Women's T20 World Cup: ಬಹಳ ಪೈಪೋಟಿಯ ಪಂದ್ಯವಾಗಲಿದೆ: ಸೆಮಿಫೈನಲ್ ಪಂದ್ಯದ ಬಗ್ಗೆ ಆಸಿಸ್ ಆಟಗಾರ್ತಿಯ ಹೇಳಿಕೆ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಗುರುವಾರ ಮುಖಾಮುಖಿಯಾಗಲಿದ್ದು ಕದನ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ್ತಿ ಬೆತ್ ಮೂನಿ ಪ್ರತಿಕ್ರಿಯೆ ನೀಡಿದ್ದು ಭಾರತ ತಂಡದಲ್ಲಿರುವ ಯಾವುದೇ ಆಟಗಾರ್ತಿಯನ್ನು ಕುಡ ಆಸ್ಟ್ರೇಲಿಯಾ ಲಘುವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ.
ಆಸ್ಟ್ರೇಲಿಯಾ ಮಹಿಳಾ ಟಿ20 ವಿಶ್ವಕಪ್‌ನ ಹಾಲಿ ಚಾಂಪಿಯನ್ ಆಗಿದ್ದು ಗುರುವಾರ ಸೆಮಿಫೈನಲ್ ಕದನದಲ್ಲಿ ಎದುರಿಸಲು ಸಜ್ಜಾಗಿದೆ. ಕಳೆದ ಎರಡು ವರ್ಷಗಳಲ್ಲಿ ಆಸ್ಟ್ರೇಲಿಯಾ ಭಾರತದ ವಿರುದ್ಧ ಮಾತ್ರವೇ ಸೋಲು ಕಂಡಿದ್ದು ಬಲಿಷ್ಠ ತಂಡ ಎನಿಸಿಕೊಂಡಿದೆ. ಆದರೆ ಸೆಮಿಫೈನಲ್ ಕದನದಲ್ಲಿ ಆಸ್ಟ್ರೇಲಿಯಾ ತಂಡವೇ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.
"ಈ ಮುಖಾಮುಖಿ ಬಹಳ ಪೈಪೋಟಿಯ ಪಂದ್ಯವಾಗಲಿದೆ ಎಂದು ನಾನು ಭಾವಿಸುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಭಾರತ ಬಹಳ ಪೈಪೋಟಿಯನ್ನು ನೀಡಿದೆ. ಅವರ ತಂಡದಲ್ಲಿ ಹಲವಾರು ಮ್ಯಾಚ್ ವಿನ್ನಿಂಗ್ ಆಟಗಾರ್ತಿಯರು ಇದ್ದಾರೆ" ಎಂದಿದ್ದಾರೆ ಆಸಿಸ್ ಆಟಗಾರ್ತಿ.
ಭಾರತ ಸ್ಕ್ವಾಡ್ ಹೀಗಿದೆ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ
ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಹ್ಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲ್ಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್‌ಲ್ಯಾಂಡ್, ಜಾರ್ಜಿಯಾ ವೇರ್‌ಹ್ಯಾಮ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications