
ಮಹಿಳಾ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ಗೆಲುವಿಗೆ 157 ರನ್‌ಗಳ ಗುರಿ ನೀಡಿದೆ. 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್ ಕಲೆಹಾಕಿದೆ.
ನ್ಯೂಲ್ಯಾಂಡ್ಸ್‌ನ ಕೇಪ್‌ಟೌನ್ ಅಂಗಳದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ದಕ್ಷಿಣ ಆಫ್ರಿಕಾ ಆರಂಭದಲ್ಲಿ ಶಿಸ್ತಿನ ಬೌಲಿಂಗ್ ಮಾಡುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಕಠಿಣ ಸವಾಲು ಹಾಕಿತು.
ಅಲಿಸ್ಸಾ ಹೀಲಿ 20 ಎಸೆತಗಳಲ್ಲಿ 18 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಮತ್ತೊಬ್ಬ ಆರಂಭಿಕ ಆಟಗಾರ್ತಿ ಬೆತ್ ಮೂನಿ ಮಾತ್ರ ಕೊನೆಯವರೆಗೂ ಆಡುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಆಸರೆಯಾದರು. 53 ಎಸೆತಗಳಲ್ಲಿ 9 ಬೌಂಡರಿ 1 ಸಿಕ್ಸರ್ ಸಹಿತ 74 ರನ್ ಗಳಿಸಿ ಆಸ್ಟ್ರೇಲಿಯಾ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು.
ಆಶ್ಲೆ ಗಾರ್ಡ್ನರ್ 21 ಎಸೆತಗಳಲ್ಲಿ 2 ಬೌಂಡರಿ 2 ಸಿಕ್ಸರ್ ಸಹಿತ 28 ರನ್ ಗಳಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡಕ್ಕೆ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದರು. ಕ್ಲೋಯ್ ಟ್ರಯಾನ್ ಅವರನ್ನು ಔಟ್ ಮಾಡುವ ಮೂಲಕ ಮಿಂಚಿದರು.

ದಕ್ಷಿಣ ಆಫ್ರಿಕಾ ಉತ್ತಮ ಬೌಲಿಂಗ್
ಸ್ಫೋಟಕ ಬ್ಯಾಟರ್ ಗಳ ದಂಡನ್ನೇ ಹೊಂದಿರುವ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು. ಶಬ್ನಿಮ್ ಇಸ್ಮಾಯಿಲ್ 4 ಓವರ್ ಗಳಲ್ಲಿ 26 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು. ಮಾರಿಜನ್ನೆ ಕಪ್ ಕೂಡ 2 ವಿಕೆಟ್ ಪಡೆದರು. ನಾನ್‌ಕುಲುಲೆಕೊ ಮ್ಲಾಬಾ ಮತ್ತು ಕ್ಲೋಯ್ ಟ್ರಯಾನ್ ತಲಾ ಒಂದು ವಿಕೆಟ್ ಪಡೆದರು. ಪಿಚ್ ಬ್ಯಾಟಿಂಗ್‌ಗೆ ಸಹಕಾರಿಯಾಗಿದ್ದು ಟಿ20 ಮಹಿಳಾ ವಿಶ್ವಕಪ್ ಗೆಲ್ಲುವ ಅವಕಾಶ ದಕ್ಷಿಣ ಆಫ್ರಿಕಾ ತಂಡಕ್ಕೆ ಸಿಕ್ಕಿದೆ.

ಉಭಯ ತಂಡಗಳ ಆಡುವ ಬಳಗ
ದಕ್ಷಿಣ ಆಫ್ರಿಕಾ : ಲಾರಾ ವೊಲ್ವಾರ್ಡ್ಟ್, ತಜ್ಮಿನ್ ಬ್ರಿಟ್ಸ್, ಮಾರಿಜಾನ್ನೆ ಕಪ್, ಕ್ಲೋಯ್ ಟ್ರಯಾನ್, ನಡಿನ್ ಡಿ ಕ್ಲರ್ಕ್, ಸುನೆ ಲೂಸ್ (ನಾಯಕಿ), ಅನ್ನೆಕೆ ಬಾಷ್, ಸಿನಾಲೊ ಜಫ್ತಾ (ವಿಕೆಟ್ ಕೀಪರ್), ಶಬ್ನಿಮ್ ಇಸ್ಮಾಯಿಲ್, ಅಯಾಬೊಂಗಾ ಖಾಕಾ, ನಾನ್‌ಕುಲುಲೆಕೊ ಮ್ಲಾಬಾ.
ಆಸ್ಟ್ರೇಲಿಯಾ : ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಬೆತ್ ಮೂನಿ, ಮೆಗ್ ಲ್ಯಾನಿಂಗ್ (ನಾಯಕಿ), ಆಶ್ಲೆ ಗಾರ್ಡ್ನರ್, ಗ್ರೇಸ್ ಹ್ಯಾರಿಸ್, ಎಲ್ಲಿಸ್ ಪೆರ್ರಿ, ತಹ್ಲಿಯಾ ಮೆಕ್‌ಗ್ರಾತ್, ಜಾರ್ಜಿಯಾ ವೇರ್‌ಹ್ಯಾಮ್, ಜೆಸ್ ಜೊನಾಸೆನ್, ಮೇಗನ್ ಶುಟ್, ಡಾರ್ಸಿ ಬ್ರೌನ್.