ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ್ತಿ ಬೆತ್ ಮೂನಿ ಪ್ರತಿಕ್ರಿಯೆ ನೀಡಿ ಪಂದ್ಯದ ಬಗ್ಗೆ ಉತ್ಸುಕತೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಭಾರತ ತಂಡದಲ್ಲಿರುವ ಯಾವುದೇ ಆಟಗಾರ್ತಿಯನ್ನು ಕುಡ ಆಸ್ಟ್ರೇಲಿಯಾ ಲಘುವಾಗಿ ಪರಿಗಣಿಸುವುದಿಲ್ಲ ಎಂದಿರುವ ಅವರು ಈ ಸೆಣೆಸಾಟ ಪೈಪೋಟಿಯ ಮುಖಾಮುಖಿಯಾಗಿರಲಿದೆ ಎಂದಿದ್ದಾರೆ.

ಭಾರತ ಸ್ಕ್ವಾಡ್ ಹೀಗಿದೆ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ

ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಹ್ಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲ್ಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್‌ಲ್ಯಾಂಡ್, ಜಾರ್ಜಿಯಾ ವೇರ್‌ಹ್ಯಾಮ್

Story first published: Thursday, February 23, 2023, 11:40 [IST]
Other articles published on Feb 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+