Ellyse Perry: ರೋಹಿತ್ ಶರ್ಮಾರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ ಆರ್‌ಸಿಬಿಯ ಎಲ್ಲಿಸ್ ಪೆರ್ರಿ

ಶನಿವಾರ, ಫೆಬ್ರವರಿ 18ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯದ ವೇಳೆ, ಆಸ್ಟ್ರೇಲಿಯಾ ಮಹಿಳಾ ತಂಡದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ ಗಣ್ಯರ ಪಟ್ಟಿಯಲ್ಲಿ ಭಾರತ ಪುರುಷರ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿ ಇತಿಹಾಸ ನಿರ್ಮಿಸಿದ್ದಾರೆ.
ಆರ್‌ಸಿಬಿ ಮಹಿಳಾ ತಂಡದ ಆಲ್‌ರೌಂಡರ್ ಕೂಡ ಆಗಿರುವ ಎಲ್ಲಿಸ್ ಪೆರ್ರಿ ಈಗ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿರುವ ಕ್ರಿಕೆಟರ್ ಆಗಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಈವರೆಗೆ 40 ಪಂದ್ಯಗಳನ್ನು ಆಡಿದ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.
ಫೆಬ್ರವರಿ 16ರಂದು ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಎಲ್ಲಿಸ್ ಪೆರ್ರಿ ಅವರು ರೋಹಿತ್ ಶರ್ಮಾ ಅವರ 39 ಪಂದ್ಯಗಳ ದಾಖಲೆಯನ್ನು ಸರಿಗಟ್ಟಿದ್ದರು ಮತ್ತು ಇದೀಗ ಏಕಾಂಗಿಯಾಗಿ ಅಗ್ರಸ್ಥಾನದಲ್ಲಿದ್ದಾರೆ.

ಐದು ಬಾರಿ ಟಿ20 ವಿಶ್ವಕಪ್ ಟ್ರೋಫಿ ವಿಜೇತರಾಗಿರುವ ಎಲ್ಲಿಸ್ ಪೆರ್ರಿ
ಭಾರತದ ನಾಯಕ ರೋಹಿತ್ ಶರ್ಮಾರಂತೆ ಎಲ್ಲಿಸ್ ಪೆರ್ರಿ ಕೂಡ ಟಿ20 ವಿಶ್ವಕಪ್‌ನ ಪ್ರತಿ ಪಂದ್ಯಾವಳಿಯನ್ನು ಆಡಿದ್ದಾರೆ. ಮಹಿಳಾ ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯನ್ನು 2009ರಲ್ಲಿ ನಡೆಸಲಾಯಿತು. ಇನ್ನು ಪುರುಷರ ಮೊದಲ ಟಿ20 ವಿಶ್ವಕಪ್ 2007ರಲ್ಲಿ ಆಡಲಾಗಿತ್ತು.
ಎಲ್ಲಿಸ್ ಪೆರ್ರಿ ಆಸ್ಟ್ರೇಲಿಯಾ ತಂಡದ ಪರ ಪ್ರತಿ ಪಂದ್ಯಾವಳಿಯಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಐದು ಬಾರಿ ಟಿ20 ವಿಶ್ವಕಪ್ ಟ್ರೋಫಿ ವಿಜೇತರಾಗಿದ್ದಾರೆ ಎಂಬುದು ಮತ್ತೊಂದು ವಿಶೇಷ.

ಟಿ20 ವಿಶ್ವಕಪ್‌ನಲ್ಲಿ 40 ಪಂದ್ಯ ಆಡಿದ್ದು, 362 ರನ್ ಮತ್ತು 40 ವಿಕೆಟ್
ಬೆನ್ನುನೋವಿನ ಕಾರಣ 2020ರ ಟಿ20 ವಿಶ್ವಕಪ್‌ನ ಕೆಲವು ಪಂದ್ಯಗಳನ್ನು ತಪ್ಪಿಸಿಕೊಳ್ಳದಿದ್ದರೆ ಎಲ್ಲಿಸ್ ಪೆರ್ರಿ ಯಾವಾಗಲೋ ರೋಹಿತ್ ಶರ್ಮಾ ದಾಖಲೆಯನ್ನು ಹಿಂದಿಕ್ಕಬಹುದಿತ್ತು. ಈ ಬಾರಿಯ ಮಹಿಳಾ ಟಿ20 ವಿಶ್ವಕಪ್‌ನ ಆಸ್ಟ್ರೇಲಿಯಾದ ಆಡುವ 11ರ ಬಳಗದಲ್ಲಿ ತನ್ನ ಸ್ಥಾನವನ್ನು ಕಳೆದುಕೊಂಡಿದ್ದರು. ನಂತರ ತಂಡಕ್ಕೆ ಪುನರಾಗಮನವನ್ನು ಮಾಡಿದ್ದು, ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ಎಲ್ಲಿಸ್ ಪೆರ್ರಿ ಟಿ20 ವಿಶ್ವಕಪ್‌ನಲ್ಲಿ 40 ಪಂದ್ಯಗಳನ್ನು ಆಡಿದ್ದು, 362 ರನ್ ಮತ್ತು 40 ವಿಕೆಟ್‌ಗಳೊಂದಿಗೆ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ಇನ್ನು ಅವರ ವೃತ್ತಿಜೀವನದಲ್ಲಿ 137 ಟಿ20 ಪಂದ್ಯಗಳನ್ನು ಆಡಿದ್ದು, 1526 ರನ್‌ಗಳನ್ನು ಬಾರಿಸಿದ್ದಾರೆ. ಅಲ್ಲದೇ ಈ ಸ್ವರೂಪದಲ್ಲಿ 122 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಎಲ್ಲಿಸ್ ಪೆರ್ರಿ ಇದೀಗ ಆರನೇ ಟಿ20 ವಿಶ್ವಕಪ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ.

ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತ
ಆಸ್ಟ್ರೇಲಿಯಾ ಮಹಿಳಾ ತಂಡವು ಲೀಗ್ ಹಂತದಲ್ಲಿ ನಾಲ್ಕು ಪಂದ್ಯಗಳಿಂದ ನಾಲ್ಕು ಗೆಲುವುಗಳೊಂದಿಗೆ +2.149ರ ನೆಟ್ ರನ್‌ರೇಟ್‌ನಲ್ಲಿ 8 ಅಂಕಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಈಗಾಗಲೇ ಆಸ್ಟ್ರೇಲಿಯಾ ತಂಡ ಟೂರ್ನಿಯ ಸೆಮಿಫೈನಲ್‌ಗೆ ಅರ್ಹತೆ ಪಡೆದ ಏಕೈಕ ತಂಡವಾಗಿದ್ದು, ಫೆಬ್ರವರಿ 23ರಂದು ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಡಲಿದೆ.
ಇನ್ನು ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿ ಬಿ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಭಾರತೀಯ ಮಹಿಳಾ ತಂಡ ಐರ್ಲೆಂಡ್ ಮಹಿಳೆಯರನ್ನು ಸೋಲಿಸಿ ನಾಕೌಟ್ ಸುತ್ತಿಗೆ ಪ್ರವೇಶಿಸಲು ಎದುರು ನೋಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications