For Quick Alerts
ALLOW NOTIFICATIONS  
For Daily Alerts
 

Women's T20 World Cup: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಆಸ್ಟ್ರೇಲಿಯಾ ಎದುರಾಳಿ

Women’s T20 World Cup: India will face Australias challenge in 1st semi-final oWomen’s T20 World Cup: India will face Australias challenge in 1st semi-final of womens t20 world cupf womens t20 world cup

ಮಹಿಳಾ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ತಂಡ ಎದುರಾಳಿಯಾಗಲಿದೆ. ಹೀಗಾಗಿ ಭಾರತಕ್ಕೆ ಈ ಮಹತ್ವದ ಘಟ್ಟದಲ್ಲಿ ಬಲಿಷ್ಠ ಸವಾಲು ಎದುರಾಗುವುದು ನಿಶ್ಚಿತ. ಫೆಬ್ರವರಿ 23 ಗುರುವಾರದಂದು ಕೇಪ್‌ಟೌಟ್‌ನಲ್ಲಿ ಈ ಸೆಮಿಫೈನಲ್ ಸೆಣೆಸಾಟ ನಡೆಯಲಿದೆ.

ನ್ಯೂಲೆಂಡ್ಸ್‌ನಲ್ಲಿ ಗ್ರೂಫ್ ಬಿ ವಿಭಾಗದ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಫಲಿತಾಂಶದ ಬಳಿಕ ಸೆಮಿಫೈನಲ್ ಚಿತ್ರಣ ಸ್ಪಷ್ಟವಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 114 ರನ್‌ಗಳ ಅಂತರದಿಂದ ಇಂಗ್ಲೆಂಡ್ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಬೃಹತ್ ಅಂತರದಿಂದ ಪಾಕಿಸ್ತಾನಕ್ಕೆ ಶರಣಾದರೆ ಭಾರತ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೇರುವ ಅವಕಾಶವಿತ್ತು. ಆದರೆ ಇಂಗ್ಲೆಂಡ್ ತಂಡ ಭಾರೀ ಅಂತರದಿಂದ ಗೆಲುವು ಸಾಧಿಸಿರುವ ಕಾರಣ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ಗೆ ಪ್ರವೇಶ ಪಡೆಯುತ್ತಿದೆ.

ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ಐದು ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು. ಡೇನಿಯಲ್ ವ್ಯಾಟ್ 59 ರನ್ ಗಳಿಸಿ ಭರ್ಜರಿ ಆರಂಬ ಒದಗಿಸಿದ ಬಳಿಕ ನ್ಯಾಟ್ ಸೀವರ್-ಬ್ರಂಟ್ ಅಬ್ಬರಿಸಿದರು. ಸಿವರ್ 40 ಎಸೆತಗಳಲ್ಲಿ 12 ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ ಅಜೇಯ 81 ರನ್ ಗಳಿಸುವ ಮೂಲಕ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ 200 ರನ್ ಗಳ ಗಡಿಯನ್ನು ದಾಟಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಇಂಗ್ಲೆಂಡ್ ತಂಡ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಇನ್ನು ಸೆಮಿಫೈನಲ್‌ನಲ್ಲಿ ಭಾರತ ತಂಡಕ್ಕೆ ಆಸ್ಟ್ರೇಲಿಯಾ ತಂಡ ಎದುರಾಗಿರುವ ಕಾರಣ ಬಹಳ ದೊಡ್ಡ ಸವಾಲು ಇದೆ. ಆಸ್ಟ್ರೇಲಿಯಾ ತಮಡ ಭಾರತದ ವಿರುದ್ಧ ಇತ್ತೀಚೆಗೆ ಸಾಕಷ್ಟು ಅದ್ಭುತ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದು ಮೇಲುಗೈ ಸಾಧಿಸಿದೆ. ಹೀಗಾಗಿ ಮಹತ್ವದ ಸೆಮಿಫೈನಲ್‌ನಲ್ಲಿ ಈ ಸವಾಲನ್ನು ಭಾರತ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಸ್ಕ್ವಾಡ್ ಹೀಗಿದೆ: ಹರ್ಮನ್‌ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ, ರಿಚಾ ಘೋಷ್, ಜೆಮಿಮಾ ರಾಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ದೇವಿಕಾ ವೈದ್ಯ, ರಾಧಾ ಯಾದವ್, ರೇಣುಕಾ ಠಾಕೂರ್ ಸಿಂಗ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ

ಆಸ್ಟ್ರೇಲಿಯಾ ಸ್ಕ್ವಾಡ್ ಹೀಗಿದೆ: ಮೆಗ್ ಲ್ಯಾನಿಂಗ್ (ನಾಯಕಿ), ಅಲಿಸ್ಸಾ ಹೀಲಿ (ವಿಕೆಟ್ ಕೀಪರ್), ಡಾರ್ಸಿ ಬ್ರೌನ್, ಆಶ್ಲೀ ಗಾರ್ಡ್ನರ್, ಕಿಮ್ ಗಾರ್ತ್, ಹೀದರ್ ಗ್ರಹಾಂ, ಗ್ರೇಸ್ ಹ್ಯಾರಿಸ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ತಹ್ಲಿಯಾ ಮೆಕ್‌ಗ್ರಾತ್, ಬೆತ್ ಮೂನಿ, ಎಲ್ಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್‌ಲ್ಯಾಂಡ್, ಜಾರ್ಜಿಯಾ ವೇರ್‌ಹ್ಯಾಮ್

Story first published: Wednesday, February 22, 2023, 8:36 [IST]
Other articles published on Feb 22, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+