For Quick Alerts
ALLOW NOTIFICATIONS  
For Daily Alerts
 

Women's T20 World Cup: ಮಳೆ ಬಾಧಿತ ಪಂದ್ಯದಲ್ಲಿ ಭಾರತಕ್ಕೆ ಗೆಲುವು; ಸೆಮಿಫೈನಲ್ ಪ್ರವೇಶಿಸಿದ ಕೌರ್ ಪಡೆ

Womens T20 World Cup: India Womens Beat Ireland Womens By 5 Wickets (DLS Method)

ಸೋಮವಾರ, ಫೆಬ್ರವರಿ 20ರಂದು ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಐರ್ಲೆಂಡ್ ಮಹಿಳಾ ತಂಡದ ವಿರುದ್ಧ ಡಿಎಲ್ಎಸ್ ನಿಯಮದಡಿ ಗೆಲುವು ಸಾಧಿಸಿದೆ.

ಮಳೆ ಬಾಧಿತ ಪಂದ್ಯದಲ್ಲಿ ಆಟ ಸ್ಥಗಿತಗೊಂಡಾಗ ಡಿಎಲ್ಎಸ್ ವಿಧಾನದಲ್ಲಿ 8.2 ಓವರ್‌ಗಳಲ್ಲಿ 59 ರನ್‌ ಸಮಾನ ರನ್ ನೀಡಲಾಗಿತ್ತು. ಆದರೆ ಐರ್ಲೆಂಡ್ ಎರಡು ವಿಕೆಟ್‌ಗಳ ನಷ್ಟಕ್ಕೆ 54 ರನ್ ಗಳಿಸಿತ್ತು. ಹೀಗಾಗಿ 5 ರನ್‌ಗಳಿಂದ ಭಾರತ ಮಹಿಳಾ ತಂಡ ಗೆಲುವು ದಾಖಲಿಸಿತು.

Harmanpreet Kaur: ಟಿ20 ಕ್ರಿಕೆಟ್‌ನಲ್ಲಿ ಬೃಹತ್ ಮೈಲಿಗಲ್ಲು ಸ್ಥಾಪಿಸಿದ ಹರ್ಮನ್‌ಪ್ರೀತ್ ಕೌರ್

ಅಷ್ಟೇ ಅಲ್ಲದೆ, 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಬಿ ಗುಂಪಿನಿಂದ ಎರಡನೇ ಸ್ಥಾನಿಯಾಗಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಸೆಮಿಫೈನಲ್ ಪ್ರವೇಶಿಸಿತು. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಸೆಮಿಫೈನಲ್‌ಗೆ ಪ್ರವೇಶ ಪಡೆದಿತ್ತು.

Womens T20 World Cup: India Womens Beat Ireland Womens By 5 Wickets (DLS Method)

ಭಾರತ ನೀಡಿದ್ದ 156 ರನ್‌ಗಳ ಗುರಿ ಬೆನ್ನಟ್ಟಿದ ಐರ್ಲೆಂಡ್ ತಂಡ, ಮೊದಲ ಓವರ್‌ನಲ್ಲಿಯೇ ಆಮಿ ಹಂಟರ್ ರನೌಟ್ ಆದರು. ನಂತರ ಓರ್ಲಾ ಪ್ರೆಂಡರ್‌ಗಾಸ್ಟ್ ಅವರು ರೇಣುಕಾ ಸಿಂಗ್ ಠಾಕೂರ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆಗಿ ಹೊರನಡೆದರು.

ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ, ಸ್ಮೃತಿ ಮಂಧಾನ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು.

ಭಾರತದ ಇನ್ನಿಂಗ್ಸ್ ಆರಂಭಿಸಿದ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಮೊದಲ ವಿಕೆಟ್‌ಗೆ 9.3 ಓವರ್‌ಗಳಲ್ಲಿ 62 ರನ್ ಜೊತೆಯಾಟವಾಡಿ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು.

Womens T20 World Cup: India Womens Beat Ireland Womens By 5 Wickets (DLS Method)

24 ರನ್ ಗಳಿಸಿದ್ದ ಶಫಾಲಿ ವರ್ಮಾ ಕ್ರೀಸ್‌ಗೆ ಅಂಟಿಕೊಳ್ಳುವ ಮುನ್ನವೇ ವಿಕೆಟ್ ಒಪ್ಪಿಸಿದರು. ಅನಂತರ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ 150 ಟಿ20 ಪಂದ್ಯದಲ್ಲಿ 20 ಎಸೆತಗಳಲ್ಲಿ ಎದುರಿಸಿ 13 ರನ್ ಗಳಿಸಿ ಔಟಾದರು.

ಜೆಮಿಮಾ ರೋಡ್ರಿಗಸ್ 12 ಎಸೆತಗಳಲ್ಲಿ 19 ರನ ಬಾರಿಸಿ ಸ್ಕೋರ್ ಹೆಚ್ಚಿಸಲು ಶ್ರಮಿಸಿದರು. ಇನ್ನು ಭಾರತದ ಉಪನಾಯಕಿ ಸ್ಮೃತಿ ಮಂಧಾನ ಮಾತ್ರ ಏಕಾಂಗಿ ಹೋರಾಟ ನಡೆಸಿದರು. 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 87 ರನ್ ಬಾರಿಸಿದ್ದ ಸ್ಮೃತಿ ಮಂಧಾನ ಪಂದ್ಯಶ್ರೇಷ್ಠ ಆಟಗಾರ್ತಿ ಪ್ರಶಸ್ತಿ ಪಡೆದರು.

ಐರ್ಲೆಂಡ್ ಪರ ಬೌಲಿಂಗ್‌ನಲ್ಲಿ ನಾಯಕಿ ಲಾರಾ ಡೆಲಾನಿ 33 ರನ್‌ಗಳಿಗೆ 3 ವಿಕೆಟ್ ಪಡೆದರೆ, ಪ್ರೆಂಡರ್‌ಗಾಸ್ಟ್ ಎರಡು ವಿಕೆಟ್ ಮತ್ತು ಅರ್ಲೀನ್ ಕೆಲ್ಲಿ ಒಂದು ವಿಕೆಟ್ ಪಡೆದರು.

Story first published: Monday, February 20, 2023, 22:19 [IST]
Other articles published on Feb 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+