Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Women's T20 World Cup: ಗೆಲುವಿನ ಲಯ ಮುಂದುವರಿಸುವ ವಿಶ್ವಾಸ ವ್ಯಕ್ತಪಡಿಸಿದ ಹರ್ಮನ್‌ಪ್ರೀತ್ ಕೌರ್

Womens T20 World Cup: Harmanpreet Kaur reaction said wants team to continue rhythm in next game

ಮಹಿಳಾ ಟಿ20 ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿಯೂ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಗೆಲುವಿನ ಬಳಿಕ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮಾತನಾಡಿದ್ದು ತಂಡದ ಗೆಲುವಿನ ಲಯವನ್ನು ಮುಂದಿನ ಪಂದ್ಯದಲ್ಲಿಯೂ ಮುಂದುವರಿಸಿಕೊಂಡು ಹೋಗುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಮಾತನಾಡಿದ ಹರ್ಮನ್‌ಪ್ರೀತ್ ಕೌರ್ ಬೌಲಿಂಗ್‌ನಲ್ಲಿ ತಮ್ಮ ಯೋಜನೆಗಳನ್ನು ಉತ್ತಮವಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಿರುವುದು ಉತ್ತಮ ಫಲಿತಾಂಶ ಪಡೆಯಲು ಕಾರಣವಾಯಿತು ಎಂದಿದ್ದಾರೆ.

ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ದೀಪ್ತಿ ಶರ್ಮಾ ತಮ್ಮ ಪ್ರದರ್ಶನದಿಂದ ಸಂತಿಷ್ಟವಾಗಿರಲಿಲ್ಲ. ಹೀಗಾಗಿ ಸಾಕಷ್ಟು ಚರ್ಚೆ ನಡೆಸಲಾಗಿತ್ತು ಎಂದಿರುವ ಭಾರತ ತಂಡದ ನಾಯಕಿ ಬೌಲಿಂಗ್ ಕೋಚ್ ದೀಪ್ತಿಗೆ ಸಹಾಯ ಮಾಡಿದರು. ಇದರಿಂದಾಗಿ ಅವರು ವಿಂಡೀಸ್ ವಿರುದ್ಧ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಯಿತು ಎಂದಿದ್ದಾರೆ.

ಇನ್ನು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ ನೀಡಿದ್ದು ದೀಪ್ತಿ ಶರ್ಮಾ. 4 ಓವರ್‌ಗಳಲ್ಲಿ 15 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ರೇಣುಕಾ ಸಿಂಗ್ ಠಾಕೂರ್ ಮತ್ತು ಪೂಜಾ ವಸ್ತ್ರಾಕರ್ ತಲಾ ಒಂದೊಂದು ವಿಕೆಟ್ ಪಡೆದರು. ವೆಸ್ಟ್ ಇಂಡೀಸ್ ತಂಡದ ಪರ ಬ್ಯಾಟಿಂಗ್‌ನಲ್ಲಿ ಸ್ಟೆಫಾನಿ ಟೇಲರ್ (42 ರನ್), ಶೆಮೈನ್ ಕ್ಯಾಂಪ್‌ಬೆಲ್ಲೆ (30 ರನ್), ಚೆಡಿಯನ್ ನೇಷನ್ (21 ರನ್) ಮತ್ತು ಶಬಿಕಾ ಗಜ್ನಾಬಿ (15 ರನ್) ಗಳಿಸಿದ್ದು ಬಿಟ್ಟರೆ ಉಳಿದರಾರು ಎರಡಂಕಿ ಮೊತ್ತ ಗಳಿಸಲಿಲ್ಲ.

ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ 10 ರನ್‌ಗಳನ್ನು ಮಾತ್ರವೇ ಗಳಿಸಲು ಯಶಸ್ವಿಯಾದರು. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಂಧಾನ ಗಾಯದ ಕಾರಣ ಆಡುವ ಬಳಗದಿಂದ ಹೊರಗುಳಿದಿದ್ದರು. ಶಫಾಲಿ ವರ್ಮಾ 23 ಎಸೆತಗಳಲ್ಲಿ 28 ರನ್‌ಗಳಿಸಿದರೆ ಜಮಿಮಾ ರೋಡ್ರಿಗಸ್ ಕೇವಲ 1 ರನ್ ಮಾತ್ರವೇ ಗಳಿಸಲು ಶಕ್ತರಾದರು. ಶಫಾಲಿ ವರ್ಮ ವಿಕೆಟ್ ಕಳೆದುಕೊಂಡ ಬಳಿಕ ನಾಯಕಿ ಹರ್ಮನ್‌ಪ್ರೀತ್ ಕೌರ್ ಹಾಗೂ ರಿಚಾ ಘೋಷ್ ಇನ್ನಿಂಗ್ಸ್ ಬೆಳೆಸುತ್ತಾ ಸಾಗಿದರು. ಗೆಲುವಿನ ಹೊಸ್ತಿಲಲ್ಲಿ ಕೌರ್ 33 ರನ್‌ಗಳಿಸಿ ವಿಕೆಟ್ ಕಳೆದುಕೊಂಡರಾದರೂ ರಿಚಾ ಘೋಷ್ ಮತ್ತೊಮ್ಮೆ ಕೊನೆಯ ತನಕ ನಿಂತು ಪಂದ್ಯವನ್ನು ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾದರು. 32 ಎಸೆತಗಳಲ್ಲಿ 44 ರನ್‌ಗಳಿಸಿದ ರಿಚಾ ಈ ಪಂದ್ಯದಲ್ಲಿ ಮಿಂಚಿದ್ದಾರೆ

ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ಹರ್ಮನ್‌ಪ್ರೀತ್ ಕೌರ್(ನಾಯಕಿ), ರಿಚಾ ಘೋಷ್(ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ದೇವಿಕಾ ವೈದ್ಯ, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.
ವೆಸ್ಟ್ ಇಂಡೀಸ್: ಹೇಲಿ ಮ್ಯಾಥ್ಯೂಸ್ (ನಾಯಕಿ), ಸ್ಟೆಫಾನಿ ಟೇಲರ್, ಶೆಮೈನ್ ಕ್ಯಾಂಪ್‌ಬೆಲ್ಲೆ, ಶಬಿಕಾ ಗಜ್ನಾಬಿ, ಚಿನೆಲ್ಲೆ ಹೆನ್ರಿ, ಚೆಡಿಯನ್ ನೇಷನ್, ಅಫಿ ಫ್ಲೆಚರ್, ಶಾಮಿಲಿಯಾ ಕಾನ್ನೆಲ್, ರಶಾದಾ ವಿಲಿಯಮ್ಸ್ (ವಿಕೆಟ್ ಕೀಪರ್), ಕರಿಷ್ಮಾ ರಾಮ್ಹರಾಕ್, ‍ಷೇಕೆರಾ ಸೆಲ್ಮನ್.

Story first published: Thursday, February 16, 2023, 4:15 [IST]
Other articles published on Feb 16, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+