Women's T20 World Cup: ಸ್ಮೃತಿ ಮಂಧಾನ ಭರ್ಜರಿ ಅರ್ಧಶತಕ; ಐರ್ಲೆಂಡ್‌ಗೆ ಸವಾಲಿನ ಗುರಿ ನೀಡಿದ ಭಾರತ

ಸೋಮವಾರ, ಫೆಬ್ರವರಿ 20ರಂದು ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ 2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನ ಲೀಗ್ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಮತ್ತು ಐರ್ಲೆಂಡ್ ಮಹಿಳಾ ತಂಡಗಳು ಸೆಣಸಾಡುತ್ತಿವೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡವು ಸ್ಮೃತಿ ಮಂಧಾನ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 155 ರನ್ ಕಲೆ ಹಾಕಿದ್ದು, ಎದುರಾಳಿ ಐರ್ಲೆಂಡ್ ತಂಡಕ್ಕೆ 156 ರನ್‌ಗಳ ಗುರಿ ನೀಡಿದೆ.
ಇದಕ್ಕೂ ಮುನ್ನ ಭಾರತದ ಇನ್ನಿಂಗ್ಸ್ ಆರಂಭಿಸಿದ ಉಪನಾಯಕಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಭಾರತ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 9.3 ಓವರ್‌ಗಳಲ್ಲಿ 62 ರನ್ ಜೊತೆಯಾಟವಾಡಿದರು.
24 ರನ್ ಗಳಿಸಿದ್ದ ಶಫಾಲಿ ವರ್ಮಾ ಕ್ರೀಸ್‌ಗೆ ಅಂಟಿಕೊಳ್ಳುವ ಮುನ್ನವೇ ವಿಕೆಟ್ ಒಪ್ಪಿಸಿದರು. ಅನಂತರ ಬಂದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಮ್ಮ 150 ಟಿ20 ಪಂದ್ಯದಲ್ಲಿ 20 ಎಸೆತಗಳಲ್ಲಿ ಎದುರಿಸಿ 13 ರನ್ ಗಳಿಸಿ ಔಟಾದರು.
ಜೆಮಿಮಾ ರೋಡ್ರಿಗಸ್ 12 ಎಸೆತಗಳಲ್ಲಿ 19 ರನ ಬಾರಿಸಿ ಸ್ಕೋರ್ ಹೆಚ್ಚಿಸಲು ಶ್ರಮಿಸಿದರು. ಇನ್ನು ಭಾರತದ ಉಪನಾಯಕಿ ಸ್ಮೃತಿ ಮಂಧಾನ ಮಾತ್ರ ಏಕಾಂಗಿ ಹೋರಾಟ ನಡೆಸಿದರು. 56 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 87 ರನ್ ಬಾರಿಸಿದರು.

ಐರ್ಲೆಂಡ್ ಪರ ಬೌಲಿಂಗ್‌ನಲ್ಲಿ ನಾಯಕಿ ಲಾರಾ ಡೆಲಾನಿ 33 ರನ್‌ಗಳಿಗೆ 3 ವಿಕೆಟ್ ಪಡೆದರೆ, ಪ್ರೆಂಡರ್‌ಗಾಸ್ಟ್ ಎರಡು ವಿಕೆಟ್ ಮತ್ತು ಅರ್ಲೀನ್ ಕೆಲ್ಲಿ ಒಂದು ವಿಕೆಟ್ ಪಡೆದರು.
ಭಾರತ vs ಐರ್ಲೆಂಡ್ ಮಹಿಳಾ ತಂಡಗಳ ಆಡುವ 11ರ ಬಳಗ
ಭಾರತ ತಂಡ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ದೇವಿಕಾ ವೈದ್ಯ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.
ಐರ್ಲೆಂಡ್ ತಂಡ: ಆಮಿ ಹಂಟರ್, ಗೇಬಿ ಲೆವಿಸ್, ಓರ್ಲಾ ಪ್ರೆಂಡರ್‌ಗಾಸ್ಟ್, ಐಮಿಯರ್ ರಿಚರ್ಡ್‌ಸನ್, ಲೂಯಿಸ್ ಲಿಟಲ್, ಲಾರಾ ಡೆಲಾನಿ(ನಾಯಕಿ), ಅರ್ಲೀನ್ ಕೆಲ್ಲಿ, ಮೇರಿ ವಾಲ್ಡ್ರಾನ್(ವಿಕೆಟ್ ಕೀಪರ್), ಲೇಹ್ ಪಾಲ್, ಕಾರಾ ಮುರ್ರೆ, ಜಾರ್ಜಿನಾ ಡೆಂಪ್ಸೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications