Women's T20 World Cup: ಅಭ್ಯಾಸ ಪಂದ್ಯದಲ್ಲೇ ಭಾರತಕ್ಕೆ ಆಘಾತ: ಆಸ್ಟ್ರೇಲಿಯಾಗೆ ಜಯ

ಮಹಿಳಾ ಟಿ20 ವಿಶ್ವಕಪ್ ಆರಂಭಕ್ಕೆ ಮುನ್ನವೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಸೋಮವಾರ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತದ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ 44 ರನ್‌ಗಳ ಸೋಲನುಭವಿಸಿದೆ.
ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡದ ಬ್ಯಾಟರ್ ಗಳು ಸಂಪೂರ್ಣವಾಗಿ ವಿಫಲವಾದರು. ಅಭ್ಯಾಸ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು.
15.4 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 79 ರನ್ ಗಳಿಸಿದ್ದ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿತ್ತು. ಜಾರ್ಜಿಯಾ ವೇರ್‌ಹ್ಯಾಮ್ ಮತ್ತು ಜೆಸ್ ಜೊನಾಸ್ಸೆನ್ ಅಂತಿಮ ಓವರ್ ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂದ ಗೌರವಾನ್ವಿತ ಮೊತ್ತ ಕಲೆಹಾಕಲು ಕಾರಣವಾದರು.
ಜಾರ್ಜಿಯಾ ವೇರ್‌ಹ್ಯಾಮ್ 17 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್ ಸಹಿತ 33 ರನ್ ಗಳಿಸಿದರೆ, ಜೆಸ್ ಜೊನಾಸ್ಸೆನ್ 14 ಎಸೆತಗಳಲ್ಲಿ 4 ಬೌಂಡರಿ ಸಹಿತ 22 ರನ್ ಗಳಿಸಿದರು. ಇವರಿಬ್ಬರ ಜೊತೆಯಾಟದಿಂದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 128 ರನ್ ಗಳಿಸಿತು. ಶಿಖಾ ಪಾಂಡೆ, ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ತಲಾ ಎರಡು ವಿಕೆಟ್ ಪಡೆದುಕೊಂಡರು.

ಬ್ಯಾಟಿಂಗ್‌ನಲ್ಲಿ ವಿಫಲವಾದ ಟೀಂ ಇಂಡಿಯಾ
130 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ಮುಗ್ಗರಿಸಿತು. ಜೆಮ್ಮಿಮಾ ರೋಡ್ರಿಗಸ್ ಮತ್ತು ಸ್ಮೃತಿ ಮಂದಾನ ಶೂನ್ಯಕ್ಕೆ ಔಟಾಗುವ ಮೂಲಕ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಮೂವರು ಭಾರತೀಯ ಬ್ಯಾಟರ್ ಗಳು ಮಾತ್ರ ಎರಡಂಕಿ ರನ್ ಗಳಿಸಿದರು.
ದೀಪ್ತಿ ಶರ್ಮಾ 19 ರನ್ ಗಳಿಸಿದ್ದು, ಭಾರತೀಯ ಬ್ಯಾಟರ್ ಗಳಿಸಿದ ಗರಿಷ್ಠ ರನ್ ಆಗಿದೆ. ಡಾರ್ಸಿ ಬ್ರೌನ್ 4 ಓವರ್ ಗಳಲ್ಲಿ 17 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆಯುವ ಮೂಲಕ ಭಾರತದ ಸೋಲಿಗೆ ಮುನ್ನುಡಿ ಬರೆದರು. ಆಶ್ ಗಾರ್ಡ್ನರ್ 2 ವಿಕೆಟ್ ಪಡೆದರು. ಕಿಮ್ ಗಾರ್ತ್, ಎಲಿಸಾ ಪೆರ್‍ರಿ, ಜೆಸ್ ಜೊನಾಸೆನ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.
ಫೆಬ್ರವರಿ 10 ರಿಂದ ಮಹಿಳಾ ಟಿ20 ವಿಶ್ವಕಪ್‌ಗೆ ಚಾಲನೆ ಸಿಗಲಿದೆ. ಮೊದಲನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಮುಖಾಮುಖಿಯಾಗಲಿದೆ. ಫೆಬ್ರವರಿ 12ರಂದು ಭಾರತ ಪಾಕಿಸ್ತಾನದ ವಿರುದ್ಧ ಆಡುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications